ಯಡಿಯೂರಪ್ಪ ಸಿಎಂ ಆಗಿದ್ದಾಗ ಸರ್ಕಾರ ಏನಾಗಿತ್ತು? ನಾನ್ಯಾಕೆ ರಾಜೀನಾಮೆ ಕೊಡಲಿ; ಕುಮಾರಸ್ವಾಮಿ ತಿರುಗೇಟು

ನಾನು ರಾಜೀನಾಮೆ ಕೊಡುವ ಅಗತ್ಯವೇ ಇಲ್ಲ. ನಾನಿನ್ನೂ ರಾಜೀನಾಮೆ ಕೊಡುವ ಸನ್ನಿವೇಶ ಬಂದಿಲ್ಲ-ಸಿಎಂ ಎಚ್​ಡಿಕೆ

Latha CG | news18
Updated:July 11, 2019, 11:49 AM IST
ಯಡಿಯೂರಪ್ಪ ಸಿಎಂ ಆಗಿದ್ದಾಗ ಸರ್ಕಾರ ಏನಾಗಿತ್ತು? ನಾನ್ಯಾಕೆ ರಾಜೀನಾಮೆ ಕೊಡಲಿ; ಕುಮಾರಸ್ವಾಮಿ ತಿರುಗೇಟು
ಹೆಚ್​.ಡಿ. ಕುಮಾರಸ್ವಾಮಿ.
  • News18
  • Last Updated: July 11, 2019, 11:49 AM IST
  • Share this:
ಬೆಂಗಳೂರು(ಜು.11): ರಾಜ್ಯ ರಾಜಕೀಯದ ಹೈಡ್ರಾಮಾ ಕೊನೆಯ ಘಟ್ಟ ಬಂದು ತಲುಪಿದೆ.  17 ಅತೃಪ್ತ ಶಾಸಕರು ರಾಜೀನಾಮೆ ನೀಡಿದ ಬಳಿಕ ಸಮ್ಮಿಶ್ರ ಸರ್ಕಾರ ಬಹುಮತ  ಕಳೆದುಕೊಂಡಿದೆ. ಸಿಎಂ ಕುಮಾರಸ್ವಾಮಿ ರಾಜೀನಾಮೆ ಕೊಡಲಿ ಎಂದು ಬಿಜೆಪಿ ನಾಯಕರು ಆಗ್ರಹ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಅಧಿಕಾರ ಬಿಡಲು ಒಪ್ಪದ ಸಿಎಂ ಎಚ್​ಡಿಕೆ ನಾನ್ಯಾಕೆ ರಾಜೀನಾಮೆ ಕೊಡಲಿ ಎಂದು ಬಿಎಸ್​ವೈಗೆ ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಅವರ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ರಾಜಿನಾಮೆ ನೀಡುತ್ತಾರೆಯೇ ಎಂಬ ಪ್ರಶ್ನೆಗೆ, ನಾನ್ಯಾಕೆ ರಾಜೀನಾಮೆ ನೀಡಬೇಕು ಎಂದು ಖಾರವಾಗಿ ಪ್ರಶ್ನಿಸಿದರು.  ಬಿ.ಎಸ್​.ಯಡಿಯೂರಪ್ಪ ಸರ್ಕಾರದ ಬಗ್ಗೆ ಉಲ್ಲೇಖ ಮಾಡಿದ ಸಿಎಂ, "2009-10 ರಲ್ಲಿ ಸರ್ಕಾರ ಏನಾಗಿತ್ತು? ಬಿಎಸ್​ವೈ ಸಿಎಂ ಆಗಿದ್ದಾಗ 18 ಮಂದಿ ಶಾಸಕರು ರಾಜೀನಾಮೆ ನೀಡಿದ್ದರು. ಆಗ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ರಾ?" ಎಂದು ಮಾಧ್ಯಮಗಳಿಗೆ ಪ್ರಶ್ನಿಸಿದರು.

ಇಂದೇ ರಾಜೀನಾಮೆ ಕೊಡಲಿದ್ದಾರೆ ಸಿಎಂ ಕುಮಾರಸ್ವಾಮಿ?; ಅನುಮಾನಕ್ಕೆ ಎಡೆಮಾಡಿಕೊಡುತ್ತಿದೆ ಅವರ ಈ ವರ್ತನೆ

ಮೈತ್ರಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2009-10ರಲ್ಲಿ ಇದೇ ಯಡಿಯೂರಪ್ಪ ಸಿಎಂ ಆಗಿದ್ದಾಗ 8 ಸಚಿವರು ಸೇರಿದಂತೆ 18 ಶಾಸಕರು ರಾಜೀನಾಮೆ ನೀಡಿದ್ದರು. ಆಗ ಏನಾಯ್ತು? ಈಗ ನಾನ್ಯಾಕೆ ರಾಜೀನಾಮೆ ನೀಡಲಿ?  ನಾನು ರಾಜೀನಾಮೆ ಕೊಡುವ ಅಗತ್ಯವೇ ಇಲ್ಲ. ನಾನಿನ್ನೂ ರಾಜೀನಾಮೆ ಕೊಡುವ ಸನ್ನಿವೇಶ ಬಂದಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ಕೊಡುವ ಅಗತ್ಯವಿಲ್ಲ. 2008, 2009 ರಲ್ಲಿ ಯಡಿಯೂರಪ್ಪ ರಾಜಿನಾಮೆ ಕೊಟ್ಟಿದ್ರಾ?  ಇದನ್ನು ಬಿಜೆಪಿಯವರು ನೆನಪಿಸಿಕೊಳ್ಳುವಂತೆ ಬಿಜೆಪಿಗೆ ತಿರುಗೇಟು ನೀಡಿದರು‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 2008,09 ರಲ್ಲಿ ಸಚಿವರಾಗಿದ್ದ 18 ಮಂದಿ ರಾಜೀನಾಮೆ ಕೊಟ್ಟಿದ್ದರು. ಆಗ ಯಡಿಯೂರಪ್ಪ ಅವರು ರಾಜಿನಾಮೆ ಕೊಟ್ಟಿದ್ರಾ ಎಂದು ಪ್ರಶ್ನಿಸಿದರು.

ಈ ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು, ಒಂದೇ ನ್ಯಾಯ. ಆಗ ಸ್ಪೀಕರ್ ಅವರನ್ನು ಬಳಸಿಕೊಂಡು 18 ಜನರನ್ನು ಅನರ್ಹಗೊಳಿಸಿಲ್ಲವೇ? ಸರ್ಕಾರ ಮುಂದುವರಿಸಿಲ್ಲವೇ
ಈ ಬಗ್ಗೆ ಎಲ್ಲರಿಗೂ ಚೆನ್ನಾಗಿ ಮಾಹಿತಿ ಇದೆ ಎಂದು ಖಾರವಾಗಿ ನುಡಿದರು.
First published:July 11, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ