• Home
 • »
 • News
 • »
 • state
 • »
 • Siddaramaiah-BJP: ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್‌ ಎಂದು ಕರೆಯೋದ್ಯಾಕೆ? ಬಿಜೆಪಿ ನೀಡಿದೆ 8 ಕಾರಣ!

Siddaramaiah-BJP: ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್‌ ಎಂದು ಕರೆಯೋದ್ಯಾಕೆ? ಬಿಜೆಪಿ ನೀಡಿದೆ 8 ಕಾರಣ!

ಸಿದ್ದರಾಮಯ್ಯ

ಸಿದ್ದರಾಮಯ್ಯ

ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ ಪೆಡಂಭೂತದ ಜಯಂತಿಯನ್ನು ಆಚರಣೆಯಾಗಿ ತಂದವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು? ಎಂದು ಟ್ವೀಟ್​ ಮಾಡಿದ್ದಾರೆ.

 • News18 Kannada
 • 4-MIN READ
 • Last Updated :
 • Karnataka, India
 • Share this:

ಬೆಂಗಳೂರು (ಡಿ.05): ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah)  ಅವರ ಬಗ್ಗೆ ಬಿಜೆಪಿ ನಾಯಕ ಸಿ.ಟಿ ರವಿ (C T Ravi) ನೀಡಿರುವ ವಿವಾದಾತ್ಮಕ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಸಿಟಿ ರವಿ ಅವರು ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ (Sidramullah Khan) ಎಂದು ಕರೆದಿದ್ದಾರೆ. ಇದಕ್ಕೆ ಕಾಂಗ್ರೆಸ್​ ನಾಯಕರು ಬಿಜೆಪಿ ನಾಯಕರ ಬಗ್ಗೆ ಕಿಡಿಕಾರಿದ್ದರು. ಇದೀಗ ಬಿಜೆಪಿಯೇ (BJP), ನಾವು ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆಯೋದು ಯಾಕೆ ಎನ್ನುವ ಕಾರಣಗಳ ಪಟ್ಟಿ ನೀಡಿದ್ದಾರೆ. 


ಕಾರಣ-1


ಸಿದ್ದರಾಮಯ್ಯರನ್ನ ಸಿದ್ರಾಮುಲ್ಲಾ ಖಾನ್​​ ಎಂದು ವಿನಾಕಾರಣ ಕರೆದಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ ಪೆಡಂಭೂತದ ಜಯಂತಿಯನ್ನು ಆಚರಣೆಯಾಗಿ ತಂದವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು? ಎಂದು ಟ್ವೀಟ್​ ಮಾಡಿದ್ದಾರೆ.


mla yathindra siddaramaiah reacts ct ravi statement mrq
ಸಿದ್ದರಾಮಯ್ಯ, ಸಿಟಿ ರವಿ


ಕಾರಣ-2


ತಮ್ಮವರನ್ನೇ ತುಳಿಯುವ ಸಿದ್ದರಾಮಯ್ಯರ ಮನಸ್ಥಿತಿ ಕಂಡು ದೇವೇಗೌಡರು ಅಂದೇ ಸಿದ್ದರಾಮಯ್ಯರನ್ನು ಹೊರಹಾಕಿದ್ದರು. ಆಗ ಕಾಂಗ್ರೆಸ್​​ ಸೇರಲು ಅಹಿಂದ ಹೆಸರಲ್ಲಿ ಬಲಪ್ರದರ್ಶಿಸಿದರು ಎಂದು ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.


ಕಾರಣ-3


ಕ್ಷಣವೂ ವಿವೇಚಿಸದೆ ತಲಾಖ್‌ ಎಂದು ಮಹಿಳೆಯರ ಬದುಕು ಬರ್ಬಾದ್‌ ಮಾಡುವ ಮನಸ್ಥಿತಿಯವರಿಗೆ ಬೆನ್ನುತಟ್ಟುವ ಶಾದಿ ಭಾಗ್ಯ ಕಲ್ಪಿಸಿದ್ದು ಸಿದ್ದರಾಮಯ್ಯ, ಕೇವಲ ಒಂದು ಸಮುದಾಯದ ಓಲೈಕೆ ಮಾಡಲು ಸೆಕ್ಯುಲರಿಸಂ ಹೆಸರಿನಲ್ಲೇ ತುಷ್ಟೀಕರಣಕ್ಕಿಳಿದಿರಿ. ಇಂಥವರನ್ನು ಸಿದ್ರಾಮುಲ್ಲಾ ಖಾನ್‌ ಎನ್ನದೆ ಮತ್ತೇನೆಂದು ಕರೆದಾರು? ಎಂದು ಟ್ವೀಟ್ ಮಾಡಿದ್ರು.ಕಾರಣ-4


ದೇಶಾದ್ಯಂತ ಮತಾಂಧತೆಯನ್ನು ಪಸರಿಸುತ್ತಾ ಅಲ್ಲಲ್ಲಿ ಭಯೋತ್ಪಾದಕ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ ಪಿಎಫ್‌ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಿಚಾರಣೆಯಿಲ್ಲದೆ ಹಿಂಪಡೆದದ್ದಕ್ಕಾಗಿ ವಿಚಾರವಾದಿ ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್‌ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ.


ಕಾರಣ-5


ಟಿಪ್ಪು ಎಕ್ಸ್‌ಪ್ರೆಸ್‌ ಎಂಬ ಹೆಸರನ್ನು ಬದಲಾಯಿಸಿ ಜನ ಇಂದಿಗೂ ಸ್ಮರಿಸುವ-ಆರಾಧಿಸುವ ‘ಒಡೆಯರ್’‌ ಎಕ್ಸ್‌ಪ್ರೆಸ್‌ ಎಂದು ಕರೆದಾಗ ನಿಮಗೆ ಆದ ಅಸಹನೆಯನ್ನು ನಾಡಿನ ಜನ ಕಂಡಿದ್ದಾರೆ. ಸಿದ್ದರಾಮಯ್ಯ ಟಿಪ್ಪುವಿನ ಆಸ್ಥಾನ ವಿದೂಷಕರಂತಾಗಿರುವ ತಮ್ಮನ್ನು ಸಿದ್ರಾಮುಲ್ಲಾ ಖಾನ್‌ ಎನ್ನದೇ ಮೋಸ ಮಾಡುವ ಮೀರ್ ಸಾದಿಕ್ ಎನ್ನಬಹುದೆ?


ಕಾರಣ-6


ನಳಂದಾ ವಿಶ್ವವಿದ್ಯಾಲಯವನ್ನು ಸುಟ್ಟು ಸರ್ವನಾಶ ಮಾಡಿದ್ದು ಇಸ್ಲಾಮಿಕ್‌ ಭಯೋತ್ಪಾದನೆ ಎಂಬುದನ್ನು ಒಪ್ಪದ ಸಿದ್ದರಾಮಯ್ಯ, ಆ ಇತಿಹಾಸವನ್ನು ಮರೆಮಾಚಲು ಯತ್ನಿಸಿದರು. ಇಂದಿಗೂ ಇಸ್ಲಾಮಿಕ್‌ ಭಯೋತ್ಪಾದನೆಯ ಕ್ರೌರ್ಯವನ್ನು ಒಪ್ಪದೇ ಮುಘಲ್ ಆಕ್ರಮಣಕಾರರ ಮಾನಸಿಕತೆಯಲ್ಲಿರುವ ಕಾರಣಕ್ಕೆ ಜನರೇ ಸಿದ್ರಾಮುಲ್ಲಾ ಖಾನ್‌ ಬ್ರಾಂಡ್ ಮಾಡಿರುವುದು.


ಕಾರಣ-7


26/11 ಮುಂಬೈ ದಾಳಿಯಲ್ಲಿ ಸಾರ್ವಜನಿಕರ ಪ್ರಾಣ ಉಳಿಸಲು ಪ್ರಾಣಾರ್ಪಣೆ ಮಾಡಿದ ಮೇಜರ್ ಸಂದೀಪ್‌ ಉನ್ನಿಕೃಷ್ಣನ್‌‌ರವರ ವೀರಗಾಥೆಯುಳ್ಳ "ಕರಾಳ ರಾತ್ರಿ" ಪಾಠವನ್ನು ಕೈಬಿಟ್ಟವರು ತಾವು. ರಾಷ್ಟ್ರೀಯತೆಯ ಪರಮ ವಿರೋಧಿ ಸಿದ್ದರಾಮಯ್ಯ, ಹೀಗಿರುವಾಗ ತಮ್ಮನ್ನು ಸಿದ್ರಾಮುಲ್ಲಾ ಖಾನ್‌ ಎಂದು ಕರೆಯದೆ ಬೇರೆ ಬಿರುದು ಕೊಟ್ಟಾರೆಯೇ?


ಇದನ್ನೂ ಓದಿ: Karnataka Politics: ಸಿದ್ರಾಮುಲ್ಲಾಖಾನ್ ಎಂದಿದ್ದಕ್ಕೆ ಕಾಂಗ್ರೆಸ್​ನವರಿಗೆ ಉರಿಯುತ್ತದೆ: ಸಿ ಟಿ ರವಿ ಕಿಡಿ


ಕಾರಣ-8


ಹಿಜಾಬ್‌‌ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್.ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ‌ ಸಿದ್ದರಾಮಯ್ಯ, ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ? ಎಂದು ಬಿಜೆಪಿ ಟ್ವೀಟ್​ ಮೂಲಕ ಕಾರಣ ತಿಳಿಸಿದೆ.

Published by:ಪಾವನ ಎಚ್ ಎಸ್
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು