ಬೆಂಗಳೂರು (ನ.22): ಮತದಾರರ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ಆರೋಪಿಯನ್ನು (Accused) ಪೊಲೀಸರು ಬಂಧಿಸಿದ್ದಾರೆ. ಹಲಸೂರು ಗೇಟ್ ಪೊಲೀಸರು (Police) ಆರೋಪಿ ಲೋಕೇಶ್ನನ್ನು (Lokesh) ಬಂಧಿಸಿದ್ದಾರೆ. ಈತ ಪ್ರಕರಣದ ಪ್ರಮುಖ ಆರೋಪಿ ರವಿಕುಮಾರ್ (Ravikumar) ಆಪ್ತನಾಗಿದ್ದಾರೆ. ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹ ಹಾಗೂ ದುರ್ಬಳಕೆ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ.
ಅರೋಪಿ ಬಂಧಿಸಿ ವಿಚಾರಣೆ
ಈ ಬಗ್ಗೆ ಮಾತನಾಡಿದ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ (Srinivas gowda) ಪ್ರಕರಣ ಸಂಬಂಧ ಮತ್ತೊಬ್ಬನನ್ನು ಬಂಧಿಸಲಾಗಿದೆ. ಈಗಾಗಲೇ ಕಾಡುಗೋಡಿ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ 2 ಎಫ್ಐಆರ್ (FIR) ದಾಖಲಾಗಿದ್ದವು. ಆತನನ್ನ ಬಂಧಿಸಿ ಒಂದು ಸುತ್ತು ವಿಚಾರಣೆ ಮಾಡಲಾಗಿದೆ. ಹೆಚ್ಚಿನ ವಿಚಾರಣೆ ಮಾಡಲಾಗ್ತಿದೆ. ಈತ ಕೇಸ್ ನ ಮುಖ್ಯ ಆರೋಪಿ ರವಿಕುಮಾರ್ ಆಪ್ತನಾಗಿದ್ದ. ಸದ್ಯ ಹೆಚ್ಚಿನ ತನಿಖೆ ಮುಂದುವರೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಮತದಾರರ ಡೇಟಾ ಕಳ್ಳತನದ ಹಗರಣ ಏನು?
2018 ರಲ್ಲಿ, ಬೆಂಗಳೂರಿನ ನಾಗರಿಕ ಸಂಸ್ಥೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮತದಾರರ ಜಾಗೃತಿಗಾಗಿ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣೆಯಲ್ಲಿ ಸಕ್ರಿಯ ಪಾಲುದಾರಿಕೆ (SVEEP) ಬಗ್ಗೆ ಜಾಗೃತಿ ಮೂಡಿಸಲು ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ, NGO ಗೆ ಅನುಮತಿ ನೀಡಿದೆ. ಹೀಗಿರುವಾಗ ಅವರು 2018 ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕಾಗಿತ್ತು. ಹೀಗಿರುವಾಗ ತಾವು ಈ ಸಮೀಕ್ಷೆಯನ್ನು ಉಚಿತವಾಗಿ ನಡೆಸುವುದಾಗಿ ಎನ್‌ಜಿಒ ಹೇಳಿಕೊಂತ್ತು.
ಆದರೆ ನಂತರ, ನಿಯೋಜಿತ ಕ್ಷೇತ್ರ ಕಾರ್ಯಕರ್ತರು ಜಾತಿ, ವಯಸ್ಸು, ಲಿಂಗ, ಉದ್ಯೋಗ, ಶಿಕ್ಷಣ ವಿವರಗಳು, ಆಧಾರ್ ಸಂಖ್ಯೆ, ಫೋನ್ ಸಂಖ್ಯೆ, ಮತದಾರರ ಗುರುತಿನ ಸಂಖ್ಯೆಗಳು ಮತ್ತು ಇಮೇಲ್ ವಿಳಾಸಗಳನ್ನು ಒಳಗೊಂಡಂತೆ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿದರು. ಸಂಸ್ಥೆಯು ಅಕ್ರಮವಾಗಿ ಸಂಗ್ರಹಿಸಿದ ಈ ಡೇಟಾವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು INC ಆರೋಪಿಸಿದೆ. ನಗರದಲ್ಲಿ ಚುನಾವಣೆ ಗೆಲ್ಲಲು ಬಿಜೆಪಿ ನಾಯಕರಿಗೆ ಅನುಕೂಲ ಮಾಡಿಕೊಡಲು ಹಲವು ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಅದು ಹೇಳಿದೆ. ಆದರೆ ಇತ್ತ ಬಿಬಿಎಂಪಿ ಒಬ್ಬ ವ್ಯಕ್ತಿ ಅನೇಕ ಸ್ಥಳಗಳಲ್ಲಿ ಮತದಾನ ಮಾಡದಂತೆ ತಡೆಯಲು 6.73 ಲಕ್ಷ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಹೇಳಿದೆ.
ಪೊಲೀಸ್ ಮೂಲಗಳ ಪ್ರಕಾರ, ಪ್ರಮುಖ ಮಾಹಿತಿಯು ಬಹಳಷ್ಟು ವಾಣಿಜ್ಯ ಮೌಲ್ಯವನ್ನು ಹೊಂದಿದೆ ಮತ್ತು ರಾಜಕೀಯ ಪಕ್ಷಗಳು ಮತ್ತು ಖಾಸಗಿ ಸಂಸ್ಥೆಗಳು ಅದನ್ನು ಹಿಡಿಯಲು ದೊಡ್ಡ ಮೊತ್ತವನ್ನು ಪಾವತಿಸಲು ಆಸಕ್ತಿ ವಹಿಸುತ್ತವೆ ಎನ್ನಲಾಗಿದೆ.
ಇದನ್ನೂ ಓದಿ: Voters Data Steal: ದುಡ್ಡು ಕೊಟ್ರೆ ಮತದಾರನ ಮಾಹಿತಿ, ರವಿಕುಮಾರ್ ಸೋದರನ ಬಂಧನವೇ ರೋಚಕ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ