HOME » NEWS » State » WE SUPPORT THE FARMERS PROTEST AGAINST CENTRAL GOVERNMENT SAYS SIDDARAMAIAH MAK

ರೈತ ವಿರೋಧಿ ಕೇಂದ್ರ ಸರ್ಕಾರದ ವಿರುದ್ಧದ ರೈತರ ಹೋರಾಟಕ್ಕೆ ನಮ್ಮ ಬೆಂಬಲವಿದೆ; ಸಿದ್ದರಾಮಯ್ಯ

ರಾಜ್ಯದ ಮಟ್ಟಿಗೆ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮತ್ತು ಎಪಿಎಂಸಿ  ಕಾಯ್ದೆಯನ್ನು ವಿರೋಧಿಸಿ ಕಳೆದ ಹಲವು ತಿಂಗಳುಗಳಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ರೈತರು ಇತ್ತೀಚೆಗೆ ಬೆಂಗಳೂರಿಗೂ ಬಂದು ಕಾಯ್ದೆಯ ವಿರುದ್ಧ ಪ್ರತಿಭಟಿಸಿ ಸರ್ಕಾರದ ಗಮನ ಸೆಳೆದಿದ್ದರು.

news18
Updated:December 1, 2020, 2:47 PM IST
ರೈತ ವಿರೋಧಿ ಕೇಂದ್ರ ಸರ್ಕಾರದ ವಿರುದ್ಧದ ರೈತರ ಹೋರಾಟಕ್ಕೆ ನಮ್ಮ ಬೆಂಬಲವಿದೆ; ಸಿದ್ದರಾಮಯ್ಯ
ಸಿದ್ದರಾಮಯ್ಯ.
  • News18
  • Last Updated: December 1, 2020, 2:47 PM IST
  • Share this:
ಬೆಂಗಳೂರು ನವೆಂಬರ್​ 01); ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರಾಷ್ಟ್ರಾದ್ಯಂತ ರೈತ ಪ್ರತಿಭಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ವಿವಿಧ ರಾಜ್ಯಗಳಿಂದ ಇದೀಗ ದೆಹಲಿಗೆ ಆಗಮಿಸಿರುವ ರೈತರು ಇಡೀ ರಾಷ್ಟ್ರ ರಾಜಧಾನಿಯನ್ನೇ ಸ್ತಬ್ಧಗೊಳಿಸುವ ಬೆದರಿಕೆ ಒಡ್ಡಿದ್ದಾರೆ. ರೈತ ಹೋರಾಟ ಏಳನೇ ದಿನಕ್ಕೆ ಕಾಲಿಟ್ಟಿದ್ದು ಸದ್ಯಕ್ಕಂತೂ ಹೋರಾಟ ಕೊನೆಗೊಳ್ಳುವ ಯಾವುದೇ ಲಕ್ಷಣಗಳೂ ಕಾಣಿಸುತ್ತಿಲ್ಲ. ಈ ನಡುವೆ ಕೃಷಿ ಮಸೂದೆಯನ್ನು ವಿರೋಧಿಸಿ ಮಿತ್ರಪಕ್ಷವಾದ ಅಕಾಲಿದಳ ಈಗಾಗಲೇ ಎನ್​ಡಿಎ ಮೈತ್ರಿ ತೊರೆದಿದೆ. ಅಲ್ಲದೆ, ಲೋಕತಾಂತ್ರಿಕ್​ ಪಕ್ಷವೂ ಮೈತ್ರಿಯಿಂದ ಹೊರನಡೆಯುವ ಎಚ್ಚರಿಕೆ ನೀಡಿದೆ. ಅನೇಕ ಪಕ್ಷಗಳು ಇದೀಗ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿವೆ. ಈ ನಡುವೆ ಇಂದು ಟ್ವೀಟ್​ ಮಾಡಿರುವ ಸಿದ್ದರಾಮಯ್ಯ ಸಹ "ರೈತ ವಿರೋಧಿ ಕೇಂದ್ರ ಸರ್ಕಾರದ ವಿರುದ್ಧದ ರೈತರ ಹೋರಾಟಕ್ಕೆ ತಮ್ಮ ಬೆಂಬಲ ಇದೆ" ಎಂದು ಘೋಷಿಸಿದ್ದಾರೆ.ಕೃಷಿ ಮಸೂದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಕುರಿತು ಟ್ವೀಟ್​ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, "ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ರೈತ ಸಮುದಾಯ ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದ್ದು, ಸರ್ಕಾರ ಹೋರಾಟವನ್ನು ಹತ್ತಿಕ್ಕುವ ಬದಲಾಗಿ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕೆಂದು ಒತ್ತಾಯಿಸುತ್ತೇನೆ. ಈ ಹೋರಾಟದಲ್ಲಿ ಅನ್ನದಾತರ ಜೊತೆ ನಾವಿದ್ದೇವೆ" ಎಂದು ತಮ್ಮ ಭರವಸೆ ನೀಡಿದ್ದಾರೆ.ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಜಾರಿಗೆ ತರಲು ನಿರ್ಧರಿಸಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯ ಕುರಿತು ಅಸಮಾಧಾನ ಹೊರಹಾಕಿರುವ ಅವರು, "ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವಂತಹ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗಳನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಿಸುತ್ತೇನೆ. ರೈತರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲಿಸಲಿದೆ. ನಾಡಿನ ರೈತ ಸಮುದಾಯದ ಜೊತೆ ಸದಾ ನಾವಿರಲಿದ್ದೇವೆ" ಎಂದಿದ್ದಾರೆ.

ಇದನ್ನೂ ಓದಿ : ಕೃಷಿ ಕಾಯ್ದೆಯನ್ನು ರದ್ದುಗೊಳಿಸದಿದ್ದರೆ ಮೈತ್ರಿಯನ್ನು ತೊರೆಯುತ್ತೇವೆ; ಲೋಕತಾಂತ್ರಿಕ್ ಪಕ್ಷ

ರಾಜ್ಯದ ಮಟ್ಟಿಗೆ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮತ್ತು ಎಪಿಎಂಸಿ  ಕಾಯ್ದೆಯನ್ನು ವಿರೋಧಿಸಿ ಕಳೆದ ಹಲವು ತಿಂಗಳುಗಳಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ರೈತರು ಇತ್ತೀಚೆಗೆ ಬೆಂಗಳೂರಿಗೂ ಬಂದು ಕಾಯ್ದೆಯ ವಿರುದ್ಧ ಪ್ರತಿಭಟಿಸಿ ಸರ್ಕಾರದ ಗಮನ ಸೆಳೆದಿದ್ದರು. ಆದರೆ, ಸರ್ಕಾರ ರೈತರ ಮನವಿಗೆ ಸ್ಪಂದಿಸಿರಲಿಲ್ಲ. ಇದೀಗ ಕೇಂದ್ರ ಸರ್ಕಾರವೂ ರೈತ ವಿರೋಧಿ ನಿಲುವು ತಳೆದಿದೆ ಎಂದು ದೊಡ್ಡ ಸಂಖ್ಯೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ಈ ಪ್ರತಿಭಟನೆಯ ಕಾವಿನ ಜೊತೆಗೆ ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಪಿ ಕಾಯ್ದೆಯ ವಿರೋಧಿ ಚಳುವಳಿ ರಾಜ್ಯದಲ್ಲಿ ಮತ್ತೆ ಮುನ್ನಲೆಗೆ ಬರಲಿದೆ, ಕಾಂಗ್ರೆಸ್​ ನಾಯಕರೂ ಸಹ ಈ ಸಂಬಂಧ ರಾಜ್ಯದಲ್ಲಿ ದೊಡ್ಡ ಮಟ್ಟದ ಹೋರಾಟಕ್ಕೆ ಮುಂದಾಗಲಿದ್ದಾರೆ ಎನ್ನಲಾಗುತ್ತಿದೆ.
Published by: MAshok Kumar
First published: December 1, 2020, 2:47 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories