Ramesh Kumar: 'ಋಣ ತೀರಿಸದೇ ಹೋದರೆ ತಿನ್ನುವ ಅನ್ನಕ್ಕೆ ಹುಳ ಬೀಳುತ್ತೆ'

ರಮೇಶ್​ ಕುಮಾರ್​

ರಮೇಶ್​ ಕುಮಾರ್​

ಗಾಂಧಿ ಕುಟುಂಬದ ಋಣ ತೀರಿಸದೇ ಹೋದರೆ ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ. ಪಕ್ಷ ಕುಟುಂಬ ಇದ್ದಂತೆ, ಕುಟುಂಬ ಎಂದ ಮೇಲೆ ಸಣ್ಣ ಪುಟ್ಟ ಮನಸ್ತಾಪಗಳೆಲ್ಲವು ಸಹಜ. ಅವೆಲ್ಲವುಗಳನ್ನು ಬದಿಗೊತ್ತಿ ನಾವೆಲ್ಲರು ಒಂದಾಗಬೇಕು. ಸಂಕಷ್ಟದಲ್ಲಿರುವ ಸೋನಿಯಾ ಅವರೊಂದಿಗೆ ನಿಲ್ಲಬೇಕು ಎಂದು ರಮೇಶ್ ಕುಮಾರ್​ ಹೇಳಿದ್ದಾರೆ.

ಮುಂದೆ ಓದಿ ...
  • Share this:

ಬೆಂಗಳೂರು : ನ್ಯಾಷನಲ್ ಹೆರಾಲ್ಡ್ (National Herald Scam) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು(Sonia Gandhi)  ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯಲ್ಲಿ ವಿಚಾರಣೆ ವಿರೋಧಿಸಿದ ಕೆಪಿಸಿಸಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ (Ramesh Kumar) ಮಾತನಾಡಿ ಈಗ ಗಾಂಧಿ ಕುಟುಂಬದ ಋಣ ತೀರಿಸಬೇಕಿದೆ ಎಂದು ಹೇಳುವ ಮೂಲಕ ನೆರೆದಿದ್ದವರಿಗೆ ಶಾಕ್​ ನೀಡಿದ್ದಾರೆ.




ಸೋನಿಯಾ ಗಾಂಧಿ ಅವರಿಗೆ ನೈತಿಕ ಬೆಂಬಲ ನೀಡಬೇಕು


ಕಾಂಗ್ರೆಸ್‌ ಸುಮಾರು 70 ವರ್ಷ ದೇಶ ಆಳಿದೆ. ಕಾಂಗ್ರೆಸ್‌ನವರೇ ಆದ ನಾವೆಲ್ಲರೂ ಮುಂದಿನ ಮೂರ್ನಾಲ್ಕು ತಲೆಮಾರುಗಳಿಗೆ ಆಗುವಷ್ಟು ಆಸ್ತಿ, ಹಣ ಗಳಿಸಿದ್ದೇವೆ. ಅಧಿಕಾರ ಅನುಭವಿಸಿದ್ದೇವೆ. ಇದೀಗ ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರತ್ರಿಕೆ ಖರೀದಿ ಅವ್ಯವಹಾರ ಮತ್ತು ಹಣ ವರ್ಗಾವಣೆ ಆರೋಪ ಮೇಲೆ ವಿಚಾರಣೆ ನಡೆಯುತ್ತಿದೆ. ದೇಶ ಉಳಿಯಲು, ಕಾಂಗ್ರೆಸ್‌ ಉಳಿಸಲು ನಾವೆಲ್ಲರೂ ಒಟ್ಟಾಗಿ ಸೋನಿಯಾ ಗಾಂಧಿ ಅವರಿಗೆ ನೈತಿಕ ಬೆಂಬಲ ನೀಡಬೇಕು' ಎಂದು ಮನವಿ ಮಾಡಿದರು.


ಇದನ್ನೂ ಓದಿ: B S Yediyurappa: ಕೂಸು ಹುಟ್ಟುವ ಮುನ್ನವೇ ಕುಲಾವಿ; HDK, ಡಿಕೆಶಿ ಕಿತ್ತಾಟಕ್ಕೆ ಯಡಿಯೂರಪ್ಪ ಟಾಂಗ್


ಋಣ ತೀರಿಸದೇ ಹೋದರೆ ತಿನ್ನುವ ಅನ್ನಕ್ಕೆ ಹುಳ ಬೀಳುತ್ತೆ


'ಗಾಂಧಿ ಕುಟುಂಬದ ಋಣ ತೀರಿಸದೇ ಹೋದರೆ ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ. ಪಕ್ಷ ಕುಟುಂಬ ಇದ್ದಂತೆ, ಕುಟುಂಬ ಎಂದ ಮೇಲೆ ಸಣ್ಣ ಪುಟ್ಟ ಮನಸ್ತಾಪಗಳೆಲ್ಲವು ಸಹಜ. ಅವೆಲ್ಲವುಗಳನ್ನು ಬದಿಗೊತ್ತಿ ನಾವೆಲ್ಲರು ಒಂದಾಗಬೇಕು. ಸಂಕಷ್ಟದಲ್ಲಿರುವ ಸೋನಿಯಾ ಅವರೊಂದಿಗೆ ನಿಲ್ಲಬೇಕು. ಆಗ ಮಾತ್ರ ನಾವು ತಿನ್ನುವ ಎರಡು ಹೊತ್ತಿನ ಊಟಕ್ಕೆ ಸಾರ್ಥಕ ಬರುತ್ತದೆ' ಎಂದು ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿದರು.


ಇಡಿ, ಸಿಬಿಐ, ತಿಹಾರ್ ಜೈಲಿನ  ಅನುಭವ ಇದೆ

 ನನಗೆ ಇಡಿ, ಸಿಬಿಐ, ತಿಹಾರ್ ಜೈಲಿನ  ಅನುಭವ ಇದೆ. ಈಗ ನನ್ನ ಜೊತೆ ವ್ಯವಹಾರ ಮಾಡುವವರನ್ನು ತನಿಖೆಗೆ ಕರೆಯುತ್ತಿದ್ದಾರೆ. ಕೆಲವು ದಿನಗಳ ಹಿಂದೆ ನನಗೆ ರಾಹುಲ್ ಗಾಂಧಿಯಿಂದ ಕರೆ ಬಂತು, ಹಳೇ ರೋಗಿಗೆ ಹೊಸ ರೋಗಿ ಕಾಲ್ ಮಾಡ್ತಿದ್ದೇನೆ ಎಂದರು. ಅವರ ಜೊತೆಗೆ ಕೆಲವು ವಿಚಾರ ಹಂಚಿಕೊಂಡೆ. ದೆಹಲಿಗೆ ಹೋದಾಗ ಇಡಿ ವಿಚಾರಣೆ ಬಗ್ಗೆ ಕೇಳಿದೆ , ವಿಚಾರಣೆಯಿಂದ ಅವರು ಮಾನಸಿಕವಾಗಿ ಕುಗ್ಗಿರಲಿಲ್ಲ. ನಾನು‌ ತಿಹಾರ್ ಜೈಲಿನಲ್ಲಿದ್ದಾಗ ಸೋನಿಯಾ ಗಾಂಧಿ ಭೇಟಿ ನೀಡಿ ಶಕ್ತಿ ತುಂಬಿದ್ದರು. ಇವತ್ತು ನಾವು ಆ ಕೆಲಸ ಮಾಡಬೇಕಿದೆ ಎಂದು ಡಿ.ಕೆ ಶಿವಕುಮಾರ್​ ಹೇಳಿದ್ದಾರೆ.


ಸೋನಿಯಾ, ರಾಹುಲ್​ ಹೆದರಿಸಿದ್ರೆ ಎಲ್ಲಾ ನಿಮ್ಮ ಪಕ್ಷ ಸೇರಲ್ಲ


ನ್ಯಾಷನಲ್ ಹೆರಾಲ್ಡ್ ಬಗ್ಗೆ ಚುನಾವಣಾ ಆಯೋಗ, ಆದಾಯ‌ ತೆರಿಗೆ ಇಲಾಖೆ ಕೂಡಾ  ತಪ್ಪಿಲ್ಲ ಎಂದು ಹೇಳಿದೆ  ಹೀಗಿದ್ದರೂ ತನಿಖೆಯ ಹೆಸರಿನಲ್ಲಿ ಕಿರುಕುಳ ಕೊಡುತ್ತಿದ್ದಾರೆ. ಸೋನಿಯಾ, ರಾಹುಲ್ ಗಾಂಧಿ ‌ಅವರನ್ನು  ಹೆದರಿಸಿದರೆ ಎಲ್ಲರು ನಿಮ್ಮ ಪಕ್ಷಕ್ಕೆ ಬರುತ್ತಾರೆ ಎಂಬುದು ನಿಮ್ಮ ಭ್ರಮೆ . ಶಾಂತಿಯಿಂದ ಪ್ರತಿಭಟನೆ ಮಾಡಬೇಕು, ಎರಡು ಕಡೆ ಕಾರಿಗೆ ಬೆಂಕಿ ಹಾಕಿದ್ದಾರೆ ಎಂಬ ಮಾಹಿತಿ ಬಂದಿದೆ. ಈ‌ ರೀತಿ ಮಾಡದೆ ಶಾಂತಿ ಕಾಪಾಡಬೇಕು ಎಂದ ಡಿಕೆ ಶಿವಕುಮಾರ್​ ಮನವಿ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ: Karnataka Politics: ಸಿಎಂ ಕುರ್ಚಿಗೆ ಡಿಕೆಶಿ-ಹೆಚ್​ಡಿಕೆ ಫೈಟ್, ರಾಮನಗರದಲ್ಲೇ ಸವಾಲಿಗೆ ಸವಾಲ್


ನಾವು ಯಾರು ಕಾನೂನನ್ನು ಮೀರಿದವರಲ್ಲ

top videos


    ಇದೇ ವೇಳೆ ಮಾತಾಡಿದ ಸಿದ್ದರಾಮಯ್ಯ, ವಿಪಕ್ಷ ನಾಯಕ ಸಿದ್ದರಾಮಯ್ಯ, ನಾವು ಯಾರು ಕೂಡ ಕಾನೂನನ್ನು ಮೀರಿದವರಲ್ಲ. ಆದರೆ ತನಿಖಾ ಸಂಸ್ಥೆಗಳು ಮೋದಿ ಅವರು ಬಂದ ಮೇಲೆ ಕಾನೂನಿನ ಪ್ರಕಾರ ನಡೆಯುತ್ತಿಲ್ಲ. ಇಡಿ, ಐಟಿ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ.

    First published: