ಕೊರೋನಾ ಸೋಂಕಿತರ ಗಮನದಲ್ಲಿರಿಸಿ ಕೊಂಡು ಈ ಬಾರಿ ರಾಜ್ಯಾದ್ಯಂತ ಪಟಾಕಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಇದೇ ವೇಳೆ ಹಸಿರು ಪಟಾಕಿ ಸಿಡಿಸಿ ಹಬ್ಬವನ್ನು ಸರಳವಾಗಿ ಆಚರಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಈ ಹಸಿರು ಪಟಾಕಿ ಈಗ ಸಾಕಷ್ಟು ಜನರಲ್ಲಿ ಕುತೂಹಲ ಮೂಡಿಸಿದೆ. ಏನಿದು ಹಸಿರು ಪಟಾಕಿ. ಹೇಗಿರುತ್ತದೆ ಎಂಬ ಪ್ರಶ್ನೆ ಕಾಡುತ್ತಿದೆ. ಅನೇಕರು ಇದರ ಹುಡುಕಾಟ ನಡೆಸಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಚಾಲ್ತಿಯಲ್ಲಿರುವ ಈ ಹಸಿರು ಪಟಾಕಿ ಬಗ್ಗೆ ಬಹುತೇಕರಿಗೆ ಅರಿವಿಲ್ಲ. ಅಲ್ಲದೇ ಈ ಹಸಿರು ಪಟಾಕಿ ಮಾರಾಟದ ಬಗ್ಗೆ ಈ ಹಿಂದೆಯೇ ವರ್ತಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಗಮನ ಸೆಳೆಯುವಲ್ಲಿ ವಿಫಲರಾಗಿದ್ದರು. ಪಟಾಕಿಯಂತೆಯೇ ಕಾಣುವ ಇದು ಪರಿಸರ ಸ್ನೇಹಿಯಾಗಿದೆ. ಹೆಚ್ಚು ಮಾಲಿನ್ಯವಲ್ಲದ ಈ ಪಟಾಕಿ ಕೇವಲ ಶೇ30ರಷ್ಟು ಪ್ರಮಾಣದ ಹೊಗೆಯನ್ನು ಹೊರಹಾಕುತ್ತದೆ. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ಪ್ರಯೋಗಾಲಯದ ಮೂಲಕ ಇದನ್ನು ಅಭಿವೃದ್ಧಿ ಪಡಿಸಲಾಗಿದೆ. ಇನ್ನು ಕಳೆದ ವರ್ಷ ಈ ಪಟಾಕಿಯನ್ನು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ದೆಹಲಿಯಲ್ಲಿ ಬಿಡುಗಡೆ ಮಾಡಿದ್ದರು.
ಕೋವಿಡ್19 ಸೋಂಕು ನಿಯಂತ್ರಿಸಲು ರಾಜ್ಯಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈ ಬಾರಿ ದೀಪಾವಳಿ ಹಬ್ಬದ ಸರಳ ಆಚರಣೆ ಸೂಕ್ತವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪರಿಸರ-ಸ್ನೇಹಿ ಪಟಾಕಿ ಬಳಸಿ ದೀಪಾವಳಿಯನ್ನು ಸುರಕ್ಷಿತವಾಗಿ ಆಚರಿಸಲು ಮುಖ್ಯಮಂತ್ರಿ @BSYBJP ಮನವಿ ಮಾಡಿದ್ದಾರೆ. pic.twitter.com/WgVKnEVg0k
— CM of Karnataka (@CMofKarnataka) November 6, 2020
ಸಾಮಾನ್ಯ ಪಟಾಕಿಗಳನ್ನು ನೈಟ್ರೇಟ್ ಮತ್ತು ಬೇರಿಯಂಗಳು ಕಂಡು ಬರುತ್ತವೆ. ಈ ರಾಸಾಯನಿಕಗಳು ಹಸಿರು ಪಟಾಕಿಗಳಲ್ಲಿ ಇರುವುದಿಲ್ಲ. ಈ ಹಸಿರು ಪಟಾಕಿಗಳು ಸ್ಪೋಟಿಸಿದಾಗ ನೀರಿನ ಆವಿ ಮತ್ತು ಹೊಗೆ ಹೊರ ಹಾಕುವುದನ್ನು ದುರ್ಬಲಗೊಳಿಸುತ್ತದೆ. ಇದರಲ್ಲಿ ಸುರಕ್ಷಿತ ಅಲ್ಯೂಮಿನಿಯಂ ಮತ್ತು ಥರ್ಮೈಟ್ ಇರುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ