ದಾವಣಗೆರೆ: ಬಿಜೆಪಿಯಲ್ಲಿದ್ದ (BJP) ನನ್ನನ್ನು ಪಕ್ಷದಿಂದ ಹೊರ ಹಾಕಲಾಯ್ತು. ನಮ್ಮ ಮನೆ ಮುಂದೆ 10 ಸಾವಿರಕ್ಕೂ ಅಧಕ ಜನ ಬಂದಿದ್ದರು. ಚುನಾವಣೆಯಲ್ಲಿ (Election) ಸ್ಪರ್ಧೆ ಮಾಡದಿದ್ರೆ ವಿಷ ಕುಡಿಯುತ್ತೇವೆ ಎಂದು ಬೆದರಿಕೆ ಹಾಕಿದರು. ಹೀಗಾಗಿ ಸ್ವಾಭಿಮಾನದಿಂದ ಪಕ್ಷೇತರವಾಗಿ ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ (Channagiri Constituency) ಪುತ್ರ ಮಲ್ಲಿಕಾರ್ಜುನ್ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ (MLA Madal Virupakshappa) ಹೇಳಿದರು. ನನ್ನ ತಾಲೂಕಿನ ಜನರ ಮೇಲೆ ನನಗೆ ವಿಶ್ವಾಸವಿದೆ. ಕನಿಷ್ಠ ಒಂದು ಲಕ್ಷ ಮತಗಳ ಅಂತರದಿಂದ ನಾವು ಗೆಲ್ಲತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಚನ್ನಗಿರಿ ಪಟ್ಟಣದ ಊರ ಬಾಗಿಲು ಆಂಜನೇಯ ದೇವಸ್ಥಾನಕ್ಕೆ ಪೂಜೆ ಮಾಡಾಳ್ ವಿರೂಪಾಕ್ಷಪ್ಪ ವಿಶೇಷ ಪೂಜೆ ಸಲ್ಲಿಸಿದರು. ನಂತರ ರೋಡ್ ಶೋ ಮೂಲಕ ಚನ್ನಗಿರಿಯಲ್ಲಿ ಶಕ್ತಿ ಪ್ರದರ್ಶಿಸಿದರು. ಸ್ವಾಭಿಮಾನದ ಸಂಕಲ್ಪದ ಮೂಲಕ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಮಹೇಶ್ ಟೆಂಗಿನಕಾಯಿ ಶಕ್ತಿಪ್ರದರ್ಶನ
ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಮತ್ತೊಮ್ಮೆ ನಾಮಪತ್ರ ಸಲ್ಲಿಕೆ ಮಾಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಹುಬ್ಬಳ್ಳಿ ನಾಗಶೆಟ್ಟಿಕೊಪ್ಪ ಹನುಮಂತ ದೇವಸ್ಥಾನದಿಂದ ಬೃಹತ್ ರೋಡ್ ಶೋ ಮಾಡಿದರು. ನಿನ್ನೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಾಗಿತ್ತು.
ಲಿಂಗಾಯತ ಸಿಎಂ
ಬಿಜೆಪಿ ಗೆದ್ರೆ ಲಿಂಗಾಯತರನ್ನೇ ಸಿಎಂ ಮಾಡುವ ವಿಚಾರದ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾತಾಡಿದ್ದಾರೆ. ಕಾಂಗ್ರೆಸ್ನವರು ವೀರೇಂದ್ರ ಪಾಟೀಲರನ್ನ ಎಷ್ಟು ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಕಾಂಗ್ರೆಸ್ ಕೇವಲ ಮೊಸಳೆ ಕಣ್ಣೀರು ಹಾಕುತ್ತದೆ ಎಂದು ವಾಗ್ದಳಿ ನಡೆಸಿದರು.
ಸಮಾಜವನ್ನ ಒಡೆಯುವಂತ ಕೆಲಸವನ್ನ ಕಾಂಗ್ರೆಸ್ ಮಾಡುತ್ತೆ.. ನಾವು ಸಮಾಜಕ್ಕೆ ಯಾವುದೇ ರೀತಿಯ ಡ್ಯಾಮೇಜ್ ಮಾಡಿಲ್ಲ ಎಂದು ಬಾಲ್ಕಿಯಲ್ಲಿ ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ