ಕರ್ನಾಟಕ ಹಾಗೂ ಭಾರತದ ಪೂರ್ವ ಭಾಗದ ಎಲ್ಲಾ ರಾಜ್ಯಗಳಲ್ಲೂ ಭಾರೀ ಮಳೆ

ಕರ್ನಾಟಕ ಹಾಗೂ ಭಾರತದ ಪೂರ್ವ ಭಾಗದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Latha CG | news18-kannada
Updated:September 12, 2019, 11:20 AM IST
ಕರ್ನಾಟಕ ಹಾಗೂ ಭಾರತದ ಪೂರ್ವ ಭಾಗದ ಎಲ್ಲಾ ರಾಜ್ಯಗಳಲ್ಲೂ ಭಾರೀ ಮಳೆ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ(ಸೆ.12): ಕರ್ನಾಟಕ ಸೇರಿ ಭಾರತದ ಪೂರ್ವ ಭಾಗದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಸಿಕ್ಕಿಂನ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಬಿಹಾರ ಮತ್ತು ಜಾರ್ಖಂಡ್​​​ನಲ್ಲೂ ಸಹ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಗುಜರಾತ್​, ಮಧ್ಯಪ್ರದೇಶ, ಕೊಂಕಣ ಮತ್ತು ಗೋವಾಗಳಲ್ಲಿಯೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ ಎನ್ನಲಾಗಿದೆ.

ಕರ್ನಾಟಕದಲ್ಲೂ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಅನೇಕ ಪ್ರದೇಶಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳೀ ತೀರ ಪ್ರದೇಶಗಳಲ್ಲಿ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕೇರಳ ಹಾಗೂ ಅಂಡಮಾನ್​ ಮತ್ತು ನಿಕೋಬಾರ್​ ದ್ವೀಪಗಳಲ್ಲಿಯೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಲಾರಿ-ಬಸ್​ ನಡುವೆ ಡಿಕ್ಕಿ; ಸ್ಥಳದಲ್ಲೇ 6 ಜನರ ದುರ್ಮರಣ

ಬಿಹಾರ ಮತ್ತು ಜಾರ್ಖಂಡ್​ನಲ್ಲಿ  ಮಿಂಚು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಬಲವಾದ ಗಾಳಿ ಬೀಸಲಿದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ.ಇರಲಿದೆ ಎನ್ನಲಾಗಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಲಿದೆ. ಹೀಗಾಗಿ ಮುಂದಿನ ಕೆಲ ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.ಇನ್ನು, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರಧೇಶದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಜಮ್ಮು-ಕಾಶ್ಮೀರ, ಪಂಜಾಬ್​, ಚಂಡೀಗಡ್​, ಹರಿಯಾಣ, ದೆಹಲಿ ಮತ್ತು ರಾಜಸ್ಥಾನಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

First published: September 12, 2019, 11:05 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading