800 ಮೆಟ್ರಿಕ್ ಟನ್ ಆಕ್ಸಿಜನ್ ಸರಬಾರಜು ಆಗುತ್ತಿದೆ, ಆದರೂ ಬೇಡಿಕೆ ಹೆಚ್ಚಾಗುತ್ತಿದೆ; ಗೃಹ ಸಚಿವ ಬಸವರಾಜ ಬೊಮ್ಮಾಯಿ

ಸೋಮವಾರ ಬೆಳ್ಳಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೂರು ಮಹತ್ವದ ವಿಚಾರಗಳು ಚರ್ಚೆಯಾಗಲಿವೆ. ವಾರ ಪೂರ್ತಿ ಕರ್ಪ್ಯೂ ವಿಸ್ತರಣೆ, ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಚರ್ಚೆಯಾಗಲಿದೆ. ಹಾಗೆಯೇ ವ್ಯಾಕ್ಸಿನ್ ಉಚಿತವಾಗಿ ನೀಡುವ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ. 

ಗೃಹ ಸಚಿವ ಬಸವರಾಜ​​ ಬೊಮ್ಮಾಯಿ.

ಗೃಹ ಸಚಿವ ಬಸವರಾಜ​​ ಬೊಮ್ಮಾಯಿ.

 • Share this:
  ಬೆಂಗಳೂರು: ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ. ಜನರು ಸಹ ಸಹಕಾರ ಕೊಡುತ್ತಿದ್ದಾರೆ.  ಜನರಲ್ಲೂ ಅರಿವು ಮೂಡಿದೆ. ಕೊರೋನಾ ಕಳೆದ ಬಾರಿಗಿಂತ ಹೆಚ್ಚು ತೀವ್ರವಾಗಿದೆ.  ಪೊಲೀಸರ ಕೂಡ ಕರ್ತವ್ಯ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಕೊರೋನಾ ಚೈನ್ ಲಿಂಕ್ ಮುರಿಯುವುದಕ್ಕೆ ಇದು ಅತ್ಯಗತ್ಯ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

  ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಯಿ ಅವರು, ಆಕ್ಸಿಜನ್ ಸಲುವಾಗಿ ಸಾಕಷ್ಟು ಕ್ರಮ ತೆಗೆದುಕೊಂಡಿದ್ದೇವೆ. ಆಕ್ಸಿಜನ್ ಸಲುವಾಗಿ ನಿನ್ನೆ ಮೂರು ತಾಸು ಸಭೆ ಮಾಡಿದ್ದೇವೆ.  ಸುಮಾರು 800 ಮೆಟ್ರಿಕ್ ಟನ್ ಆಕ್ಸಿಜನ್ ಸರಬಾರಜು ಆಗುತ್ತಿದೆ. ಪ್ರತಿನಿತ್ಯ ಬೇಡಿಕೆ ಹೆಚ್ಚಾಗುತ್ತಿದೆ. ಚೀಫ್ ಸೆಕ್ರೆಟರಿ ಆಕ್ಸಿಜನ್ ಉತ್ಪಾದಕರ ಬಳಿ ಮಾತನಾಡಿ ಹೆಚ್ಚುವರಿ ಆಕ್ಸಿಜನ್ ಪಡೆದುಕೊಂಡಿದ್ದೇವೆ. ನಮ್ಮ ಪವರ್ ಪ್ಲ್ಯಾಟ್ ನಲ್ಲೂ ಆಕ್ಸಿಜನ್ ಉತ್ಪಾದನೆ ಮಾಡುತ್ತಿದ್ದೇವೆ. ಕೆಲವು ಸಿಮೆಂಟ್ ಫ್ಯಾಕ್ಟರಿಗಳಲ್ಲೂ ಉತ್ಪಾದನೆ ಆಗಿದ್ದನ್ನು ಮೆಡಿಕಲ್ ಉದ್ದೇಶಕ್ಕೆ ಬಳಸುತ್ತೇವೆ. ಒಟ್ಟಾರೆ ನಮ್ಮ ಪ್ರಯತ್ನ ಮಾಡಿ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

  ಜನರೂ ಕೂಡ ನಮ್ಮ ಜವಾಬ್ದಾರಿ ಅರ್ಥ ಮಾಡಿಕೊಳ್ಳಬೇಕು. ಕಾನೂನು ಉಲ್ಲಂಘಿಸುವುದರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲವೂ ನಿಮಗೆ ಗೊತ್ತಿರುವ ವಿಚಾರ. ಇಷ್ಟು ದೊಡ್ಡ ಪ್ರಮಾಣದಲ್ಲಿ ಕೋವಿಡ್ ಆದಾಗ ಕೊರತೆ ಆಗುವುದು ಸಹಜ.  ಆಕ್ಸಿಜನ್ ಉತ್ಪಾದನೆ ಅಷ್ಟೇ ಇದೆ. ಬಳಕೆ ಮಾತ್ರ ಹೆಚ್ಚಾಗಿದೆ. ಎಲ್ಲ ಎಡಿಜಿಪಿ, ಬೆಂಗಳೂರು ಕಮಿಷನರ್ ಜೊತಗೂ ಮೀಟಿಂಗ್ ಮಾಡ್ತೇನೆ. ಜನ ಸಹಕಾರ ಕೊಟ್ಟಿದ್ದಾರೆ. ಅಂಥದ್ದೇನೂ ಬಹಳ ಸಮಸ್ಯೆ ಆಗಿಲ್ಲ ಎಂದರು.

  ಇದನ್ನು ಓದಿ: Exclusive Story | ಉಚಿತವಾಗಿ ಲಸಿಕೆ ಹಂಚಿಕೆ ವಿಷಯವಾಗಿ ಸರ್ಕಾರದ ಮೇಲೆ ಹೆಚ್ಚಿದ ಒತ್ತಡ; ಸೋಮವಾರ ಮಹತ್ವದ ನಿರ್ಧಾರ?

  ರಾಜ್ಯದಲ್ಲಿ ಕೋವಿಡ್ ಲಸಿಕೆ ಉಚಿತವಾಗಿ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ  ಬೊಮ್ಮಯಿ ಅವರು, ಸೋಮವಾರ ಕ್ಯಾಬಿನೆಟ್ ಮೀಟಿಂಗ್ ಇದೆ. ಈಗಾಗಲೇ ರಾಜ್ಯ ಸರ್ಕಾರ ಒಂದು ಕೋಟಿ ಲಸಿಕೆ ಖರೀದಿಗೆ ಹಣ ಬಿಡುಗಡೆ ಮಾಡಿದೆ. ಎಷ್ಟು ಲಸಿಕೆ ಬೇಕು ಅಷ್ಟಕ್ಕೇ ಹಣ ನೀಡಲು ಸರ್ಕಾರ ಸಿದ್ದವಿದೆ. ಸಚಿವ ಸಂಪುಟ ಸಭೆಯಲ್ಲಿ ವ್ಯಾಕ್ಸಿನ್ ಗೆ ಯಾವ ರೀತಿ ಕೊಡಬೇಕು. 6 ಸಾವಿರ ಕೇಂದ್ರಗಳು ಇವೆ. ಜೊತೆಗೆ ಈ ಕಾರ್ಯಕ್ರಮ ಹೇಗೆ ಮಾಡಬೇಕು ಅಂತ ನಿರ್ಧಾರ ಮಾಡ್ತೇವೆ. ಒಟ್ಟಾರೆ ಈ ವಿಚಾರ ಸೋಮವಾರದ ಕ್ಯಾಬಿನೆಟ್​ ಸಭೆಯಲ್ಲಿ ಚರ್ಚೆ ಆಗಲಿದೆ ಎಂದರು.

  ಭಾರೀ ಮಹತ್ವ ಪಡೆದುಕೊಂಡ ಕ್ಯಾಬಿನೆಟ್ ಮೀಟಿಂಗ್

  ಸೋಮವಾರ ಬೆಳ್ಳಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೂರು ಮಹತ್ವದ ವಿಚಾರಗಳು ಚರ್ಚೆಯಾಗಲಿವೆ. ವಾರ ಪೂರ್ತಿ ಕರ್ಪ್ಯೂ ವಿಸ್ತರಣೆ, ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಚರ್ಚೆಯಾಗಲಿದೆ. ಹಾಗೆಯೇ ವ್ಯಾಕ್ಸಿನ್ ಉಚಿತವಾಗಿ ನೀಡುವ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ. ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಉಚಿತ ವ್ಯಾಕ್ಸಿನ್ ನೀಡಲಾಗಿದೆ. ಹೀಗಾಗಿ ರಾಜ್ಯದಲ್ಲೂ ಉಚಿತ ವ್ಯಾಕ್ಸಿನ್ ನೀಡುವ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ. ಇನ್ನು ಕೋವಿಡ್ ನಿರ್ವಹಣೆಗೆ ಹಣಕಾಸು ಬಿಡುಗಡೆಗೂ ನಿರ್ಧಾರ ಕೈಗೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಸೋಮವಾರದ ಸಚಿವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದೆ.
  Published by:HR Ramesh
  First published: