ಬೆಂಗಳೂರು: ಚುನಾವಣೆ (Assembly Election 2023) ಸಮೀಪಿಸುತ್ತಿದ್ದು, ಇನ್ನು ದಿನಾಂಕ ಸಹ ಘೋಷಣೆ ಆಗಿಲ್ಲ. ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು (Congress Candidates List) ಬಿಡುಗಡೆ ಮಾಡಲು ಮುಂದಾಗಿದೆ. ಆದರೆ ಪದೇ ಪದೇ ಪಟ್ಟಿ ಬಿಡುಗಡೆ ಮುಂದೂಡಿಕೆ ಆಗುತ್ತಾ ಬಂದಿದೆ. ಯುಗಾದಿ ಮುನ್ನವೇ ಪಟ್ಟಿ ಬಿಡುಗಡೆ ಆಗಲಿದೆ ಎಂದು ಕಾಂಗ್ರೆಸ್ ನಾಯಕರು (Congress Leaders) ಹೇಳಿದ್ದರು. ಆದ್ರೆ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (KPCC President DK Shivakumar), ಪಟ್ಟಿ ಬಿಡುಗಡೆ ದಿನಾಂಕ ಮುಂದೂಡಿಕೆಯಾಗಿದ್ದು, ಕೆಲವೇ ದಿನಗಳಲ್ಲಿ ಪ್ರಕಟಿಸುತ್ತೇವೆ ಎಂದು ಹೇಳಿದರು. ಇನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Congress President Mallikarjun Kharge) ಮಾತ್ರ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ರಾಜ್ಯ ಉಸ್ತುವಾರಿ ನಾಯಕರು ನೋಡಿಕೊಳ್ಳುತ್ತಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ್ರೆ ಪ್ರಚಾರ ನಡೆಸಲು ಅನುಕೂಲ ಆಗಲಿದೆ. ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಅಮವಾಸ್ಯೆ ಕಾರಣ ವಿಳಂಬವಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಅಮಾವಾಸ್ಯೆ ಅಡ್ಡಿ?
ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅಮಾವಾಸ್ಯೆಯನ್ನು ಅಶುಭ ಎಂದು ಪರಿಗಣಿಸಲಾಗುತ್ತೆ. ಹಾಗಾಗಿ ಯುಗಾದಿ ಹಬ್ಬದಂದು ಮೊದಲ ಪಟ್ಟಿ ಬಿಡುಗಡೆಗೊಳಿಸಲಾಗುವುದು ಎಂದು ಹೇಳಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಸಹ ಇದೇ ವಿಷಯವನ್ನು ಹೇಳಿದ್ದರು.
ಶೀಘ್ರದಲ್ಲಿಯೇ ಎರಡನೇ ಪಟ್ಟಿ!
ಮೊದಲ ಪಟ್ಟಿ ಬಿಡುಗಡೆಗೊಳಿಸಲು ಯಾವುದೇ ಅಡೆತಡೆಗಳಿಲ್ಲ. ಕೆಲವು ಆಕ್ಷೇಪಣೆಗಳ ಹೊರತಾಗಿಯೂ 20 ಹೆಸರುಗಳನ್ನು ಸೇರಿಸಲಾಗಿದೆ. ಎರಡನೇ ಪಟ್ಟಿಯಲ್ಲಿ ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ.
ಇದನ್ನೂ ಓದಿ: Karnataka Politics: ಕೇಸರಿ ಪಡೆಗೆ ಶಾಕ್ ಕೊಡ್ತಾರಾ ಮತ್ತೊಬ್ಬ ನಾಯಕ? ಹಿರಿಯ ಮುಖಂಡನನ್ನ ಸೆಳೆಯಲು ‘ಕೈ’ ಪ್ಲಾನ್!
ಸಿದ್ದರಾಮಯ್ಯ ಕ್ಷೇತ್ರದ ಗೊಂದಲ
ಇನ್ನು ಮೊದಲ ಪಟ್ಟಿಯಲ್ಲಿಯೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಪ್ರಕಟಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆಯಂತೆ. ಆದ್ರೆ ಸಿದ್ದರಾಮಯ್ಯನವರು ಕ್ಷೇತ್ರ ಅಂತಿಮಗೊಳಿಸದ ಹಿನ್ನೆಲೆ ಮೊದಲ ಪಟ್ಟಿ ವಿಳಂಬವಾಗ್ತಿದೆ ಎನ್ನಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ