H D Kumaraswamy: ಮುಂದುವರೆದ ಮಾಜಿ ಸಿಎಂಗಳ ವಾಕ್ ಪ್ರಹಾರ, ಸಿದ್ಧರಾಮಯ್ಯ ‘ಸುಳ್ಳಿನ ಸಿದ್ಧಪುರುಷ’ ಎಂದ ಎಚ್ಡಿಕೆ

ಸಿದ್ದರಾಮಯ್ಯ ವಿರುದ್ಧ ಟೀಕಿಸಿರುವ ಎಚ್.ಡಿ.ಕೆ. ನಿಜ, ಚುನಾವಣೆಯಲ್ಲಿ ನಮ್ಮ ತಂದೆ ಸೋತಿದ್ದಾರೆ. ನನ್ನ ಅಣ್ಣ ಸೋತಿದ್ದಾರೆ, ನಾನೂ ಸೋತಿದ್ದೇನೆ. ಸೋತ ಮೇಲೆ ನಾವ್ಯಾರೂ ಅಧೀರರಾಗಿಲ್ಲ, ಸೋತಿದ್ದಕ್ಕೆ ನಾವು ಕಣ್ಣೀರು ಹಾಕಿಲ್ಲ. ಸಿದ್ದಹಸ್ತರ ಕಣ್ಣೀರ ಕೋಡಿಯನ್ನು ಕಂಡ ದೇವೇಗೌಡರು ಇನ್ನೂ ನಮ್ಮ ಜತೆ ಇದ್ದಾರೆ.

ಎಚ್ಡಿಕೆ-ಸಿದ್ಧರಾಮಯ್ಯ

ಎಚ್ಡಿಕೆ-ಸಿದ್ಧರಾಮಯ್ಯ

  • Share this:
    ಕರ್ನಾಟಕದ (Karnataka) ಇಬ್ಬರು ಮಾಜಿ ಸಿಎಂಗಳ ನಡುವಿನ ಗುದ್ದಾಟ ಮುಂದುವರೆದಿದೆ. ಜೆಡಿಎಸ್ (JDS) ಪಕ್ಷವನ್ನು ಟೀಕಿಸಿದ್ದಕ್ಕೆ ಸಿದ್ದರಾಮಯ್ಯ (Siddaramaiah) ವಿರುದ್ಧ ಎಚ್.ಡಿ.ಕುಮಾರಸ್ವಾಮಿ (H.D.Kumaraswamy) ಕಿಡಿಕಾರಿದ್ದಾರೆ. ಸರಣಿ ಟ್ವೀಟ್ (Tweet) ಮಾಡಿರುವ ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಸ್ವಯಂ ಘೋಷಿತ ಸಂವಿಧಾನ ಪಂಡಿತ ಅಂತ ಸಿದ್ದರಾಮಯ್ಯನವರನ್ನು ಟೀಕಿಸಿದ್ದಾರೆ. ಸುಳ್ಳಿನ ಸಿದ್ದಪುರುಷ” ಅಂತ ಟ್ವೀಟರ್ ನಲ್ಲೇ ಎಚ್,ಡಿ.ಕೆ. ಟೀಕಿಸಿದ್ದಾರೆ. ಇಂದು ಸರಣಿ ಟ್ವೀಟ್ ಮಾಡಿರುವ ಎಚ್.ಡಿ. ಕುಮಾರಸ್ವಾಮಿ, " ಸ್ವಯಂ ಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ ನಮ್ಮ ಪಕ್ಷ ಮತ್ತು ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ? ಆ ಯೋಗ್ಯತೆ ಅವರಿಗಿಲ್ಲ” ಅಂತ ನೇರಾ ನೇರ ಟೀಕಿಸಿದ್ದಾರೆ. 9 ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಿದ್ದರಾಮಯ್ಯನವರ ವಿರುದ್ಧ ಹರಿಹಾಯ್ದಿದ್ದಾರೆ.

    ಸಿದ್ದರಾಮಯ್ಯ ವಿರುದ್ಧ ಎಚ್.ಡಿ.ಕೆ. ಟ್ವೀಟ್ ಪ್ರಹಾರ

    ತುಮಕೂರಿನಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಜೆಡಿಎಸ್ ಅನ್ನೋದು ಬಿಜೆಪಿಯ ‘ಬಿ ಟೀಂ’ ಅಂತ ಟೀಕಿಸಿದ್ದರು. ಜೆಡಿಎಸ್ ಪಕ್ಷ ಅನ್ನುವುದು ಸಿದ್ಧಾಂತವಿಲ್ಲದ ಪಾರ್ಟಿ ಅಂತ ಟೀಕಿಸಿದ್ದರು. ಒಂದಿನ ಬಿಜೆಪಿ ಜೊತೆ ಇರುತ್ತಾರೆ, ಮತ್ತೆ ಕೆಲವೇ ದಿನಗಳಲ್ಲಿ ಜೆಡಿಎಸ್ ಬೇರೆ ಪಕ್ಷದೊಂದಿಗೆ ಹೋಗುತ್ತದೆ. ಹೀಗಾಗಿ ತುಮಕೂರಿನಿಂದ ಜೆಡಿಎಸ್ ಅನ್ನು ಕಿತ್ತೊಗೆಯಿರಿ ಅಂತ ಕರೆಕೊಟ್ಟಿದ್ದರು.

    ಸಿದ್ದರಾಮಯ್ಯ ಹೇಳಿಕೆಯಿಂದ ಆಕ್ರೋಶಗೋಂಡಿರುವ ಎಚ್.ಡಿ. ಕುಮಾರಸ್ವಾಮಿ, “ನಮ್ಮ ಪಕ್ಷದಿಂದ ಎಗರಿಸಿಕೊಂಡು ಹೋದ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ನಮ್ಮ ಪಕ್ಷದ ಬಗ್ಗೆ ಏಕೆ ಮಾತನಾಡಬೇಕು? ಜೆಡಿಎಸ್ ಪಕ್ಷವನ್ನು ತುಮಕೂರಿನಿಂದ ಓಡಿಸಿ ಎಂದಿದ್ದು ಯಾವ ಸಂಸ್ಕೃತಿ? ಪ್ರಜಾಪ್ರಭುತ್ವದಲ್ಲಿ ಒಂದು ಜಿಲ್ಲೆಯಿಂದಲೇ ಒಂದು ಪಕ್ಷವನ್ನು ಓಡಿಸಿ ಎನ್ನುವುದು ಎಂಥಾ ರಾಜಕಾರಣ? ಲಂಗು ಲಗಾಮು ಇಲ್ಲದೆ ನಾಲಿಗೆ ಜಾರುವ ಇಂಥ ಜನರಿಂದ ನಾನು ಭಾಷೆ, ಸಂಸ್ಕೃತಿ ಬಗ್ಗೆ ಕಲಿಯಬೇಕಿಲ್ಲ ಅಂತ ಕಟುವಾಗಿ ಟೀಕಿಸಿದ್ದಾರೆ.





    'ಸುಳ್ಳಿನ ಸಿದ್ದಪುರುಷ'ನಿಂದ ಭಾಷೆ-ಸಂಸ್ಕೃತಿ ಕುರಿತು ಪಾಠವೇ?

    ಮುಂದುವರೆದು ಟ್ವೀಟ್ ಮಾಡಿರುವ ಎಚ್.ಡಿ.ಕೆ., “ಸಿದ್ದರಾಮಯ್ಯ ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ ಅನ್ನುತ್ತಾರೆ, ಆದರೆ ಮಾತೆತ್ತಿದರೆ ಕುಮಾರಸ್ವಾಮಿಯದ್ದೇ ಜಪ! ಜತೆಗೆ ಜೆಡಿಎಸ್ ಬಗ್ಗೆ ವಿಷ ಕಾರುವುದು ಸುಳ್ಳಾ? ಅವರ ಹೇಳಿಕೆಗಳನ್ನು ಇಡೀ ರಾಜ್ಯವೇ ಕೇಳಿಸಿಕೊಂಡಿದೆ. ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ! ಅಂತಾರೆ. ಇದು ಭ್ರಮೆಯ ಪರಮಾವಧಿ. ಮತ್ತೆ ಸಿಎಂ ಆಗಲ್ಲ ಎಂದು ಖಚಿತವಾದ ಮೇಲೆ ಹತಾಶೆ, ಅಸಹನೆಯ ಬೆಂಕಿಯಲ್ಲಿ ಬೇಯುತ್ತಿದ್ದಾರೆ, ಪಾಪ ಅಂತ ವ್ಯಂಗ್ಯವಾಡಿದ್ದಾರೆ.

    ಇದನ್ನೂ ಓದಿ: H D Kumaraswamy: ನನಗೆ 20 ವರ್ಷ ಅಧಿಕಾರ ಬೇಡ, ಬರೀ 5 ವರ್ಷ ಅವಕಾಶ ಕೊಟ್ಟು ನೋಡಿ

    “ಅರ್ಕಾವತಿ ಕಣ್ಣೀರಿನ ಕಥೆಯೇನು ಸಿದ್ದರಾಮಯ್ಯನವರೇ”

    ಸಿದ್ದರಾಮಯ್ಯ ವಿರುದ್ಧ ಟೀಕಿಸಿರುವ ಎಚ್.ಡಿ.ಕೆ. ನಿಜ, ಚುನಾವಣೆಯಲ್ಲಿ ನಮ್ಮ ತಂದೆ ಸೋತಿದ್ದಾರೆ. ನನ್ನ ಅಣ್ಣ ಸೋತಿದ್ದಾರೆ, ನಾನೂ ಸೋತಿದ್ದೇನೆ. ಸೋತ ಮೇಲೆ ನಾವ್ಯಾರೂ ಅಧೀರರಾಗಿಲ್ಲ, ಸೋತಿದ್ದಕ್ಕೆ ನಾವು ಕಣ್ಣೀರು ಹಾಕಿಲ್ಲ. ಸಿದ್ದಹಸ್ತರ ಕಣ್ಣೀರ ಕೋಡಿಯನ್ನು ಕಂಡ ದೇವೇಗೌಡರು ಇನ್ನೂ ನಮ್ಮ ಜತೆ ಇದ್ದಾರೆ. ಇನ್ನು ಕಮೀಷನ್ ವ್ಯವಹಾರದಲ್ಲಿ ನಾನು ನೀಟ್, ಕ್ಲೀನ್ ಎನ್ನುತ್ತಿದ್ದಾರೆ ಪ್ರತಿಪಕ್ಷ ನಾಯಕರು. ಐದು ವರ್ಷ ಸಿಎಂ ಆಗಿದ್ದರೂ ನಾನು ಕ್ಲೀನ್ ಎಂದು ಕೊಚ್ಚಿಕೊಳ್ಳುತ್ತಿದ್ದಾರೆ.

    ಹಾಗಾದರೆ, ಇವತ್ತಿಗೂ ಕೇಳಿಸುತ್ತಿರುವ ' ಅರ್ಕಾವತಿ ' ಆರ್ತನಾದಕ್ಕೆ ಕಾರಣರು ಯಾರು? ಈ ಸತ್ಯ ಆಚೆ ಬಿದ್ದರೆ ಆ ಸಿದ್ದಹಸ್ತರು ಮುಖವನ್ನು ಎಲ್ಲಿ ಇಟ್ಟುಕೊಳ್ಳುತ್ತಾರೆ? ಅಂತ ಖಾರವಾಗಿ ಪ್ರಶ್ನಿಸಿದ್ದಾರೆ. ಸದ್ಯ ಮಾಜಿ ಮುಖ್ಯಮಂತ್ರಿಗಳಿಬ್ಬರ ನಡುವಿನ ವಾಕ್ಸಮರ ಮುಂದುವರೆಯುತ್ತವೇ ಇದೆ. ಇದೀಗ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಅನ್ನೋ ಕುತೂಹಲ ಮೂಡಿದೆ.
    Published by:Soumya KN
    First published: