HOME » NEWS » State » WHY ARE YOU SHY KARNATAKA HIGH COURT ASKS GOVT ON MENTIONING TRANSFER RECOMMENDATIONS OF LAWMAKERS SNVS

ಪೊಲೀಸ್ ವರ್ಗಾವಣೆ ಪ್ರಕರಣ: ರಾಜಕಾರಣಿಗಳ ಶಿಫಾರಸು ಎಂದು ಹೇಳಲು ಏನಡ್ಡಿ? – ಸರ್ಕಾರಕ್ಕೆ ಕೋರ್ಟ್ ತರಾಟೆ

ಹೈಕೋರ್ಟ್​ನಲ್ಲಿ ನಡೆಯುತ್ತಿರುವ ಈ ವಿಚಾರಣೆಗೆ ಮೂಲವಾಗಿರುವುದು ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘದ ಅಧ್ಯಕ್ಷ ವಿ. ಶಶಿಧರ್ ಅವರು ಸಲ್ಲಿಸಿದ್ದ ರಿಟ್ ಅರ್ಜಿ. ಪೊಲೀಸ್ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿರುವ ರಾಜಕಾರಣಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಕೋರಿ ಅವರು ಈ ಅರ್ಜಿ ಸಲ್ಲಿಸಿದ್ಧರು.

news18
Updated:January 24, 2020, 3:53 PM IST
ಪೊಲೀಸ್ ವರ್ಗಾವಣೆ ಪ್ರಕರಣ: ರಾಜಕಾರಣಿಗಳ ಶಿಫಾರಸು ಎಂದು ಹೇಳಲು ಏನಡ್ಡಿ? – ಸರ್ಕಾರಕ್ಕೆ ಕೋರ್ಟ್ ತರಾಟೆ
ಕರ್ನಾಟಕ ಹೈಕೋರ್ಟ್
  • News18
  • Last Updated: January 24, 2020, 3:53 PM IST
  • Share this:
ಬೆಂಗಳೂರು(ಜ. 24): ಪೊಲೀಸರ ವರ್ಗಾವಣೆಯಲ್ಲಿ ಜನಪ್ರತಿನಿಧಿಗಳಿಂದ ಶಿಫಾರಸು ಆಗುತ್ತಿರುವುದನ್ನು ಯಾಕೆ ಉಲ್ಲೇಖಿಸುವುದಿಲ್ಲ ಎಂದು ರಾಜ್ಯ ಉಚ್ಚ ನ್ಯಾಯಾಲಯವು ಸರ್ಕಾರವನ್ನು ಪ್ರಶ್ನಿಸಿದೆ. ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘದ ಅಧ್ಯಕ್ಷ ವಿ. ಶಶಿಧರ್ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು ಪೊಲೀಸ್ ವರ್ಗಾವಣೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಆಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಉಚ್ಚ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾ| ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠವು ಈ ವಿಚಾರಣೆಯ ವೇಳೆ ರಾಜ್ಯ ಸರ್ಕಾರದ ಉತ್ತರ ಸಮಾಧಾನ ತರಲಿಲ್ಲ. ಪೊಲೀಸ್ ವರ್ಗಾವಣೆಯಲ್ಲಿ ಶಿಫಾರಸುಗಳನ್ನು ಪರಿಗಣಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಅಫಿಡವಿಟ್ ಮೂಲಕ ಉತ್ತರ ಸಲ್ಲಿಸಿತ್ತು. ಶಿಫಾರಸು ಎಂದು ಬರೆದಿದ್ದೀರಿ. ಆದರೆ, ಜನಪ್ರತಿನಿಧಿಗಳ ಶಿಫಾರಸು ಎಂದು ಯಾಕೆ ಉಲ್ಲೇಖಿಸಿಲ್ಲ ಎಂದು ನ್ಯಾಯಪೀಠವು ಪ್ರಶ್ನೆ ಮಾಡಿತು.

ಇದನ್ನೂ ಓದಿ: ನೃತ್ಯಾಭ್ಯಾಸ ಮಾಡುತ್ತಲೇ ಜೀವಬಿಟ್ಟ ವಿದ್ಯಾರ್ಥಿನಿ; ಬಾಲಕಿ ಕುಸಿದು ಬಿದ್ದರೂ ಸುಮ್ಮನೆ ಕುಳಿತ ಶಿಕ್ಷಕ

“ಪೊಲೀಸ್ ವರ್ಗಾವಣೆಗೆ ಬರುವ ಶಿಫಾರಸು ಪತ್ರಗಳನ್ನು ಮಂಡಳಿ ನಿರ್ಲಕ್ಷಿಸುತ್ತದೆ. ಪ್ರಕಾಶ್ ಸಿಂಗ್ ಮತ್ತಿತರರ ಪ್ರಕರಣದಲ್ಲಿ ಉಚ್ಚ ನ್ಯಾಯಾಲಯದ ಆದೇಶ ಮತ್ತು ಸರ್ವೋಚ್ಚ ನ್ಯಾಯಾಲಯದ ಅಭಿಪ್ರಾಯದ ಪ್ರಕಾರವಾಗಿ ಮಂಡಳಿ ನಿರ್ಧಾರ ಕೈಗೊಳ್ಳುತ್ತದೆ” ಎಂದು ರಾಜ್ಯ ಡಿಜಿ-ಐಜಿಪಿ ನೀಲಮಣಿ ಎನ್. ರಾಜು ಅವರು ಹೈಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ್ದರು.

ಡಿವೈಎಸ್​ಪಿ ಹಾಗೂ ಅದಕ್ಕಿಂತ ಕೆಳಗಿನ ಶ್ರೇಣಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ, ಬಡ್ತಿ ಇತ್ಯಾದಿ ವಿಚಾರಗಳಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದು ಪೊಲೀಸ್ ಎಸ್ಟಾಬ್ಲಿಶ್ಮೆಂಟ್ ಬೋರ್ಡ್ (ಪೊಲೀಸ್ ಸಿಬ್ಬಂದಿ ಮಂಡಳಿ). ಡಿಜಿ-ಐಜಿಪಿ ನೀಲಮಣಿ ರಾಜು ಅವರು ಈ ಮಂಡಳಿಯ ಅಧ್ಯಕ್ಷರೂ ಆಗಿದ್ಧಾರೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ ವಿಳಂಬಕ್ಕೆ ಬಿಸಿ ಪಾಟೀಲ್ ಬೇಸರ‌; ಲಕ್ಷ್ಮಣ್ ಸವದಿ ರಾಜೀನಾಮೆ ಪಡೆಯಲು ಆರ್.ಶಂಕರ್ ಆಗ್ರಹ

ಇಂಥ ವರ್ಗಾವಣೆಯಲ್ಲಿ ಜನಪ್ರತಿನಿಧಿಗಳ ಪ್ರಭಾವ ಇರಬಾರದು. ಅವರು ಕಳುಹಿಸುವ ಶಿಫಾರಸು ಪತ್ರಗಳನ್ನು ನಿರ್ಲಕ್ಷಿಸುತ್ತೀರೆಂದು ಭರವಸೆ ನೀಡಿ ಎಂದು ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಬೋರ್ಡ್​ಗೆ 2019, ಅಕ್ಟೋಬರ್ 25ರಂದು ನೀಡಿದ ತೀರ್ಪಿನಲ್ಲಿ ಹೈಕೋರ್ಟ್ ಸೂಚಿಸಿತ್ತು. ಅದಕ್ಕೆ ಉತ್ತರವಾಗಿ ಡಿಜಿ-ಐಜಿಪಿ ಅವರು ಇಂದು ಅಫಿಡವಿಟನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದರಲ್ಲಿ ಅವರು ರಾಜಕಾರಣಿಗಳ ಶಿಫಾರಸು ಎನ್ನುವ ಬದಲು ಕೇವಲ ಶಿಫಾರಸು ಎಂದು ಬರೆದದ್ದು ಕೋರ್ಟ್​ಗೆ ಅಸಮಾಧಾನ ತಂದಿದೆ. ಸರಿಯಾದ ರೀತಿಯಲ್ಲಿ ಮತ್ತೊಮ್ಮೆ ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದ ರಾಜ್ಯ ಸರ್ಕಾರವು ಅದಕ್ಕಾಗಿ ಕಾಲಾವಕಾಶವನ್ನೂ ಕೇಳಿಕೊಂಡಿತು. ನ್ಯಾಯಪೀಠವು ಮುಂದಿನ ವಿಚಾರಣೆಯನ್ನು ಫೆ. 13ಕ್ಕೆ ನಿಗದಿಪಡಿಸಿದೆ. ಅಂದು ರಾಜ್ಯ ಸರ್ಕಾರ ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಬೇಕಾಗುತ್ತದೆ.ಹೈಕೋರ್ಟ್​ನಲ್ಲಿ ನಡೆಯುತ್ತಿರುವ ಈ ವಿಚಾರಣೆಗೆ ಮೂಲವಾಗಿರುವುದು ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘದ ಅಧ್ಯಕ್ಷ ವಿ. ಶಶಿಧರ್ ಅವರು ಸಲ್ಲಿಸಿದ್ದ ರಿಟ್ ಅರ್ಜಿ. ಪೊಲೀಸ್ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿರುವ ರಾಜಕಾರಣಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಕೋರಿ ಅವರು ಈ ಅರ್ಜಿ ಸಲ್ಲಿಸಿದ್ಧಾರೆ.

(ವರದಿ: ರೇವತಿ ರಾಜೀವನ್)

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.

Youtube Video
First published: January 24, 2020, 3:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories