ಉತ್ತರ ಕರ್ನಾಟಕಕ್ಕೆ ಬರಲು ಮುಖ್ಯಮಂತ್ರಿಗಳಿಗೇನು ದಾಡಿ - ಕೇಂದ್ರ ಸಚಿವ ರಮೇಶ್ ಜಿಗಜಿಣಗಿ

news18
Updated:September 11, 2018, 8:58 PM IST
ಉತ್ತರ ಕರ್ನಾಟಕಕ್ಕೆ ಬರಲು ಮುಖ್ಯಮಂತ್ರಿಗಳಿಗೇನು ದಾಡಿ - ಕೇಂದ್ರ ಸಚಿವ ರಮೇಶ್ ಜಿಗಜಿಣಗಿ
news18
Updated: September 11, 2018, 8:58 PM IST
- ಶಿವರಾಮ ಅಸುಂಡಿ, ನ್ಯೂಸ್ 18 ಕನ್ನಡ

ಕಲಬುರ್ಗಿ ( ಸೆ.11) :  ಇದೇನು ಸರ್ಕಾರವೇನ್ರೀ. ಇದಕ್ಕೆ ಸರ್ಕಾರವೆಂತಾರೇನ್ರೀ ಎಂದು ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ದ ಕೇಂದ್ರ ಗ್ರಾಮೀಣ ಕುಡಿಯುವ ನೀರು, ನೈರ್ಮಲೀಕರಣ ಸಚಿವ ರಮೇಶ ಜಿಗಜಿಣಗಿ ಕಿಡಿಕಾರಿದ್ದಾರೆ.

ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸಮ್ಮಿಶ್ರ ಸರ್ಕಾರದ್ದು ಅನೈತಿಕ ಮದುವೆ. ಸಮ್ಮಿಶ್ರ ಸರ್ಕಾರ ರಾಜ್ಯದ ಅಭಿವೃದ್ಧಿ ಸಂಪೂರ್ಣ ಕಡೆಗಣಿಸಿದೆ. ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ದಕ್ಷಿಣ ಕರ್ನಾಟಕಕ್ಕಷ್ಟೇ ಸೀಮಿತವಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿ ಮಳೆ ಇಲ್ಲದೇ ಬರ ಬಂದಿದ್ದರೂ ಇತ್ತ ಗಮನ ಹರಿಸುತ್ತಿಲ್ಲ. ಉತ್ತರ ಕರ್ನಾಟಕದ ಕಡೆ ಬರದಿರಲು ಸಿಎಂಗೇನು ದಾಡಿಬಡಿದಿದೆಯಾ ಎಂದು ಪ್ರಶ್ನಿಸಿದ್ದಾರೆ.

ನಾವೇನು ಜಾರಕಿಹೊಳಿ ಬ್ರದರ್ಸ್ ಗೆ ಬಿಜೆಪಿಗೆ ಬರಲು ಹೇಳುತ್ತಿಲ್ಲ. ಆದರೆ ಅವರಾಗಿಯೇ ಬಿಜೆಪಿಗೆ ಬರುತ್ತೇವೆ ಎಂದರೆ ಹೊರದಬ್ಬಲಾಗುತ್ತದೆಯೇ ಎಂದು ಕೇಂದ್ರ ಗ್ರಾಮೀಣ ನೀರು ಸರಬರಾಜು, ನೈರ್ಮಲೀಕರಣ ಸಚಿವ ರಮೇಶ್ ಜಿಗಜಿಣಗಿ ಪ್ರಶ್ನಿಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ರಮೇಶ್ ಜಿಗಜಿಣಗಿ, ಬಿಜೆಪಿ ಆಪರೇಷನ್ ಕಮಲ ಮಾಡ್ತಿಲ್ಲ, ಅವರಾಗಿಯೇ ಬಿಜೆಪಿಗೆ ಬರ್ತಾರೆ ಅನ್ನೋದಾದರೆ ಬೇಡವೆನ್ನುವುದಿಲ್ಲ. ರಾಜನೀತಿ ಎಂದರೆ ಹೀಗೆಯೇ ಇರುತ್ತದೆ ಎಂದು ತಿಳಿಸಿದರು. ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರದ ಮೇಲೆ ವಿಶ್ವಾಸವಿಲ್ಲದವರು ಬಿಜೆಪಿಯ ಕದ ತಟ್ಟುತ್ತಿದ್ದಾರೆ. ಕದ ತಟ್ಟುವವರನ್ನು ಬರಮಾಡಿಕೊಳ್ಳುತ್ತೇವೆ ಎಂದರು.

ಸೋಲುವ ಕೇಂದ್ರ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇದ್ದರೂ ಇರಬಹುದು, ಸೋಲು ಗೆಲುವಿನ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ, ಇಲ್ಲದಿದ್ದಲ್ಲಿ ಸಾಮಾನ್ಯ ಕಾರ್ಯಕರ್ತನಂತೆ ದುಡಿಯುತ್ತೇನೆ ಎಂದು ರಮೇಶ್ ಜಿಗಜಿಣಗಿ ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಂತರಿಕ ಸಮೀಕ್ಷೆ ಕುರಿತು ಪ್ರತಿಕ್ರಿಯಿಸಿದ ಜಿಗಜಿಣಗಿ, ಯಾರು ಏನು ಸಮೀಕ್ಷೆ ಮಾಡಿಸಿದ್ದಾರೋ ಗೊತ್ತಿಲ್ಲ. ಸಮೀಕ್ಷೆಯಲ್ಲಿ ಏನಿದೆಯೋ ಗೊತ್ತಿಲ್ಲ. ನಾನು ಸೋವುದಾಗಿ ವರದಿಯೂ ಇದ್ದಿರಬಹುದು.
Loading...

ಆದರೆ ಇದರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಬಿಜೆಪಿ ಟಿಕೇಟ್ ಕೊಟ್ಟರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಬೇರೆಯವರಿಗೆ ಟಿಕೇಟ್ ಕೊಟ್ಟರೂ ನನ್ನದೇನೂ ಅಭ್ಯಂತರವಿಲ್ಲ. ಬಿಜೆಪಿ ಟಿಕೆಟ್ ಕೊಟ್ಟವರಿಗೆ ಹತ್ತು ರೂಪಾಯಿ ದಾನ ನೀಡಿ ಅವರ ಗೆಲುವಿಗೆ ಶ್ರಮಿಸುತ್ತೇನೆ ಎಂದರು.
First published:September 11, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ