ಬೆಂಗಳೂರು (ಮೇ 26): ವಾಟರ್ ಟ್ಯಾಂಕರ್ (Water Tanker) ಹರಿದು ಮೂರು ವರ್ಷದ ಬಾಲಕಿ ಸಾವನ್ನಪ್ಪಿರೋ (Girl Death) ಘಟನೆ ಸರ್ಜಾಪುರ ರೋಡ್ ಸೆರಿನಿಟಿ ಲೇಔಟ್ ನಲ್ಲಿ ನಡೆದಿದೆ. ಅಪಘಾತದಲ್ಲಿ ಮೂರು ವರ್ಷದ ಪ್ರತಿಷ್ಠಾ (Prathista) ಸಾವನ್ನಪ್ಪಿದ್ದಾಳೆ. ಇಂದು ಮಧ್ಯಹ್ನಾ 12 ಗಂಟೆ ಸುಮಾರಿಗೆ ಶ್ವೇತ ರೆಸಿಡೆನ್ಸಿ ಅಪಾರ್ಟ್ಮೆಂಟ್ (Apartment) ಮುಂದೆ ಅಪಘಾತ (Accident) ಸಂಭವಿಸಿದೆ. ಅಪಾರ್ಟ್ಮೆಂಟ್ಗೆ ನೀರನ್ನು ಲೋಡ್ ಮಾಡಲು ಟ್ಯಾಂಕರ್ ತರಲಾಗಿತ್ತು. ನೀರು ಲೋಡ್ ಮಾಡಿ ಮುಗಿದ ಬಳಿಕ ಟ್ಯಾಂಕರ್ನನ್ನು ರಿವರ್ಸ್ ತೆಗೆದುಕೊಳ್ಳುವ ವೇಳೆ ಅವಘಡ ನಡೆದಿದೆ. ಹಿಂದೆ ನೋಡದೆ ಚಾಲಕ ರಿವರ್ಸ್ ತೆಗೆದುಕೊಂಡಿದ್ದಾನೆ. ಈ ವೇಳೆ ವಾಹನ ಬಾಲಕನ ಮೇಲೆ ಹರಿದಿದ್ದು, ಚಕ್ರದಡಿ ಸಿಲುಕಿ ಬಾಲಕಿ ಸಾವನ್ನಪ್ಪಿದ್ದಾನೆ. ಈ ಸಂಬಂಧ ಹೆಚ್ಎಸ್ ಆರ್ ಲೇಔಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಟ್ಯಾಂಕರ್
ಬಾಲಕಿ ಪ್ರತಿಷ್ಠಾ ಮನೆ ಮುಂದಿನ ಆವರಣದಲ್ಲಿ ಆಟವಾಡುತ್ತಿದ್ದಳು. ಈ ವೇಳೆ ವಾಟರ್ ಟ್ಯಾಂಕರ್ ಬಾಲಕಿ ಮೇಲೆ ಹರಿದಿದೆ. ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಮಗು ಸಾವನ್ನಪ್ಪಿದ್ದು, ಘಟನೆ ಬಳಿಕ ಸ್ಥಳದಲ್ಲೇ ಟ್ಯಾಂಕರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಚಾಲಕನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಮಗಳನ್ನು ಕಳೆದುಕೊಂಡು ಪೋಷಕರ ಕಣ್ಣೀರು
ಪ್ರತಿಷ್ಠಾ ನೇಪಾಳ ಮೂಲದ ಯಂತಿ ಭಟ್ ಮತ್ತು ಭೀಮರಾಜ್ ಭಟ್ ದಂಪತಿ ಪುತ್ರಿ, ಮೃತ ಪ್ರತಿಷ್ಠಾ ತಂದೆ ಭೀಮರಾಜ್ ಭಟ್, ಕಳೆದ 4 ವರ್ಷಗಳಿಂದ ಬೆಂಗಳೂರಿನ ಅಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. 3 ವರ್ಷದ ಮುದ್ದಾದ ಮಗುವನ್ನು ಕಳೆದುಕೊಂಡು ಪೋಷಕರು ಕಣ್ಣೀರು ಹಾಕ್ತಿದ್ದಾರೆ. ಪ್ರತಿಷ್ಠಾ ತಾಯಿ ಯಂತಿ ಭಟ್ ಅವರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ: Hijab Controversy: ಮಂಗಳೂರು ವಿವಿಯಲ್ಲಿ ಮತ್ತೆ ಹಿಜಾಬ್ ವಿವಾದ, ವಿದ್ಯಾರ್ಥಿಗಳಿಂದ ಪ್ರತಿಭಟನೆ
ಶಾಲಾ ಬಸ್ ಡಿಕ್ಕಿಯಾಗಿ ಬಾಲಕಿ ಸಾವು
ಬೆಂಗಳೂರು (ಮೇ 26): ಬೆಳಗ್ಗೆಯಷ್ಟೇ ಶಾಲಾ ಬಸ್ ಬಾಲಕಿ ಮೇಲೆ ಹರಿದು ಬಾಲಕಿ ಸಾವನ್ನಪ್ಪಿದ್ದಳು. ಶಾಲಾ ಬಸ್ ಡಿಕ್ಕಿ ಹೊಡೆದು 16 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹಾರೋಹಳ್ಳಿ ನಿವಾಸಿ ಕೀರ್ತನಾ ಮೃತ ದುರ್ದೈವಿ. ನಗರದ ದೇವೇಗೌಡ ಪೆಟ್ರೋಲ್ ಬಂಕ್ ಸಮೀಪ ಅವಘಡ ಸಂಭವಿಸಿದೆ. ಬೈಕ್ನಲ್ಲಿ ಹರ್ಷಿತಾ, ದರ್ಶನ್ ಮತ್ತು ಕೀರ್ತನಾ ಟ್ರಿಪಲ್ ರೈಡ್ ಹೋಗುತ್ತಿದ್ದರು. ಆಗ ಹಿಂಬದಿಯಿಂದ ಬಂದ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕೀರ್ತನಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಬನಶಂಕರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣ; ಅಮೃತ್ ಪಾಲ್ ವಿಚಾರಣೆ
ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಕೊನೆಗೂ ತಾರ್ಕಿಕ ಅಂತ್ಯ ಕಾಣುತ್ತಿದೆ. ಸಿಐಡಿಯ ತನಿಖಾಧಿಕಾರಿಗಳಿಂದ ಅಂದಿನ ನೇಮಕಾತಿ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ಅವರ ವಿಚಾರಣೆ ನಡೆಸಲಾಗುತ್ತಿದೆ. ಈ ಹಿಂದೆ ಅಮೃತ್ ಪೌಲ್ ಆಪ್ತ ಅಧಿಕಾರಿ ಡಿವೈಎಸ್ಪಿ ಶಾಂತರಾಜು ಅವರನ್ನ ಸಿಐಡಿ ಬಂಧಿಸಿತ್ತು. ಶಾಂತಕುಮಾರ್ ಹೇಳಿಕೆ ಮೇಲೆ ಸದ್ಯ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿರುವ ಅಮೃತ್ ಪೌಲ್ ಅವರನ್ನ ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ: H.D Devegowda: ಬೆಂಗಳೂರಲ್ಲಿ ಕೆಸಿಆರ್-ಹೆಚ್ಡಿಡಿ ಭೇಟಿ, ತೃತೀಯ ರಂಗ ಬಲಪಡಿಸುವ ಕುರಿತು ಮಾತುಕತೆ
ಸಿಐಡಿ ಎಡಿಜಿ ಉಮೇಶ್ ಕುಮಾರ್ ಸಮ್ಮುಖದಲ್ಲಿ ಡಿವೈಎಸ್ಪಿ ಶೇಖರ್ ಅವರು ಅಮೃತ್ ಪೌಲ್ ವಿಚಾರಣೆ ನಡೆಸ್ತಿದ್ದಾರೆ. ನಿನ್ನೆ ಸಂಜೆ 4.30 ರಿಂದ ರಾತ್ರಿ 7 ಗಂಟೆವರೆಗೆ ವಿಚಾರಣೆ ನಡೆಸಿದ್ದ ಅಧಿಕಾರಿಗಳು ಮತ್ತೆ ಇಂದು ಬೆಳಗ್ಗೆ 11 ಗಂಟೆಯಿಂದ ಮತ್ತೆ ವಿಚಾರಣೆ ಮುಂದುವರೆಸಿದ್ದಾರೆ. ಕಳೆದ ವಾರ ಶಾಂತಕುಮಾರ್ ಬಂಧಿಸಿದ್ದ ಸಿಐಡಿ, ಸಾಕಷ್ಟು ಮಾಹಿತಿ ಕಲೆ ಹಾಕಿತ್ತು. ಕೆಲ ಸಾಕ್ಷ್ಯಾಧಾರಗಳು ಸಿಕ್ಕ ಕಾರಣ ಎಡಿಜಿಪಿಯನ್ನು ವಿಚಾರಣೆ ನಡೆಸಲಾಗ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ