Nalapad Controversy: ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ, ಮತ್ತೆ ನಾಲಿಗೆ ಹರಿಬಿಟ್ಟ ಮೊಹಮ್ಮದ್ ನಲಪಾಡ್!

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದ್ದಾರೆ. ಈ ಬಾರಿ ಅವಾಚ್ಯವಾಗಿ ಮಾತನಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಾವು ಸಚಿವೆ ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ ಎಂದಿದ್ದಾರೆ.

ನಲಪಾಡ್ ವಿವಾದಾತ್ಮಕ ಮಾತು

ನಲಪಾಡ್ ವಿವಾದಾತ್ಮಕ ಮಾತು

  • Share this:
ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ಮತ್ತೆ ವಿವಾದವನ್ನು (Controversy)  ಮೈಮೇಲೆ ಎಳೆದುಕೊಂಡಿದ್ದಾರೆ. ನಲಪಾಡ್ (Nalapad) ನಾಲಿಗೆ ಹರಿಬಿಟ್ಟಿದ್ದಾರೆ. ನಾವು ಶಶಿಕಲಾ‌ ಜೊಲ್ಲೆಗೆ (Shashikala Jolle) ಹುಟ್ಟಿದವರಲ್ಲ ಎಂದು ನಲಪಾಡ್ ಹೇಳಿದ್ದಾರೆ. ಕೊಡಗಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramiah) ಕಾರಿನ ಮೇಲೆ ಮೊಟ್ಟೆ (Egg) ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್ ಲೈವ್ ನಲ್ಲಿ (Facebook live) ನಲಪಾಡ್ ಮಾತನಾಡಿ ವಿವಾದಿತ ಹೇಳಿಕೆ ಕೊಟ್ಟಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಪ್ರತಿಭಟನೆಗೆ ಮುಂದಾದ ನಲಪಾಡ್​ನ್ನು  ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದಕ್ಕೆ ಆಕ್ರೋಶ ಹೆಚ್ಚಾಗಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಲು ಸಿಎಂ ಬೊಮ್ಮಾಯಿ ನಿರಾಕರಿಸಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದ್ದಾರೆ. ಈ ಬಾರಿ ಅವಾಚ್ಯವಾಗಿ ಮಾತನಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಾವು ಸಚಿವೆ ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ ಎಂದಿದ್ದಾರೆ.

ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ- ನಲಪಾಡ್

ಸಿದ್ದರಾಮಯ್ಯ ಮೊಟ್ಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್ಬುಕ್ ಲೈವ್ನಲ್ಲಿ ಮಾತನಾಡಿರುವ ನಲಪಾಡ್, ಬಿಜೆಪಿಯವರು ಊರುಬಿಟ್ಟು ಓಡಿಹೋಗುವಂತೆ ಮಾಡ್ತೇವೆ. ನಾವು ಎಲ್ಲಾ ಸಚಿವರಿಗೂ ಮೊಟ್ಟೆ ಕೊಡ್ತೇವೆ. ನಾವು ಗಾಂಧಿ ತತ್ವದಲ್ಲಿ ಬಂದವರು, ಕಾಂಗ್ರೆಸ್ ತತ್ವದಲ್ಲಿ ಬಂದವರು. ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ ಅಂತಾ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

We are not born for Shashikala Jolle Mohammad Nalapad controversial statement on Facebook Live
ನಲಪಾಡ್ ವಿವಾದಾತ್ಮಕ ಮಾತು


ಇದನ್ನೂ ಓದಿ: ಶಾಲೆಯಲ್ಲಿ ಗಣಪತಿ ಕೂರಿಸಿದರೆ ಮುಸ್ಲಿಮರ ಹಬ್ಬಕ್ಕೂ ಅವಕಾಶ ಕೊಡಿ! ಮುಸ್ಲಿಂ ಸಂಘಟನೆಗಳ ಆಗ್ರಹ

ನಲಪಾಡ್ ಮೊಟ್ಟೆ ಪ್ರೊಟೆಸ್ಟ್​​​ಗಿಲ್ಲ ಅನುಮತಿ!

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ನಲಪಾಡ್ ನೇತೃತ್ವದಲ್ಲಿ ಮೊಟ್ಟೆ ಪ್ರತಿಭಟನೆಗೆ ನಿರ್ಧರಿಸಲಾಗಿತ್ತು. ಆದರೆ ಮೊಟ್ಟೆ ಪ್ರತಿಭಟನೆಗೆ ಪೊಲೀಸರು ಅನುಮತಿ ಕೊಟ್ಟಿಲ್ಲ. ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿರುವ ಯುದ್ಧ ಸ್ಮಾರಕದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದರು. ನಲಪಾಡ್ ಬೆಂಬಲಿಗರನ್ನ ಕೂಡ ವಶಕ್ಕೆ ಪಡೆಯಲಾಯ್ತು.

ಮೊಟ್ಟೆ ಪ್ರಕರಣ, ಪ್ರತಿಕ್ರಿಯೆಗೆ ಸಿಎಂ ನಕಾರ

ಮೊಟ್ಟೆ ಪ್ರಕರಣ ಸಂಬಂಧಿಸಿದಂತೆ ಸಿದ್ದರಾಮಯ್ಯರವರಿಗೆ ಬೆದರಿಕೆ ಇದೆ ಎಂಬ ಶಾಸಕ ಯತೀಂದ್ರ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ. ಇನ್ನು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಕಿಡಿಕಾರಿದ್ದಾರೆ. ಜನರ ಮನಸ್ಸಿನಲ್ಲಿರುವ ಭಾವನೆಗಳು ಸ್ಫೋಟಗೊಂಡಾಗ ಈ ರೀತಿ ಪ್ರತಿಭಟನೆ ಆಗುತ್ತೆ. ಸಿದ್ದರಾಮಯ್ಯ ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾ ಬಂದಿದ್ದಾರೆ ಎಂದರು.

ಸಿದ್ದರಾಮಯ್ಯಗೆ ಹಣೆ ಮೇಲೆ ಕುಂಕುಮ ಇಟ್ಟವರನ್ನು ಕಂಡರೆ ಆಗಲ್ಲ. ಸಾವರ್ಕರ್ ಫೋಟೋ ಕಂಡರೆ ಆಗಲ್ಲ. ಇದನ್ನು ಕರ್ನಾಟಕದ ಜನ ಸಹಿಸುವುದಿಲ್ಲ, ಜನ ಪ್ರತಿಭಟಿಸುತ್ತಿದ್ದಾರೆ ಎಂದರು. ಸಿದ್ದರಾಮಯ್ಯ ತನ್ನ ನಡವಳಿಕೆ, ಹೇಳಿಕೆ, ಆಡಳಿತದಲ್ಲಿ ಪ್ರತ್ಯೇಕತೆಯ ಭಾವನೆ ತೋರಿಸುತ್ತಾರೆ. ಸಿದ್ದರಾಮಯ್ಯನವರೇ ದಯಮಾಡಿ ಅಂಡಮಾನಿನ ಸೆಲ್ಯೂಲರ್ ಜೈಲು ನೋಡಿಕೊಂಡು ಬನ್ನಿ ಅಂತಾ ಸುನೀಲ್ ಕುಮಾರ್ ಹೇಳಿದ್ರು.

ಇದನ್ನೂ ಓದಿ: ಸಂಸದೆ ಸುಮಲತಾ ಬಿಜೆಪಿ ಸೇರುವ ಬಗ್ಗೆ ಮಾಹಿತಿ ಬಿಚ್ಚಿಟ್ಟ ಬೆಂಬಲಿಗ!

ಸಿದ್ದರಾಮಯ್ಯಗೆ ಭಯ ಇದ್ರೆ ದೂರು ಕೊಡಲಿ!

ಸಿದ್ದರಾಮಯ್ಯಗೆ ಜೀವಭಯ ಇದೆ ಅಂತಾ ಪುತ್ರ ಯತೀಂದ್ರ ಹೇಳಿದ್ದಾರೆ. ಇದಕ್ಕೆ ಇಂಧನ ಕನ್ನಡ ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ತಿರುಗೇಟು ಕೊಟ್ಟಿದ್ದಾರೆ. ಜೀವ ಬೆದರಿಕೆ -ಭಯ ಇದ್ದರೆ ಸಿದ್ದರಾಮಯ್ಯ ದೂರು ಕೊಡಲಿ. ಸರಕಾರ ಈಗಾಗಲೇ ಭದ್ರತೆ ಕೊಟ್ಟಿದೆ. ಮುಂದೆಯೂ ಇನ್ನಷ್ಟು ಕೊಡಲಿದೆ ಅಂದರು.

ಇನ್ನು ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ರಾಮಲಿಂಗಾ ರೆಡ್ಡಿ, ಎಂ.ಬಿ.ಪಾಟೀಲ್, ಯು.ಟಿ.ಖಾದರ್, ದಿನೇಶ್ ಗುಂಡೂರಾವ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಲವೆಡೆ ಪ್ರತಿಭಟನೆ ಕೂಡ ನಡೆಯುತ್ತಿದೆ.
Published by:Thara Kemmara
First published: