• Home
  • »
  • News
  • »
  • state
  • »
  • VR Sudarshan Resign: ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ವಿ ಆರ್ ಸುದರ್ಶನ್ ರಾಜೀನಾಮೆ, ಕಾರಣ ಏನು?

VR Sudarshan Resign: ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ವಿ ಆರ್ ಸುದರ್ಶನ್ ರಾಜೀನಾಮೆ, ಕಾರಣ ಏನು?

ಆರ್​ ವಿ​ ಸುದರ್ಶನ್​ ರಾಜೀನಾಮೆ

ಆರ್​ ವಿ​ ಸುದರ್ಶನ್​ ರಾಜೀನಾಮೆ

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪರವಾಗಿ ಪ್ರಚಾರ ಮಾಡಲು ಸುದರ್ಶನ್ ಅವರು ತಮ್ಮ ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

  • Share this:

ಬೆಂಗಳೂರು: ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ವಿ.ಆರ್ ಸುದರ್ಶನ್ (VR Sudarshan) ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಇಂದು(ಅ.04) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಗೆ ಕಳುಹಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪರವಾಗಿ ಪ್ರಚಾರ ಮಾಡಲು ಸುದರ್ಶನ್ ಅವರು ತಮ್ಮ ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ( KPCC chief Spokesperson Post) ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.


ಸುದರ್ಶನ್ ರಾಜೀನಾಮೆಗೆ ಕಾರಣ


ಕಾಂಗ್ರೆಸ್​ ಪಕ್ಷದಲ್ಲಿ ಪ್ರಮುಖ ಜವಾಬ್ದಾರಿ ಹೊತ್ತಿರುವ ಪಕ್ಷದ ನಾಯಕರು ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತಿಲ್ಲ. ಪ್ರಚಾರ ಮಾಡಲೇಬೇಕು ಎಂದು ಬಯಸಿದ್ರೆ, ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿ ಪ್ರಚಾರದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ.


ಖರ್ಗೆ v/s ಶಶಿ ತರೂರ್​


ಈಗಾಗಲೇ ಮಲ್ಲಿಕಾರ್ಜುನ ಅವರ ವಿರುದ್ಧ ಮತ್ತೋರ್ವ ಕಾಂಗ್ರೆಸ್ ಹಿರಿಯ ನಾಯಕ ಶಶಿತರೂರ್ ಅಧ್ಯಕ್ಷೀಯ ಚುನಾವಣೆಯ ಅಖಾಡದಲ್ಲಿದ್ದಾರೆ. ಇದರಿಂದ ಪಕ್ಷದ ಒಂದು ಹುದ್ದೆಯಲ್ಲಿದ್ದುಕೊಂಡು ಓರ್ವ ಅಭ್ಯರ್ಥಿ ಪರ ಕೆಲಸ ಅಥವಾ ಪ್ರಚಾರ ಮಾಡುವಂತಿಲ್ಲ. ಆದ್ದರಿಂದ ಸುದರ್ಶನ್ ಅವರು ಖರ್ಗೆ ಪರ ಕ್ಯಾಂಪೇನ್ ಮಾಡಲು ತಮ್ಮ ಮುಖ್ಯ ವಕ್ತಾರ ಸ್ಥಾನಕ್ಕೆ ರಿಸೈನ್ ಮಾಡಿದ್ದಾರೆ.


VR Sudarshan resigns as KPCC Chief Spokesperson
ವಿ.ಆರ್ ಸುದರ್ಶನ್ ರಾಜೀನಾಮೆ


ಗಾಂಧಿ ಕುಟುಂಬದ ಕ್ಯಾಂಡಿಟೇಟ್‌ ಖರ್ಗೆ?


ಮಲ್ಲಿಕಾರ್ಜುನ ಖರ್ಗೆ ದೇಶದ ರಾಜಕೀಯದಲ್ಲಿ ದೊಡ್ಡ ಹೆಸರು. ಅದರಲ್ಲೂ ಈ ಹಿಂದೆ ಕೇಂದ್ರ ಸರ್ಕಾರದಲ್ಲಿ ಹಲವು ಹುದ್ದೆಗಳನ್ನು ನಿರ್ವಹಿಸಿದ ಅನುಭವವವೂ ಇದೆ. ಜೊತೆಗೆ ಹಿಂದಿನಿಂದಲೂ ಖರ್ಗೆ ಗಾಂಧಿ ಕುಟುಂಬದ ಆಪ್ತರಲ್ಲಿ ಒಬ್ಬರು. ಹೀಗಾಗಿ ಗಾಂಧಿ ಫ್ಯಾಮಿಲಿ ಸಲಹೆಯಂತೆ ಮಲ್ಲಿಕಾರ್ಜುನ್ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ ಎನ್ನಲಾಗುತ್ತಿದೆ.


ಇದನ್ನೂ ಓದಿ: HDK-KCR: ನಾಳೆ ರಾಷ್ಟ್ರೀಯ ಪಕ್ಷ ಘೋಷಿಸಲಿದ್ದಾರೆ ಕೆಸಿಆರ್​; ಶಾಸಕರ ಜೊತೆ ಹೈದ್ರಾಬಾದ್​ನಲ್ಲಿ ಕುಮಾರಸ್ವಾಮಿ


ಧನ್ಯವಾದ ಅರ್ಪಿಸಿದ ಖರ್ಗೆ


ಪಕ್ಷದಲ್ಲಿ ದೊಡ್ಡ ಬದಲಾವಣೆಗಾಗಿ ಹೋರಾಡುತ್ತಿರುವುದಾಗಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅಲ್ಲದೆ ಎಲ್ಲ ಪ್ರತಿನಿಧಿಗಳು ತಮಗೆ ಮತ ನೀಡುವಂತೆ ಮನವಿ ಮಾಡಿದರು. ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದ್ದಕ್ಕಾಗಿ ಎಲ್ಲಾ ರಾಜ್ಯಗಳ ಹಿರಿಯ ನಾಯಕರಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದು ಖರ್ಗೆ ಅವರು ನಾಮಪತ್ರ ಸಲ್ಲಿಸಿದ ನಂತರ ಎಐಸಿಸಿ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದರು.


ಸ್ಪರ್ಧೆಯಿಂದ ಹಿಂದೆ ಸರಿದ ದಿಗ್ವಿಜಯ್ ಸಿಂಗ್


ಇನ್ನು ಮತ್ತೋರ್ವ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಕೂಡ ಸ್ಪರ್ಧೆಗೆ ಒಲವು ತೋರಿದ್ದರು. ಆದರೆ ಕೊನೆ ಕ್ಷಣದಲ್ಲಿ ಹಿಂದೆ ಸರಿದಿದ್ದಾರೆ. ಶುಕ್ರವಾರ ಬೆಳಿಗ್ಗೆ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದರು. ಗುರುವಾರ ಅವರು ನಾಮಪತ್ರ ಪಡೆದ ನಂತರ ಶಶಿ ತರೂರ್ ಅವರನ್ನೂ ಭೇಟಿ ಮಾಡಿದ್ದರು. ಆದರೆ ಗಾಂಧಿ ಕುಟುಂಬದ ಅಭ್ಯರ್ಥಿಯಾಗಿ ಖರ್ಗೆ ಅವರ ಆಯ್ಕೆ ಖಚಿತವಾದ ನಂತರ ಸಿಂಗ್ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕಿದ್ದಾರೆ.


ಇದನ್ನೂ ಓದಿ: Siddaramaiah: ಪರೇಶ್‌ ಮೇಸ್ತ ಕೇಸ್‌ನಲ್ಲಿ ಬಿಜೆಪಿ ವಿರುದ್ಧ ಗುಡುಗು! ನ್ಯೂಸ್ 18 ಕನ್ನಡ ವರದಿ ಟ್ವೀಟ್ ಮಾಡಿದ ಸಿದ್ದರಾಮಯ್ಯ


ಅ. 17ರಂದು ಚುನಾವಣೆ


ಇದೀಗ ಶಶಿ ತರೂರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ನಡುವೆ ಭಾರೀ ಪೈಪೋಟಿ ನಡೆಯುವ ನಿರೀಕ್ಷೆಯಿದೆ. ಗಾಂಧಿ ಕುಟುಂಬದ ಹಾಗೂ ಕಾಂಗ್ರೆಸ್ ಹಿರಿಯರ ಗುಂಪಿನ ಅಭ್ಯರ್ಥಿಯಾಗಿ ಖರ್ಗೆ ಕಣಕ್ಕಿಳಿದಿದ್ದಾರೆ. ಮತ್ತೊಂದೆಡೆ  ಜಿ-23 ಬಣದ ಭಿನ್ನಮತೀಯ ನಾಯಕರ ಜತೆ ಗುರುತಿಸಿಕೊಂಡಿರುವ ಶಶಿ ತರೂರ್ ಕಣದಲ್ಲಿದ್ದಾರೆ.  ಶಶಿ ತರೂರ್ ನಾಮಪತ್ರ ವಾಪಸ್ ಪಡೆದುಕೊಳ್ಳದೆ ಇದ್ದರೆ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅ. 17ರಂದು ಚುನಾವಣೆ ನಡೆಯುವುದು ಅನಿವಾರ್ಯವಾಗಲಿದೆ.

Published by:ಪಾವನ ಎಚ್ ಎಸ್
First published: