• Home
  • »
  • News
  • »
  • state
  • »
  • Voter ID Controversy: ಮತದಾರರ ವೈಯಕ್ತಿಕ ವಿವರ ಸಂಗ್ರಹ ಆರೋಪ; ಕೇಂದ್ರ ಚುನಾವಣಾ ಆಯೋಗದ ಸ್ಪಷ್ಟನೆ

Voter ID Controversy: ಮತದಾರರ ವೈಯಕ್ತಿಕ ವಿವರ ಸಂಗ್ರಹ ಆರೋಪ; ಕೇಂದ್ರ ಚುನಾವಣಾ ಆಯೋಗದ ಸ್ಪಷ್ಟನೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಸರ್ಕಾರೇತರ ಸಂಸ್ಥೆ ಚಿಲುಮೆಗೆ ನೀಡಿದ್ದ ಅನುಮತಿಯನ್ನು ರದ್ದು ಮಾಡಲಾಗಿದೆ. ಮತದಾರರ ಜಾಗೃತಿ ಅಭಿಯಾನದ ಬಗ್ಗೆ ಅರಿವು ಮೂಡಿಸಲು ಅನುಮತಿ ಕೊಡಲಾಗಿತ್ತು

  • News18 Kannada
  • Last Updated :
  • Karnataka, India
  • Share this:

ಬಿಜೆಪಿ ಸರ್ಕಾರ (BJP Government) ಮತದಾರರ ವೈಯಕ್ತಿಕ ಮಾಹಿತಿಯನ್ನು (Voters Details) ಸಂಗ್ರಹ ಮಾಡುತ್ತಿದೆ ಎಂದು ಕಾಂಗ್ರೆಸ್ (Congress) ಆರೋಪಿಸಿದೆ. ಇದೀಗ ಕಾಂಗ್ರೆಸ್ ಆರೋಪದ ಬೆನ್ನಲ್ಲೇ ಮುಖ್ಯ ಚುನಾವಣಾಧಿಕಾರಿ (Chief Electoral Officer) ಮನೋಜ್ ಕುಮಾರ್ ಮೀನಾ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲಾ ಚುನಾವಣಾಧಿಕಾರಿ, ಬಿಬಿಎಂಪಿ (BBMP) ಯಾವುದೇ ಸಂಸ್ಥೆಗೆ ಸಮೀಕ್ಷೆ (Survey) ನಡೆಸಲು ಅನುಮತಿ ಕೊಟ್ಟಿಲ್ಲ. ಸರ್ಕಾರೇತರ ಸಂಸ್ಥೆ ಚಿಲುಮೆಗೆ ನೀಡಿದ್ದ ಅನುಮತಿಯನ್ನು ರದ್ದು ಮಾಡಲಾಗಿದೆ. ಮತದಾರರ ಜಾಗೃತಿ ಅಭಿಯಾನದ ಬಗ್ಗೆ ಅರಿವು ಮೂಡಿಸಲು ಅನುಮತಿ ಕೊಡಲಾಗಿತ್ತು. ದೂರು ಬಂದ ತಕ್ಷಣ ಬಿಬಿಎಂಪಿ (BBMP) ಚುನಾವಣಾಧಿಕಾರಿ ಅನುಮತಿ ರದ್ದು ಮಾಡಲಾಗಿದೆ ಎಂದು ತಿಳಿಸಿದರು.


ಬೂತ್ ಮಟ್ಟದ ಅಧಿಕಾರಿ ಗುರುತಿನ ಚೀಟಿ ದುರುಪಯೋಗ ಕುರಿತು ಮಹದೇವಪುರದಲ್ಲಿ ದೂರು ದಾಖಲಿಸಲಾಗಿದೆ. ಆ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ ಎಂದು ಮನೋಜ್ ಕುಮಾರ್ ಮೀನಾ ಸ್ಪಷ್ಟಪಡಿಸಿದ್ದಾರೆ.


ತನಿಖೆ ನಡೆಸಲು ಸೂಚನೆ


ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಚುನಾವಣಾ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ತನಿಖೆ ನಡೆಸಲಾಗುವುದು. ತನಿಖೆ ನಡೆಸಿ ಕ್ರಮ ‌ಜರುಗಿಸಲು ಬಿಬಿಎಂಪಿ ಚುನಾವಣಾಧಿಕಾರಿಗೆ ಸೂಚನೆ‌ ಕೊಡಲಾಗಿದೆ ಎಂದು ಮನೋಜ್ ಕುಮಾರ್ ಮೀನಾ ಮಾಧ್ಯಮ ಪ್ರಕಟನೆ ಹೊರಡಿಸಿದ್ದಾರೆ.


ಚಿಲುಮೆ ಸಂಸ್ಥೆ ವಿರುದ್ಧ ತನಿಖೆಗೆ ಮುಂದಾದ ಬಿಬಿಎಂಪಿ


ಮತದಾರ ಮಾಹಿತಿ ಸಂಗ್ರಹ ಆರೋಪ ಹಿನ್ನೆಲೆ ಚಿಲುಮೆ ಸಂಸ್ಥೆ ವಿರುದ್ಧ ಬಿಬಿಎಂಪಿ ತನಿಖೆಗೆ ಮುಂದಾಗಿದೆ. ಚಿಲುಮೆ ಸಂಸ್ಥೆಗೆ ಜಾಗೃತಿ ಮೂಡಿಸೋದಕ್ಕೆ ಅನುಮತಿ ನೀಡಲಾಗಿತ್ತು. ಡೇಟಾ ಕಲೆಕ್ಟ್ ಮಾಡಿ ಅಂತಾ ಅನುಮತಿ ಕೊಟ್ಟಿರಲಿಲ್ಲ. ಆದರೆ ಡೇಟಾ ಕಲೆಕ್ಟ್ ಮಾಡ್ತಾ ಇದ್ದಾರೆ ಅಂತಾ ದೂರು ದಾಖಲಾಗಿದೆ.  ಹೀಗಾಗಿ ನಾವು ಅವರಿಗೆ ನೀಡಿದ್ದ ಅನುಮತಿಯನ್ನ ಕ್ಯಾನ್ಸಲ್ ಮಾಡಿದ್ದೇವೆ ಎಂದು ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ರಂಗಪ್ಪ ಹೇಳಿದ್ದಾರೆ.


ಇದನ್ನೂ ಓದಿ: Congress: ಸರ್ಕಾರ, ಬಿಬಿಎಂಪಿಯಿಂದ ಮತದಾರರ ಮಾಹಿತಿ ಕಳ್ಳತನ; ಕಾಂಗ್ರೆಸ್ ಆರೋಪ


ವೋಟರ್ ಐಡಿ ಆಧಾರ್​​ಗೆ ಲಿಂಕ್


ಬಿಬಿಎಂಪಿ ವ್ಯಾಪ್ತಿಯ 28 ವಿಧಾನ ಸಭಾ ಕ್ಷೇತ್ರದಲ್ಲಿ 26% ಮಾತ್ರ ವೋಟರ್ ಐಡಿ ಆಧಾರ್​​ಗೆ ಲಿಂಕ್ ಆಗಿದೆ. ರಾಜ್ಯಾದ್ಯಂತ 60% ವೋಟರ್ ಐಡಿ ಆಧಾರ್ ಲಿಂಕ್ ಆಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ  ಅಧಾರ್ ಕಾರ್ಡ್ 26% ಅಷ್ಟೇ ಆಗಿದೆ. ಬಿಬಿಎಂಪಿ ಬಿಎಲ್ಓಗಳು ಮಾಹಿತಿ ಕಲೆ ಹಾಕಿದ್ದಾರೆ.


ಚಿಲುಮೆ ಸಂಸ್ಥೆಯವರು ಮಾಹಿತಿ ಕಲೆ ಹಾಕಿದ್ದಾರೆ ಎಂಬ ಆರೋಪ ಬಂದಿದೆ. ಚಿಲುಮೆ ಸಂಸ್ಥೆ ವಿರುದ್ಧ ನಾವು ತನಿಖೆ ಮಾಡಿಸುತ್ತೇವೆ. ತನಿಖೆ ಮಾಡಿಸಿ ಡೇಟಾ ಕಲೆಕ್ಟ್ ಮಾಡಿದ್ದಾರಾ ಇಲ್ವ ಅಂತಾ ಪತ್ತೆ ಮಾಡಲಾಗುವುದು. ಮತದಾರ ಮಾಹಿತಿ, ಆಧಾರ್ ಲಿಂಕ್ ಕೇಂದ್ರ ಚುನಾವಣಾ ಆಯೋಗಕ್ಕೆ ಮಾತ್ರ ಮಾಹಿತಿ ಹೋಗುತ್ತದೆ. ಕೇಂದ್ರ ಚುನಾವಣಾ ಆಯೋಗಕ್ಕೆ ಬಿಟ್ಟು ಬೇರೆ ಎಲ್ಲೂ ಮಾಹಿತಿ ಲೀಕ್ ಆಗಲ್ಲ. ಚಿಲುಮೆ ಸಂಸ್ಥೆಯವರಿಂದ ಅಕ್ರಮ ಆಗಿದ್ರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಂಗಪ್ಪ ಸ್ಪಷ್ಟಪಡಿಸಿದರು.


ಚಿಲುಮೆ ಸಂಸ್ಥೆ  ವಿರುದ್ಧ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರು ನಗರ ಪೊಲೀಸ್ ಆಯಕ್ತರಿಗೆ ದೂರು ಸಲ್ಲಿಕೆ ಮಾಡಲು ನಿರ್ಧರಿಸಿದ್ದಾರೆ.


ಇದನ್ನೂ ಓದಿ:  Voter ID Controversy: ಮತದಾರರ ಮಾಹಿತಿ ಕಳವು; ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಪ್ರತಿಕ್ರಿಯೆ


ಕಾಂಗ್ರೆಸ್​​ನಿಂದ ದೂರು ದಾಖಲು


ಮತದಾರ ಪಟ್ಟಿ ಪರಿಷ್ಕರಣೆ ವಿಚಾರ ಖಾಸಗಿ ವ್ಯಕ್ತಿಗಳು ಡೇಟಾ ಕಲೆಕ್ಟ್ ಮಾಡ್ತಾರೆ ಅಂತ ಕಾಂಗ್ರೆಸ್​​ನವರು ದೂರು ಕೊಟ್ಟಿದ್ದಾರೆ. ಪೀಪಲ್ಸ್ ರೆಪ್ರೆಸೆಂಟೇಟಿವ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ. ಕಾನೂನು ಸಲಹೆ ಪಡೆದು ಕ್ರಮ ಕೈಗೊಳ್ಳಲಾಗುತ್ತೆ ಪೊಲೀಸ್ ಕಮೀಷರ್ ಪ್ರತಾಪ್ ರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Published by:Mahmadrafik K
First published: