ಆಪರೇಷನ್​ ಕಮಲಗೆ ಹೆದರಿ ಅಮೆರಿಕ ಪ್ರವಾಸ ರದ್ದುಗೊಳಿಸಿದರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್​?

Seema.R | news18
Updated:September 11, 2018, 8:55 AM IST
ಆಪರೇಷನ್​ ಕಮಲಗೆ ಹೆದರಿ ಅಮೆರಿಕ ಪ್ರವಾಸ ರದ್ದುಗೊಳಿಸಿದರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್​?
ಜಿ. ಪರಮೇಶ್ವರ್
Seema.R | news18
Updated: September 11, 2018, 8:55 AM IST
ನ್ಯೂಸ್ 18 ಕನ್ನಡ

ಬೆಂಗಳೂರು (ಸೆ.11): ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ನಾಲ್ಕು ದಿನಗಳ ಅಮೆರಿಕ ವಿದೇಶ ಪ್ರವಾಸ ರದ್ದಾಗಿರುವುದು ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳನ್ನು ಹುಟ್ಟುಹಾಕಿದೆ.

ರಾಜ್ಯ ರಾಜಕೀಯದಲ್ಲಿ ಹಲವು ಮಹತ್ವದ ಘಟನೆಗಳು ನಡೆಯುತ್ತಿರುವುದರಿಂದ ಪರಮೇಶ್ವರ್​ ಅವರು ಪೂರ್ವನಿಗದಿಯ ವಿದೇಶ ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ  ಎಂದು ಹೇಳಲಾಗುತ್ತಿದೆ.

ಬೆಳಗಾವಿಯಲ್ಲಿ ಜಾರಕಿಹೊಳಿ ಸಹೋದರರ ಪಟ್ಟು ಮತ್ತು ಸಚಿವ ಡಿ.ಕೆ.ಶಿವಕುಮಾರ್​ ಅವರಿಗೆ ಇ.ಡಿ. ನೋಟಿಸ್​ ಜಾರಿ ಸಾಧ್ಯತೆ ಹಿನ್ನೆಲೆ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ವಿದೇಶ ಪ್ರವಾಸದಲ್ಲಿ ಇರುವುದಿರಿಂದ ಪರಮೇಶ್ವರ್​ ಈಗ ವಿದೇಶ ಪ್ರವಾಸ ಕೈಗೊಳ್ಳುವುದು ಬೇಡ ಎಂದು ಹೈಕಮಾಂಡ್​ ಸೂಚನೆ ನೀಡಿದ್ದರಿಂದ ತಮ್ಮ ವಿದೇಶ ಪ್ರವಾಸವನ್ನು ರದ್ದು ಮಾಡಿದ್ದಾರೆ ಎನ್ನಲಾಗಿದೆ.

ಬೆಳಗಾವಿಯಲ್ಲಿ ಪಿಎಲ್​ಡಿ ಬ್ಯಾಂಕ್​ ಚುನಾವಣೆ ವಿಚಾರವಾಗಿ ಕಾಂಗ್ರೆಸ್​ ಮುಖಂಡರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಸಹೋದರರ ನಡುವೆ ಭಿನ್ನಾಭಿಪ್ರಾಯ ಶುರುವಾಗಿ, ಅದು ಈಗ ಒಂದು ಹಂತಕ್ಕೆ ತಹಬದಿಗೆ ಬಂದಿದೆ. ಆದರೆ, ಈ ವಿಚಾರದಲ್ಲಿ ಜಾರಕಿಹೊಳಿ ಸಹೋದರರಿಗೆ ಹಿನ್ನಡೆಯಾಗಿದೆ. ಇದೇ ವಿಚಾರ ಇಟ್ಟುಕೊಂಡು ಅವರನ್ನು ಬಿಜೆಪಿಗೆ ಸೆಳೆದುಕೊಳ್ಳಲು ಯಡಿಯೂರಪ್ಪ ಹಾಗೂ ಶ್ರೀರಾಮುಲು ಸತತ ಪ್ರಯತ್ನ ನಡೆಸುತ್ತಿದ್ದಾರೆ. ಒಂದು ವೇಳೆ ಜಾರಕಿಹೊಳಿ ಬ್ರದರ್ಸ್​ ಬಿಜೆಪಿ ಸೇರಿದರೆ ಅವರೊಂದಿಗೆ ಹಲವು ಕೈ ಶಾಸಕರು ಬಿಜೆಪಿ ಸೇರುವ ಸಾಧ್ಯತೆ ಇದೆ. ಅಲ್ಲಿಗೆ ಮೈತ್ರಿ ಸರ್ಕಾರ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳಲಿದೆ. ರಾಜ್ಯದಲ್ಲಿ ಮತ್ತೆ ಕಮಲ ಆಪರೇಷನ್ ನಡೆಯುವ ಸಾಧ್ಯತೆ ಇದ್ದು, ಶಾಸಕರ ಮೇಲೆ ನಿಗಾ ಇಡುವಂತೆ ಹೈಕಮಾಂಡ್ ಸೂಚನೆ ನೀಡಿರುವುದರಿಂದ ಪರಮೇಶ್ವರ್ ಅವರು ತಮ್ಮ ಪ್ರವಾಸ ಮೊಟಕುಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನು ಓದಿ: ಕಾಂಗ್ರೆಸ್​ ತೊರೆಯಲು ಸಿದ್ಧರಾದ ಜಾರಕಿಹೊಳಿ; ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ಬಿಎಸ್​ವೈ ಜೊತೆ ಪ್ಲಾನ್​?

ಇನ್ನು ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ಕಾಂಗ್ರೆಸ್ ಸಚಿವ ಡಿ.ಕೆ.ಶಿವಕುಮಾರ್​ ಅವರ ಮೇಲೆ ಜಾರಿ ನಿರ್ದೇಶನಾಲಯ ಎಫ್​ಐಆರ್ ದಾಖಲಿಸುವ ಸಾಧ್ಯತೆ ಇದ್ದು, ಒಂದು ವೇಳೆ ಈ ಪ್ರಕರಣದಲ್ಲಿ ಡಿಕೆಶಿ ಬಂಧನವಾದರೂ ಮೈತ್ರಿ ಸರ್ಕಾರಕ್ಕೆ ಕಂಟಕ ತಪ್ಪಿದ್ದಲ್ಲ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ವಿದೇಶ ಪ್ರವಾದಲ್ಲಿದ್ದು, ಈ ಸಮಯದಲ್ಲಿ ಪರಮೇಶ್ವರ್​ ಕೂಡ ಪ್ರವಾಸ ಕೈಗೊಂಡರೆ ಕಷ್ಟವಾಗಲಿದೆ ಎಂಬ ಕಾರಣದಿಂದ ಪರಮೇಶ್ವರ್​ ಅವರು ತಮ್ಮ ಅಮೆರಿಕ ಪ್ರವಾಸವನ್ನು ರದ್ದು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
First published:September 11, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...