Tejaswini Ananth Kumar: ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟಕ್ಕೆ ಮೊಟ್ಟೆ ಯಾಕೆ? ಸರ್ಕಾರಕ್ಕೆ ತೇಜಸ್ವಿನಿ ಪ್ರಶ್ನೆ

ಕರ್ನಾಟಕ ಸರ್ಕಾರ ಮಧ್ಯಾಹ್ನದ ಊಟದಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆಯನ್ನು ನೀಡಲು ಯಾಕೆ ನಿರ್ಧರಿಸಿದೆ? ಪೋಷಕಾಂಶಕ್ಕೆ ಇದು ಏಕೈಕ ಮೂಲವೇನಲ್ಲ. ಸಸ್ಯಾಹಾರಿಗಳಾಗಿರುವ ಅನೇಕ ವಿದ್ಯಾರ್ಥಿಗಳು ಇದರಿಂದ ಹೊರಗುಳಿಯುವಂತಾಗಲಿದೆ

ತೇಜಸ್ವಿನಿ ಅನಂತ್​ ಕುಮಾರ್

ತೇಜಸ್ವಿನಿ ಅನಂತ್​ ಕುಮಾರ್

  • Share this:
ಬೆಂಗಳೂರು (ಆ.02): ಹಲವು ಪರ-ವಿರೋಧ, ವಾದ-ವಿವಾದಗಳ ಬಳಿಕ ರಾಜ್ಯ ಬಿಜೆಪಿ ಸರ್ಕಾರ ಶಾಲೆಗಳಲ್ಲಿ ಮಧ್ಯಾಹ್ನದ ಊಟಕ್ಕೆ ಮೊಟ್ಟೆ (EGG) ಕೊಡಲು ಮುಂದಾಗಿದೆ. ಆದ್ರೆ ಈ ವಿಚಾರದ ಬಗ್ಗೆ ಪಕ್ಷದವರಿಂದಲೇ ವಿರೋಧ (Opposition) ವ್ಯಕ್ತವಾಗಿದೆ. ರಾಜ್ಯ ಸರ್ಕಾರ (State Government) ಮಧ್ಯಾಹ್ನದ ಊಟದಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆಯನ್ನು ನೀಡಲು ಏಕೆ ನಿರ್ಧರಿಸಿದೆ? ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ (State BJP Vice President Tejaswini Ananth Kumar) ತಮ್ಮ ಪಕ್ಷದ ಸರ್ಕಾರವನ್ನೇ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಕರ್ನಾಟಕ ಸರ್ಕಾರ ಮಧ್ಯಾಹ್ನದ ಊಟದಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆಯನ್ನು ನೀಡಲು ಯಾಕೆ ನಿರ್ಧರಿಸಿದೆ? ಪೋಷಕಾಂಶಕ್ಕೆ ಇದು ಏಕೈಕ ಮೂಲವೇನಲ್ಲ. ಸಸ್ಯಾಹಾರಿಗಳಾಗಿರುವ ಅನೇಕ ವಿದ್ಯಾರ್ಥಿಗಳು ಇದರಿಂದ ಹೊರಗುಳಿಯುವಂತಾಗಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಇದನ್ನೂ ಓದಿ: HDK Warning: 'ಇನ್ನೆಷ್ಟು ಹೆಣ ಬೀಳಿಸಲು ರಾಜ್ಯಕ್ಕೆ ಬರ್ತಿದ್ದಾರೆ ಅಮಿತ್​ ಶಾ?'​

ಮೊಟ್ಟೆಗೆ ನನ್ನ ವಿರೋಧವಿಲ್ಲ

ಮುಂದುವರಿದು, ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಅವಕಾಶ ಸಿಗುವಂತೆ ನಮ್ಮ ನೀತಿಗಳನ್ನು ರೂಪಿಸಬೇಕಾದ ಅಗತ್ಯವಿದೆ ಎಂದು ತೇಜಸ್ವಿನಿ ಅನಂತಕುಮಾರ್‌ ಅವರು ಅಭಿಪ್ರಾಯಪಟ್ಟಿದ್ದಾರೆ. ಮೊಟ್ಟೆಗೆ ನನ್ನ ವಿರೋಧವಿಲ್ಲ. ಆದರೆ, ಅಪೌಷ್ಠಿಕತೆಯನ್ನು ಮೊಟ್ಟೆಯೇ ನಿವಾರಿಸುತ್ತದೆ ಎಂದರೆ ಅದು ಬಹಳ ತಪ್ಪು ಎಂದೂ ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಸಸ್ಯಾಹಾರಿ ವಿದ್ಯಾರ್ಥಿಗಳಿಗೆ ಶೇಂಗಾ ಚಿಕ್ಕಿ ಕೊಡಬಹುದಿತ್ತು

ಇದಕ್ಕೆ ಪ್ರತಿಕ್ರಿಯಿಸಿರುವ ಭಾರಧ್ವಾಜ್ ಗಿರೀಶ್ ಎಂಬ ಟ್ವಿಟರ್‌ ಬಳಕೆದಾರರೊಬ್ಬರು, ಸಸ್ಯಾಹಾರಿ ವಿದ್ಯಾರ್ಥಿಗಳಿಗೆ ಶೇಂಗಾ ಚಿಕ್ಕಿ ಕೊಡುತ್ತಿರಬಹುದು ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ತೇಜಸ್ವಿನಿ, ಚಿಕ್ಕಿಯನ್ನೇ ಎಲ್ಲ ವಿದ್ಯಾರ್ಥಿಗಳಿಗೆ ಕೊಡಬಹುದಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: AAP Complaint: ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪ; ಲೋಕಾಯುಕ್ತಕ್ಕೆ ದೂರು

ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ

ರಾಜ್ಯದ ಎಲ್ಲ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ  ಮೊಟ್ಟೆ ನೀಡಲು ನಿರ್ಧರಿಸಿತ್ತು. ರಾಜ್ಯದ 1-8 ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಪ್ರಸ್ತುತ, ಕಲ್ಯಾಣ ಕರ್ನಾಟಕ ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ 1ರಿಂದ 8 ನೇ ತರಗತಿಯ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುತ್ತಿರುವ ಯೋಜನೆಯನ್ನು ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ವಿಸ್ತರಿಸಲು ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ.

ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ 

ರಾಜ್ಯದ ಎಲ್ಲಾ ಶಾಲೆಗಳಲ್ಲೂ ಮಕ್ಕಳಿಗೆ ವರ್ಷದಲ್ಲಿ 100 ದಿನ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ ವಿತರಿಸಲು, ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲು ಅನುಮತಿ ಕೋರಿ ಶಿಕ್ಷಣ ಇಲಾಖೆ ಅರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿತ್ತು.
Published by:Pavana HS
First published: