ಅಯೋಧ್ಯೆ ತೀರ್ಪು ಪ್ರಶ್ನಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಎಐಎಂಪಿಎಲ್​ಬಿ ನಿರ್ಧಾರ

ಸುಪ್ರೀಂಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸುವ ಮರುಪರಿಶೀಲನಾ ಅರ್ಜಿ ವಜಾಗೊಳ್ಳಲಿದೆ ಎಂದು ಮಂಡಳಿಯ ಹಲವು ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಕಾನೂನಾತ್ಮಕವಾಗಿ ಇರುವ ಎಲ್ಲ ಆಯ್ಕೆಗಳನ್ನು ಬಳಸಿಕೊಳ್ಳಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

news18-kannada
Updated:November 17, 2019, 4:25 PM IST
ಅಯೋಧ್ಯೆ ತೀರ್ಪು ಪ್ರಶ್ನಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಎಐಎಂಪಿಎಲ್​ಬಿ ನಿರ್ಧಾರ
ರಾಯಿಟರ್ಸ್ ಚಿತ್ರ
  • Share this:
ಲಕ್ನೋ/ನವದೆಹಲಿ: ಅಯೋಧ್ಯೆ ತೀರ್ಪು ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಭಾನುವಾರ ನಿರ್ಧರಿಸಿದೆ.

ಉನ್ನತ ನ್ಯಾಯಾಲಯದ ಆದೇಶ ಹೇಳಿದೆ, ದೇವಾಲಯ ಧ್ವಂಸಗೊಳಿಸಿ ಮಸೀದಿ ನಿರ್ಮಿಸುತ್ತಿರಲಿಲ್ಲ, ನಮಗೆ ಮಸೀದಿಗೆ ನೀಡಿಲ್ಲ. ಹೀಗಾಗಿ ನಾವು ಮರುಪರಿಶೀಲನಾ ಅರ್ಜಿ ಸಲ್ಲಿಸಲು ತೀರ್ಮಾನಿಸಿದ್ದೇವೆ ಮತ್ತು ನಮಗೆ ಸೇರಬೇಕಾಗಿರುವುದನ್ನು ಕೇಳುವುದು ನಮ್ಮ ಹಕ್ಕು ಎಂದು ಜಮೈತ್ ಉಲ್ಮಾ ಐ ಹಿಂದ್ ಅಧ್ಯಕ್ಷ ಮತ್ತು ಅಯೋಧ್ಯೆ ಸಂಧಾನ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅರ್ಷದ್ ಮದಾನಿ ಹೇಳಿದರು.

ಅಯೋಧ್ಯೆ ಜಾಗ ವಿವಾದಿತ ಪ್ರಕರಣ ತೀರ್ಪನ್ನು ಉತ್ತರಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ಸ್ವಾಗತಿಸಿದ ಒಂದು ವಾರದ ಬಳಿಕ ಈ ನಿರ್ಧಾರ ಹೊರಬಂದಿದೆ. ತೀರ್ಪುನ್ನು ಪ್ರಶ್ನೆ ಮಾಡಿ ಯಾವುದೇ ಮರುಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದು ಸುನ್ನಿ ವಕ್ಫ್​ ಮಂಡಳಿ ಸ್ಪಷ್ಟವಾಗಿ ಹೇಳಿತ್ತು.


ಇದನ್ನು ಓದಿ: Ayodhya Verdict: ಅಯೋಧ್ಯೆಯಲ್ಲಿ ರಾಮಮಂದಿರ; ಹಿಂದೂಗಳಿಗೆ ನಿರ್ಬಂಧ ವಿಧಿಸಿ ಜಾಗ, ಮುಸ್ಲಿಮರಿಗೆ ಬದಲಿ ಜಾಗ

ಅಯೋಧ್ಯೆ ತೀರ್ಪು ಪ್ರಶ್ನಿಸಿ ಸಲ್ಲಿಸುವ ಮರುಪರಿಶೀಲನಾ ಅರ್ಜಿ ವಜಾಗೊಳ್ಳಲಿದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಹಲವು ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಕಾನೂನಾತ್ಮಕವಾಗಿ ಇರುವ ಎಲ್ಲ ಆಯ್ಕೆಗಳನ್ನು ಬಳಸಿಕೊಳ್ಳಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
First published:November 17, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ