Heavy Rain: ರಾಜ್ಯದಲ್ಲಿ ಮುಂದುವರೆಯಲಿದೆ ಮುಂಗಾರಿನ ಅಬ್ಬರ; ಕೆಲ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ
Heavy Rain: ರಾಜ್ಯದಲ್ಲಿ ಮುಂದುವರೆಯಲಿದೆ ಮುಂಗಾರಿನ ಅಬ್ಬರ; ಕೆಲ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ
ಸಾಂದರ್ಭಿಕ ಚಿತ್ರ
ರಾಜ್ಯದಲ್ಲಿ ಮುಂಗಾರು ಆರ್ಭಟ ಹಂತ ಹಂತವಾಗಿ ಕಡಿಮೆ ಆಗಿದೆ. ಹೀಗಿದ್ದರೂ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಮುಂದಿನ ಮೂರು ದಿನಗಳ ಪೈಕಿ ಕರಾವಳಿಯ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಉಡುಪಿ ಜಿಲ್ಲೆಗೆ ಹಾಗೂ ಮಲೆನಾಡಿನ ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣದಿಂದ ಭಾರೀ ಮಳೆ ಬೀಳುವ ನಿರೀಕ್ಷೆ ಇದೆ.
ಮಲೆನಾಡಿನ ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಉಳಿದ ದಿನಗಳಲ್ಲಿ ಇದೇ ಜಿಲ್ಲೆಗಳಲ್ಲಿ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆ ಆಗಬಹುದು ಎನ್ನಲಾಗಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಮಲೆನಾಡು ಸದ್ಯಕ್ಕೆ ಮಳೆ ಬಿಡುವ ಕೊಡುವ ಸೂಚನೆಗಳು ಕಂಡುಬರುತ್ತಿಲ್ಲ. ಆದರೆ ಮುಂದಿನ ಕೆಲ ದಿನಗಳಲ್ಲಿ ಮಳೆಯ ಆರ್ಭಟ ಇಳಿಕೆಯಾಗುವ ಸಾಧ್ಯತೆಗಳು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರ ಭಾಗದಲ್ಲಿ ಟ್ರಪ್ ನಿರ್ಮಾಣವಾಗಿರುವುದರಿಂದ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ನಿಲ್ಲುವ ಸೂಚನೆಗಳಿಲ್ಲ.
ಇನ್ನು ಕೆಲ ದಿನ ಹೆಚ್ಚು ಕಡಿಮೆ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕೆಲ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ.
ಸದ್ಯ ದಕ್ಷಿಣ ಒಳನಾಡು ಸೇರಿದಂತೆ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಆಗಾಗ್ಗೆ ಬಲವಾದ ಗಾಳಿ ಬೀಸಲಿದೆ. ಕೆಲವಡೆ ಹಗುರದಿಂದ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ ಎಂದು ತಿಳಿಸಿದ್ದಾರೆ.
ಸದ್ಯ ದಕ್ಷಿಣ ಒಳನಾಡು ಸೇರಿದಂತೆ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಆಗಾಗ್ಗೆ ಬಲವಾದ ಗಾಳಿ ಬೀಸಲಿದೆ. ಕೆಲವಡೆ ಹಗುರದಿಂದ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ ಎಂದು ತಿಳಿಸಿದ್ದಾರೆ.
ಕರಾವಳಿಯಲ್ಲಿ ಅಲೆಗಳ ರಭಸ ಹೆಚ್ಚಿರುವ ಕಾರಣ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ಸಹ ನೀಡಲಾಗಿದೆ. ಕಡಲತೀರದಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಬಲೆ ಹಾಕಲಾಗಿದೆ.
Published by:ಪಾವನ ಎಚ್ ಎಸ್
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ