• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Election News: ಇದಕ್ಕೆಲ್ಲಾ ಯಾರು ಹೊಣೆ? ಪ್ರಧಾನಿ ಮುಂದೆ 9 ಪ್ರಶ್ನೆ ಇಟ್ಟ ಸಿದ್ದರಾಮಯ್ಯ

Karnataka Election News: ಇದಕ್ಕೆಲ್ಲಾ ಯಾರು ಹೊಣೆ? ಪ್ರಧಾನಿ ಮುಂದೆ 9 ಪ್ರಶ್ನೆ ಇಟ್ಟ ಸಿದ್ದರಾಮಯ್ಯ

ಸಿದ್ದರಾಮಯ್ಯ, ಮಾಜಿ ಸಿಎಂ

ಸಿದ್ದರಾಮಯ್ಯ, ಮಾಜಿ ಸಿಎಂ

ಯಾರು ಹೊಣೆ ಎನ್ನುವ ಟ್ಯಾಗ್ ಲೈನ್ ಮೂಲಕ ಪ್ರಶ್ನೆಗಳ ಸುರಿಮಳೆ ಮೂಲಕ ಮೋದಿ ಅವರನ್ನು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರ ಕೇಳಿದ ಪ್ರಶ್ನೆಗಳು ಹೀಗಿವೆ.

  • News18 Kannada
  • 3-MIN READ
  • Last Updated :
  • Karnataka, India
  • Share this:

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election 2023) ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಕರ್ನಾಟಕದಲ್ಲಿ ರೋಡ್​ಶೋ (Roadshow), ಸಮಾವೇಶಗಳಲ್ಲಿ (Public Meeting) ಭಾಗಿಯಾಗಿ ಪಕ್ಷದ ಅಭ್ಯರ್ಥಿಗಳ (BJP Candidates) ಪರ ಮತಯಾಚನೆ ಮಾಡುತ್ತಿದ್ದಾರೆ. ರಾಜ್ಯ ಪ್ರವಾಸದಲ್ಲಿರುವ ಪ್ರಧಾನಗಳಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Former CM Siddaramaiah) ಒಂಬತ್ತು ಪ್ರಶ್ನೆಗಳನ್ನು ಕೇಳಿದ್ದಾರೆ. ಯಾರು ಹೊಣೆ ಎನ್ನುವ ಟ್ಯಾಗ್ ಲೈನ್ ಮೂಲಕ ಪ್ರಶ್ನೆಗಳ ಸುರಿಮಳೆ ಮೂಲಕ ಮೋದಿ ಅವರನ್ನು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರ ಕೇಳಿದ ಪ್ರಶ್ನೆಗಳು ಹೀಗಿವೆ.


ಪ್ರಶ್ನೆ 1


ಯಾರು ಹೊಣೆ, ಪ್ರಧಾನ ಮಂತ್ರಿಯವರು ಕರ್ನಾಟಕದಲ್ಲಿಯೇ ಠಿಕಾಣಿ ಹೂಡಿ ಬಾಯಿತುಂಬಾ ಮಾತನಾಡುತ್ತಿದ್ದಾರೆ. ಆದರೆ ಇದೇ ಕರ್ನಾಟಕದ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರು ಪ್ರಧಾನಿಗಳಿಗೆ ಪತ್ರ ಬರೆಯುವಷ್ಟು ಇಲ್ಲಿ ಭ್ರಷ್ಟಚಾರ ತಾರಕಕ್ಕೇರಿದೆ. ಇದಕ್ಕೆಲ್ಲಾ ಯಾರು ಹೊಣೆ?


ಪ್ರಶ್ನೆ 2


ಅಪರಾಧ ಸಂಖ್ಯೆಗಳ ಹೆಚ್ಚಳ, ಕುಸಿದು ಬಿದ್ದಿರುವ ಮೂಲಸೌಕರ್ಯ ವ್ಯವಸ್ಥೆ ಮತ್ತು ಗುಂಡಿಬಿದ್ದ ರಸ್ತೆಗಳಿಂದಾಗಿ ಜಾಗತಿಕ ವಾಸಯೋಗ್ಯ ಸೂಚ್ಯಾಂಕದಲ್ಲಿ ಬೆಂಗಳೂರು ಕನಿಷ್ಠ ಶ್ರೇಣಿಗೆ ತಲುಪಿದೆ. ಇದಕ್ಕೆಲ್ಲಾ ಯಾರು ಹೊಣೆ?


check out photos of the pm s second day of roadshow
ಪ್ರಧಾನಿ ಮೋದಿ ರೋಡ್​ ಶೋ


ಪ್ರಶ್ನೆ 3


ಎನ್. ಸಿ. ಆರ್. ಬಿ ವರದಿ ಪ್ರಕಾರ ದೇಶದ ಮೆಟ್ರೋಪಾಲಿಟನ್ ನಗರಗಳಲ್ಲಿ ನಡೆಯುವ ಅಪರಾಧಗಳ ಪೈಕಿ 72% ಕಳ್ಳತನಗಳು ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಕಾರಣ ಬೆಂಗಳೂರು ನಗರ ಈಗ ಅಪರಾಧಗಳ ತಾಣವಾಗಿದೆ. ಇದಕ್ಕೆಲ್ಲಾ ಯಾರು ಹೊಣೆ?


ಪ್ರಶ್ನೆ 4


ಶೇಕಡಾ 48% ವಾಹನದಟ್ಟಣೆಯ ಪ್ರಮಾಣದಿಂದಾಗಿ ಬೆಂಗಳೂರು ನಗರ ದೇಶದಲ್ಲಿ ಎರಡನೇ ಅತ್ಯಂತ ಹೆಚ್ಚು ವಾಹನ ದಟ್ಟಣೆಯ ನಗರ ಎಂಬ ಕುಖ್ಯಾತಿಗೆ ಒಳಪಟ್ಟಿದೆ. ಇದರಿಂದಾಗಿ ನಗರವಾಸಿಗಳು ಮನೆಗಿಂತ ಹೆಚ್ಚಿನ ಸಮಯ ರಸ್ತೆಯಲ್ಲಿ ಕಳೆಯುವಂತಾಗಿದೆ. ಇದಕ್ಕೆಲ್ಲಾ ಯಾರು ಹೊಣೆ?




ಪ್ರಶ್ನೆ 5


ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಲು ರೂಪಿಸಲಾಗಿರುವ ಮೇಕೆದಾಟು ಯೋಜನೆ ಅನುಮತಿ ನೀಡದೆ ಇರುವ ಕಾರಣದಿಂದಾಗಿ ನಗರದಲ್ಲಿ ಕುಡಿಯುವ ನೀರಿನ ಕೊರತೆ ಹೆಚ್ಚಾಗುತ್ತಿದೆ. ನಗರದ ಜನ ಕುಡಿಯುವ ನೀರಿಗಾಗಿ ಖಾಸಗಿ ಬೋರ್ ವೆಲ್ ಮತ್ತು ಟ್ಯಾಂಕರ್ ನೀರನ್ನು ಬಳಸುತ್ತಿದ್ದಾರೆ. ಇದಕ್ಕೆಲ್ಲಾ ಯಾರು ಹೊಣೆ?


ಪ್ರಶ್ನೆ 6


ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೇಲೆ ದೌರ್ಜನ್ಯದ ಪ್ರಮಾಣ 2021ರಲ್ಲಿ ಶೇಕಡಾ 18 ರಷ್ಟು ಹೆಚ್ಚಾಗುತ್ತಿದೆ. NDPS ಕಾಯ್ದೆಯಡಿ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ 1493% ರಷ್ಟು ಹೆಚ್ಚಾಗಿವೆ. 2021 ರಲ್ಲಿ ಇಮ್ಮೋರಲ್ ಟ್ರಾಪಿಕಿಂಗ್ ಶೇಕಡಾ 61 ರಷ್ಟು ಹೆಚ್ಚಾಗಿದೆ. ಇದಕ್ಕೆಲ್ಲಾ ಯಾರು ಹೊಣೆ?




ಪ್ರಶ್ನೆ 7


ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಾನಗಳ ನಗರ, ಸಿಲಿಕಾನ್ ಸಿಟಿ, ಐಟಿ ಬಿಟಿ ರಾಜಧಾನಿ, ಸ್ಮಾರ್ಟ್ಅಪ್ ರಾಜಧಾನಿ ಎಂದೆಲ್ಲ ಖ್ಯಾತಿಗಳಿಸಿತ್ತು. ಬಿಜೆಪಿ ಸರ್ಕಾರದ ಕಾಲದಲ್ಲಿ ಗುಂಡಿಬಿದ್ದ ರಸ್ತೆಗಳು, ನೆರೆನೀರಿನಲ್ಲಿ ಮುಳುಗುವ ಮನೆಗಳು, ಅಪರಾಧಿಗಳ ಜಗತ್ತಿನ ರಾಜಧಾನಿ ಎಂಬ ಕುಖ್ಯಾತಿಗಳಿಸಿದೆ. ಇದಕ್ಕೆಲ್ಲಾ ಯಾರು ಹೊಣೆ?


ಪ್ರಶ್ನೆ 8


ಕಳೆದ ಮೂರು ವರ್ಷಗಳಲ್ಲಿ ಕೇವಲ ಗುಂಡಿಬಿದ್ದ ರಸ್ತೆಗಳಿಂದಾಗಿ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಬಿಬಿಎಂಪಿ ಕೇವಲ ರಸ್ತೆ ಗುಂಡಿಮುಚ್ಚಲು 7,121 ಕೋಟಿ ಖರ್ಚು ಮಾಡಿದರೂ ಇನ್ನು ನೂರಾರು ಹಳೆಯ ಗುಂಡಿಗಳು ಉಳಿದಿವೆ, ಹೊಸ ಗುಂಡಿಗಳು ತಯಾರಾಗುತ್ತಿವೆ. ಇದಕ್ಕೆಲ್ಲಾ ಯಾರು ಹೊಣೆ?


ಇದನ್ನೂ ಓದಿ:  DK Shivakumar: ಚುನಾವಣಾ ಅಖಾಡದಲ್ಲಿ ಡಿಕೆ ಶಿವಕುಮಾರ್ ಪುತ್ರ; ತಂದೆಯ ಪರ ಆಕಾಶ್​​ ಭರ್ಜರಿ ಪ್ರಚಾರ


ಪ್ರಶ್ನೆ 9

top videos


    ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಮಶೀಲರ ಆಸಕ್ತಿಯ ನಂಬರ್ ಒನ್ ತಾಣವಾಗಿತ್ತು. ಬಿಜೆಪಿ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಮಶೀಲರ ಆಸಕ್ತಿಯ ನಗರಗಳ ಪಟ್ಟಿಯಲ್ಲಿ ಹದಿನೇಳನೇ ಸ್ಥಾನಕ್ಕೆ ಕುಸಿದಿದೆ. ಇದಕ್ಕೆಲ್ಲಾ ಯಾರು ಹೊಣೆ..?

    First published: