HOME » NEWS » State » WATER CONNECTION TO 25 LAKH RURAL HOUSEHOLDS THIS YEAR UNDER JALJEEVAN MISSION RHHSN

ಜಲಜೀವನ್ ಮಿಷನ್ ಯೋಜನೆಯಡಿ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ

ರಾಜ್ಯದಲ್ಲಿ ಈ ವರೆಗೆ 435 ಬಹುಗ್ರಾಮ ಯೋಜನೆಗಳು ಪೂರ್ಣಗೊಂಡಿವೆ. 69 ಯೋಜನೆಗಳು ಪ್ರಗತಿಯಲ್ಲಿದ್ದು, 30 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, 2021-22ನೇ ಸಾಲಿನಲ್ಲಿ 161 ಯೋಜನೆಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

news18-kannada
Updated:June 22, 2021, 8:11 PM IST
ಜಲಜೀವನ್ ಮಿಷನ್ ಯೋಜನೆಯಡಿ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಜೂನ್ 22): ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕ್ರಿಯಾತ್ಮಕ ನಳಗಳ ಸಂಪರ್ಕ ಒದಗಿಸಲಾಗಿದೆ. 2021-22ರಲ್ಲಿ 25.17 ಲಕ್ಷ ಮನೆಗಳಿಗೆ ಸಂಪರ್ಕ ಒದಗಿಸುವ ಗುರಿಯನ್ನು ನಿಗದಿತ ಕಾಲಮಿತಿಯಲ್ಲಿ ಸಾಧಿಸುವಂತೆ ನಿರ್ದೇಶನ ನೀಡಿದರು.

ರಾಜ್ಯದಲ್ಲಿ ಈ ವರೆಗೆ 435 ಬಹುಗ್ರಾಮ ಯೋಜನೆಗಳು ಪೂರ್ಣಗೊಂಡಿವೆ. 69 ಯೋಜನೆಗಳು ಪ್ರಗತಿಯಲ್ಲಿದ್ದು, 30 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, 2021-22ನೇ ಸಾಲಿನಲ್ಲಿ 161 ಯೋಜನೆಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ರಾಜ್ಯದಲ್ಲಿ ನದಿ ಮೂಲದಿಂದ ನೀರು ದೊರೆಯುವ ಸ್ಥಳದಲ್ಲಿ ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಯೋಜನೆ ಪ್ರಧಾನ ಮಂತ್ರಿಯವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ನಿಗದಿತ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಿ. ಈ ಕುರಿತು ಎಲ್ಲ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನು ಓದಿ: ಮೂರು ದಿನ ಕಾದು ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ ಡಿ.ಕೆ. ಶಿವಕುಮಾರ್!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Youtube Video
ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by: HR Ramesh
First published: June 22, 2021, 8:11 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories