BJP ಅವರೇ ನಿಮಗೆ ಬಡವರನ್ನು ಕಂಡ್ರೆ ಯಾಕಿಷ್ಟು ಹೊಟ್ಟೆ ಉರಿ? ಸಿದ್ದರಾಮಯ್ಯ

ಸಿದ್ದರಾಮಯ್ಯ, ಮಾಜಿ ಸಿಎಂ

ಸಿದ್ದರಾಮಯ್ಯ, ಮಾಜಿ ಸಿಎಂ

40% ಕಮಿಷನ್ ದಂಧೆಯಲ್ಲಿ ಸಾವಿರಾರು ಕೋಟಿ ಲೂಟಿ ಮಾಡುವವರಿಗೆ ಬಡವರ ಹಸಿವು ನೀಗಿಸಲು ನೂರಿನ್ನೂರು ಕೋಟಿ ಖರ್ಚು ಮಾಡಲಾಗದ್ದು ದುರಂತ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

  • Share this:

ಬೆಂಗಳೂರು: ಕಾಂಗ್ರೆಸ್ ಸರ್ಕಾರದ (Congress Government) ಜನಪ್ರಿಯ ಯೋಜನೆಯಾದ ಇಂದಿರಾ ಕ್ಯಾಂಟೀನ್​ಗಳು (Indira Canteen) ಹಂತ ಹಂತವಾಗಿ ಬಂದ್ ಆಗುತ್ತಿರೋದಕ್ಕೆ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Former CM Siddaramaiah) ಆಕ್ರೋಶ ಹೊರಹಾಕಿದ್ದಾರೆ. ಸಾಲು ಸಾಲು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿಜೆಪಿ (BJP) ಅವರೇ ನಿಮಗೆ ಬಡವರನ್ನು (Poor People) ಕಂಡ್ರೆ ಯಾಕಿಷ್ಟು ಹೊಟ್ಟೆ ಉರಿ ಎಂದು ಪ್ರಶ್ನೆ ಮಾಡಿದ್ದಾರೆ. ಇಂದಿರಾ ಕ್ಯಾಂಟೀನ್ ಗಳನ್ನು ಮೊದಲ ದಿನದಿಂದಲೇ ವಿರೋಧಿಸುತ್ತ ಬಂದಿದ್ದ ಬಿಜೆಪಿ ಈಗ ಅವುಗಳನ್ನು ಶಾಶ್ವತವಾಗಿ ಮುಚ್ಚಲು ಹೊರಟಿದೆ. ಇದು ಬಡವರ ಹೊಟ್ಟೆಯ ಮೇಲೆ ಹೊಡೆಯುವ ರಾಕ್ಷಸಿ ಕೃತ್ಯ. ಸರ್ಕಾರ (BJP Government) ತನ್ನ ನಿಲುವು ಬದಲಿಸಿಕೊಳ್ಳದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.


ಬಡವರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಬೇರೆ ಊರುಗಳಿಂದ ನಗರ-ಪಟ್ಟಣಕ್ಕೆ ಬಂದವರ ಹಸಿದ ಹೊಟ್ಟೆ ತಣಿಸಲು ನಮ್ಮ ಸರ್ಕಾರ ರಾಜ್ಯಾದ್ಯಂತ 400 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಯಾಕೆ ಈ ದುಷ್ಟಬುದ್ಧಿ?


ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 195 ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸಿದ್ದೆವು. ಇದರ ಜೊತೆಗೆ 25 ಮೊಬೈಲ್ ಕ್ಯಾಂಟೀನ್ ಗಳನ್ನೂ ತೆರೆಯಲಾಗಿತ್ತು. 2017-18ರ ಬಜೆಟ್​​ನಲ್ಲಿಯೇ ಇದಕ್ಕಾಗಿ 145 ಕೋಟಿ ರೂಪಾಯಿ ಒದಗಿಸಿದ್ದೆ. ಇಂಥಾ ಜನಪರ ಕಾರ್ಯಕ್ರಮದ ತಲೆಯ ಮೇಲೆ ಚಪ್ಪಡಿ ಎಳೆಯುವ ದುಷ್ಟಬುದ್ದಿ ನಿಮಗೆ ಯಾಕೆ ಬಂತು ಬಸವರಾಜ್ ಬೊಮ್ಮಾಯಿ ಅವರೇ ಎಂದು ಕೇಳಿದ್ದಾರೆ.


indira canteen, karnataka politics, indira canteen food, indira canteen timing, indira canteen food quality, indira canteen near me, indira canteen place, indira canteen food price, indira canteen details, kannada news, karnataka news, indira canteen token, indira canteen politics, ಇಂದಿರಾ ಕ್ಯಾಂಟೀನ್ ಆಹಾರ, ಇಂದಿರಾ ಕ್ಯಾಂಟೀನ್ ಕ್ಲೋಸ್, indira canteen closing time, indira canteen closed
ಇಂದಿರಾ ಕ್ಯಾಂಟೀನ್


ಕಳಪೆ ಗುಣಮಟ್ಟದ ಆಹಾರ ನೀಡಿ, ಸ್ವಚ್ಚತೆಯನ್ನು ಕಾಪಾಡದೆ ಗಲೀಜು ಮಾಡಿ, ಗುತ್ತಿಗೆದಾರರ ಬಿಲ್ ಬಾಕಿ ಇಟ್ಟುಕೊಂಡು, ಹೀಗೆ ನಾನಾ ರೀತಿಯ ಹುನ್ನಾರದ ಮೂಲಕ ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚಲಾಗುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
50ಕ್ಕೂ ಹೆಚ್ಚು ಕ್ಯಾಂಟೀನ್ ಬಂದ್!


ನಮ್ಮ ಕಾಲದ ಕ್ಯಾಂಟೀನ್ ಗಳ ಆಹಾರದ ಗುಣಮಟ್ಟ ಮತ್ತು ಸ್ವಚ್ಚತೆಯನ್ನು ನೋಡಿ ಬಡವರು ಮಾತ್ರವಲ್ಲ, ಶ್ರೀಮಂತರು ಕೂಡಾ ಕ್ಯಾಂಟೀನ್ ಗೆ ಬರುತ್ತಿದ್ದರು. ಈಗ ಬಡವರನ್ನು ಕೂಡಾ ಕ್ಯಾಂಟೀನ್ ಗಳಿಂದ ದೂರ ಓಡಿಸಲಾಗುತ್ತಿದೆ. ಈಗಾಗಲೇ 50 ಕ್ಕೂ ಹೆಚ್ಚು ಕ್ಯಾಂಟೀನ್ ಗಳನ್ನು ಗಿರಾಕಿಗಳಿಲ್ಲ ಎನ್ನುವ ಕಾರಣ ನೀಡಿ ಮುಚ್ಚಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 35 ಕ್ಯಾಂಟೀನ್ ಗಳನ್ನು ಮುಚ್ಚಲು ನಿರ್ಧರಿಸಲಾಗಿದೆಯಂತೆ ಎಂದು ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ.


ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹೆಸರಿದೆ ಎನ್ನುವ ಏಕೈಕ ಕಾರಣಕ್ಕೆ ಎಲ್ಲಾ ಕ್ಯಾಂಟೀನ್ ಗಳನ್ನೇ ಬಂದ್ ಮಾಡುವುದು ಅಕ್ಷಮ್ಯ. ತಮಿಳುನಾಡಿನಲ್ಲಿ ಜಯಲಲಿತಾ ಅವರು ಮುಖ್ಯಮಂತ್ರಿಯಾಗಿದ್ದಾಗ ಅಮ್ಮ ಕ್ಯಾಂಟೀನ್ ಗಳನ್ನು ಸ್ಥಾಪಿಸಿದ್ದರು. ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆ ಕ್ಯಾಂಟೀನ್ ಗಳನ್ನು ಇನ್ನಷ್ಟು ಸುಧಾರಿಸಿ ವಿಸ್ತರಿಸಲಾಗುತ್ತಿದೆ. ಆದರೆ ಇಲ್ಲಿ ಬಿಜೆಪಿ ಅವುಗಳು ಕಾಂಗ್ರೆಸ್ ಪಕ್ಷದ ಯೋಜನೆ ಎನ್ನುವ ಕಾರಣಕ್ಕೆ ಮುಚ್ಚಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: Siddaramaiah: ಮಾಡಾಳು ಲಂಚ ಪ್ರಕರಣದ ದಿಕ್ಕು ತಪ್ಪಿಸಲು ಬಿಜೆಪಿ ಪ್ಲಾನ್! ಕಾಫಿ-ತಿಂಡಿ ಹಗರಣ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು


ಸರ್ಕಾರದ ಬಳಿ ಹಣ ಇಲ್ಲವಾ?


ಬಿಜೆಪಿ ತಾವು ಅಧಿಕಾರಕ್ಕೆ ಬಂದರೆ ಕೈಗೆಟಕುವ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಆಹಾರ ಒದಗಿಸಲು ಜಿಲ್ಲಾ ಕೇಂದ್ರಗಳಲ್ಲಿ ಮೂರು ಮತ್ತು ಪ್ರತಿ ತಾಲೂಕು ಕೇಂದ್ರದಲ್ಲಿ ಒಂದು ಹೀಗೆ 300ಕ್ಕಿಂತಲೂ ಹೆಚ್ಚು ‘ಮುಖ್ಯಮಂತ್ರಿ ಕ್ಯಾಂಟೀನ್  ಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಹೊಸ ಕ್ಯಾಂಟೀನ್ ತೆರೆಯುವುದು ಬಿಡಿ, ಹಳೆಯ ಕ್ಯಾಂಟೀನ್ ಗಳನ್ನು ಕೂಡಾ ಬಿಜೆಪಿ ಮುಚ್ಚಿ ಬಡವರ ಹೊಟ್ಟೆಗೆ ಹೊಡೆಯಲು ಹೊರಟಿದೆ.


indira canteen, karnataka politics, indira canteen food, indira canteen timing, indira canteen food quality, indira canteen near me, indira canteen place, indira canteen food price, indira canteen details, kannada news, karnataka news, indira canteen token, indira canteen politics, ಇಂದಿರಾ ಕ್ಯಾಂಟೀನ್ ಆಹಾರ, ಇಂದಿರಾ ಕ್ಯಾಂಟೀನ್ ಕ್ಲೋಸ್, indira canteen closing time, indira canteen closed
ಇಂದಿರಾ ಕ್ಯಾಂಟೀನ್


40% ಕಮಿಷನ್ ದಂಧೆಯಲ್ಲಿ ಸಾವಿರಾರು ಕೋಟಿ ಲೂಟಿ ಮಾಡುವವರಿಗೆ ಬಡವರ ಹಸಿವು ನೀಗಿಸಲು ನೂರಿನ್ನೂರು ಕೋಟಿ ಖರ್ಚು ಮಾಡಲಾಗದ್ದು ದುರಂತ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

Published by:Mahmadrafik K
First published: