HOME » NEWS » State » WE ARE DOING STRATEGY TO BUILD PARTY ON GROUND BASE SAYS DK SHIVAKUMAR NKCKB HK

ಮುಂಬರುವ ದಿನಗಳಲ್ಲಿ ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯತಂತ್ರ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಮುಂದಿನ ದಿನಗಳಲ್ಲಿ ಕೆಡರ್ ಬೇಸ್ ಮೇಲೆ ಕಾಂಗ್ರೆಸ್ ಪಕ್ಷ  ಕಟ್ಟಲಾಗುತ್ತದೆ. ಪಂಚಾಯತ್ ಮತ್ತು ಬೂತ್ ಮಟ್ಟದಲ್ಲಿ ಸಮಿತಿ ರಚನೆ ಮಾಡಲಾಗುವುದು. ಸಮಿತಿಗೆ ಪ್ರಜಾ ಪ್ರತಿನಿಧಿ ಎಂಬ ಹೆಸರಿಡಲಾಗುತ್ತದೆ

news18-kannada
Updated:December 1, 2020, 7:59 PM IST
ಮುಂಬರುವ ದಿನಗಳಲ್ಲಿ ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯತಂತ್ರ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
  • Share this:
ಬೆಂಗಳೂರು(ಡಿಸೆಂಬರ್. 01): ರಾಜ್ಯ ಕಾಂಗ್ರೆಸ್ ಮುಖಂಡರ ಮಹತ್ವದ ಸಭೆ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಬಳಿಯ  ಕ್ಲಾರ್ಕ್  ಎಕ್ಸೋಟಿಕ್ ರೆಸಾರ್ಟ್ ನಡೆಯಿತು. ಪಕ್ಷದ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ಮಾಡಲಾಗಿದ್ದು, ಪಕ್ಷವನ್ನು ತಳ ಮಟ್ಟದಲ್ಲಿ ಕಟ್ಟಲು ಕೇಡರ್ ಬೇಸ್ ಮೇಲೆ  ಪಕ್ಷ ಕಟ್ಟಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಹೇಳಿದರು. ಉಪಚುನಾವಣೆಯಲ್ಲಿ ಸೋಲು ಮತ್ತು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸುವ ಕಾರಣಕ್ಕೆ ರಾಜ್ಯ ಕಾಂಗ್ರೆಸ್ ಮುಖಂಡರ ಸಭೆ ಮಾಡಲಾಗಿದ್ದು, ಸಭೆಯ ಸಂಪೂರ್ಣ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪಕ್ಷವನ್ನು ತಳ ಮಟ್ಟದಿಂದ ಬಲಪಡಿಸುವುದಾಗಿ ಹೇಳಿದರು. ರಾಜ್ಯ ರಾಜಕಾರಣದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಗ್ರಾಮ ಪಂಚಾಯತ್ ಚುನಾವಣೆ  ನಡೆಸುವಂತೆ ಕಾಂಗ್ರೆಸ್ ಕೋರ್ಟ್ ಮೊರೆ ಹೋಗಿತ್ತು, ಚುನಾವಣೆ ನಡೆಸುವಂತೆ ಕೋರ್ಟ್ ಆದೇಶ ನೀಡಿದ್ದು, ಕೋರ್ಟ್ ಆದೇಶಕ್ಕೆ ಕಾಂಗ್ರೆಸ್ ಪಕ್ಷ ಸ್ವಾಗತ ಕೋರುತ್ತದೆ ಎಂದರು.

ಕೆಲವು ದಿನಗಳ ನಿಧನರಾದ ಅಹ್ಮದ್ ಪಾಟೀಲ್ ಮತ್ತು ತರುಣ್ ಗೊಗಾಯ್ ಅವರುಗಳಿಗೆ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು.  ಪ್ರಮುಖವಾಗಿ ಪಕ್ಷದ ಸಂಘಟನೆ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕೆಡರ್ ಬೇಸ್ ಮೇಲೆ ಕಾಂಗ್ರೆಸ್ ಪಕ್ಷ  ಕಟ್ಟಲಾಗುತ್ತದೆ. ಪಂಚಾಯತ್ ಮತ್ತು ಬೂತ್ ಮಟ್ಟದಲ್ಲಿ ಸಮಿತಿ ರಚನೆ ಮಾಡಲಾಗುವುದು. ಸಮಿತಿಗೆ ಪ್ರಜಾ ಪ್ರತಿನಿಧಿ ಎಂಬ ಹೆಸರಿಡಲಾಗುತ್ತದೆ. ಎಲ್ಲಾ ವರ್ಗದ ಜನರು ಸಮಿತಿಯಲ್ಲಿ ಪ್ರತಿನಿಧಿಸಬೇಕು. ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪ್ರಜಾ ಪ್ರತಿನಿಧಿ ಅನುಷ್ಠಾನಕ್ಕೆ  ತರುತ್ತೇವೆ. ನಮ್ಮ ಕಾರ್ಯಕರ್ತರು ಈ ಅವಕಾಶ ಬಳಸಿಕೊಳ್ಳಲು ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದರು.

ಉಪ ಚುನಾವಣೆ ನಡೆದ ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಸೋಲಿನ ಆತ್ಮಾವಲೊಕನ ಆಡಳಿತ ಪಕ್ಷದ ಆಡಳಿತ ದುರುಪಯೋಗ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಮುಂದಿನ ಉಪ ಚುನಾವಣೆಯಲ್ಲಿ  ಎಚ್ಚೆತ್ತುಕೊಂಡು ಕೆಲಸ ಮಾಡಲಾಗುವುದು. ಬೆಳಗಾವಿ, ಬಸವಕಲ್ಯಾಣ, ಮಸ್ಕಿ ಕ್ಷೇತ್ರಕ್ಕೆ ಸಮಿತಿ ರಚನೆ ಮಾಡಲಾಗುತ್ತದೆ. ಸಮಿತಿ ಶಿಫಾರಸ್ಸಿನ ಆಧಾರರ ಮೇಲೆ ದೆಹಲಿಗೆ ಪಟ್ಟಿ ಕಳಿಸಲಾಗುವುದು, ಸ್ಥಳೀಯರಿಗೆ ಹೆಚ್ಚಿನ ಆದ್ಯತೆ  ನೀಡಲಾಗುತ್ತದೆ. ಶೀಘ್ರದಲ್ಲೇ ಅಭ್ಯರ್ಥಿಗಳ ಆಯ್ಕೆ ಮಾಡಿ ಚುನಾವಣಾ ಕಣಕ್ಕೆ ಇಳಿಯುವ ಸೂಚನೆ ನೀಡಿದರು.

ಇದನ್ನೂ ಓದಿ : ರೈತ ವಿರೋಧಿ ಕಾಯ್ದೆ ಹಿಂಪಡೆಯದ್ದರೆ ಚಳವಳಿ ಆರಂಭ: ಬಾಬಾಗೌಡ ಪಾಟೀಲ್​​ ಎಚ್ಚರಿಕೆ

ಮುಂಬರುವ ಗ್ರಾಮ ಪಂಚಾಯತ್ ಚುನಾವಣೆ ರಾಜ್ಯದ ಎಲ್ಲಾ ಹಿರಿಯರು ಸೇರಿದಂತೆ 9 ನಾಯಕರ ತಂಡವನ್ನು ರಚನೆ ಮಾಡಲಾಗುತ್ತದೆ. ಎಲ್ಲಾ ನಾಯಕರು ರಾಜ್ಯಾದ್ಯಂತ ಪ್ರವಾಸ ಮಾಡಬೇಕು. ಈ ಚುನಾವಣೆ ಯಶಸ್ವಿಗೊಳಿಸಲು ತಳಮಟ್ಟದ ಪ್ರಯತ್ನ ನಡೆಯುತ್ತಿದ್ದು, ಸರ್ಕಾರದ ತಪ್ಪುಗಳನ್ನ ಜನರಿಗೆ ಮುಟ್ಟಿಸುವ ಪ್ರಯತ್ನ ಮಾಡಲಾಗುತ್ತಿದೆ. ಪಕ್ಷದ ಸಂಘಟನೆಗಾಗಿ ಹೊಸದಾಗಿ ಸಹಕಾರ, ಸಾಂಸ್ಕೃತಿಕ, ಚಾಲಕರ ಸಮಿತಿ ರಚನೆ ಮಾಡಲಾಗುತ್ತದೆ.

ದೆಹಲಿ ಮತ್ತು ಉತ್ತರ ಭಾರತದ ರೈತಪರ ಹೊರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ, ಕೇಂದ್ರ ಸರ್ಕಾರ, ಪ್ರಧಾನಮಂತ್ರಿಗಳು ರೈತರ ಸಮಸ್ಯೆ  ಅಲಿಸಿ ರೈತರ ಸಮಸ್ಯೆ ಪರಿಹರಿಸಲು ಬೇಕು, ಎಲ್ಲಾ ಕಾಯ್ದೆ ತಿದ್ದುಪಡಿ ಹಿಂಪಡೆಯ ಬೇಕೆಂದು ಆಗ್ರಹಿಸಿದರು.
Published by: G Hareeshkumar
First published: December 1, 2020, 7:58 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories