• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ‘ಪಿಯುಸಿ ಪಾಸ್ ಆದವರೆಲ್ಲರಿಗೂ ಪದವಿಗೆ ಅವಕಾಶ; ಪರೀಕ್ಷೆ ಬೇಕೆನ್ನುವರಿಗೆ ಆಗಸ್ಟ್​ನಲ್ಲಿ ಘೋಷಣೆ’

‘ಪಿಯುಸಿ ಪಾಸ್ ಆದವರೆಲ್ಲರಿಗೂ ಪದವಿಗೆ ಅವಕಾಶ; ಪರೀಕ್ಷೆ ಬೇಕೆನ್ನುವರಿಗೆ ಆಗಸ್ಟ್​ನಲ್ಲಿ ಘೋಷಣೆ’

ಶಿಕ್ಷಣ ಸಚಿವ ಸುರೇಶ್ ಕುಮಾರ್

ಶಿಕ್ಷಣ ಸಚಿವ ಸುರೇಶ್ ಕುಮಾರ್

ವಿವಿಧ ಮಾನದಂಡಗಳ ಆಧಾರದ ಮೇಲೆ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಘೋಷಿಸಲಾಗಿದೆ. ಈ ಫಲಿತಾಂಶ ತೃಪ್ತಿಕರ ಎನಿಸದಿದ್ದವರು ಪರೀಕ್ಷೆ ಬರೆಯಬಹುದು. ಆಗಸ್ಟ್​ನಲ್ಲಿ ಪರೀಕ್ಷೆ ಘೋಷಣೆ ಆಗುತ್ತದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.

  • Share this:

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಪ್ರಸರಣ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದರಿಂದ ಅವರ ಹಿಂದಿನ ಶೈಕ್ಷಣಿಕ ಸಾಧನೆಗಳನ್ನು ಆಧರಿಸಿ ಫಲಿತಾಂಶ ಘೋಷಿಸಲಾಗಿದೆ. ಎಲ್ಲರನ್ನೂ ಉತ್ತೀರ್ಣಗೊಳಿಸಿರುವುದರಿಂದ ಎಲ್ಲರಿಗೂ ಪದವಿ ತರಗತಿಗಳಲ್ಲಿ ಸೀಟುಗಳನ್ನು ದೊರೆಯುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. ಮಂಗಳವಾರ ಪಿಯುಸಿ ಫಲಿತಾಂಶಗಳನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿ ಮಾತನಾಡಿದ ಅವರು, ಪದವಿ ಕಾಲೇಜುಗಳಿಗೆ ಸೇರಲಿಚ್ಛಿಸುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.  ಈ ಬಾರಿಯ ಪರೀಕ್ಷೆಯಲ್ಲಿ ಎಲ್ಲ ವಿದ್ಯಾರ್ಥಿಗಳು ಪಿಯುಸಿ ಉತ್ತೀರ್ಣರಾಗುವ ಹಿನ್ನೆಲೆಯಲ್ಲಿ ಅವರೆಲ್ಲರಿಗೂ ಪದವಿ ಕಾಲೇಜುಗಳಲ್ಲಿ ಅವಕಾಶ ಕಲ್ಪಿಸಲು ಕಾಲೇಜು ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಲ್ಲಿ ಹೆಚ್ಚಿನ ಸೀಟುಗಳಿಗೆ ಅವಕಾಶ ಕಲ್ಪಿಸಲಿದೆ. ಈ ಕುರಿತು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ ಅವರೂ ಸಹ ಭರವಸೆ ನೀಡಿದ್ದಾರೆ ಎಂದು ಸಚಿವರು ಹೇಳಿದರು.


ವೈಜ್ಞಾನಿಕ ಆಧಾರದಲ್ಲಿ ಫಲಿತಾಂಶ ಘೋಷಣೆ - ಈಗ ಪಾಸಾಗುತ್ತಿರುವ ಎಲ್ಲ ಮಕ್ಕಳು ಕಳೆದ ವರ್ಷ ಮೊದಲ ಪಿಯುಸಿ ತರಗತಿಗಳನ್ನು ಪರೀಕ್ಷೆಯ ಮೂಲಕ ಉತ್ತೀರ್ಣರಾಗಿದ್ದು, ಆ ಅಂಕಗಳು ಮತ್ತು ಅವರ 10ನೇ ತರಗತಿ ಅಂಕಗಳನ್ನು ಆಧರಿಸಿ ದ್ವಿತೀಯ ಪಿಯು ಫಲಿತಾಂಶಗಳನ್ನು ಘೋಷಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.


2019-20ನೇ ಸಾಲಿನಲ್ಲಿ ನಡೆದ ಮೊದಲ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಅವರ ಎಸ್ಸೆಸ್ಸೆಲ್ಸಿ ಅಂಕಗಳ ಆಧಾರದ ಮೇಲೆ ಈ ಬಾರಿಯ ದ್ವಿತೀಯ ಪಿಯುಸಿ ಅಂಕಗಳನ್ನು ನಿರ್ಧರಿಸಲಾಯಿತು. ಆ ಕುರಿತು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿ ಫಲಿತಾಂಶ ಪ್ರಕಟಣೆ ಮಾಡಲಾಗುತ್ತಿದೆ. ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಎಸ್ ಎಸ್ ಎಲ್ ಸಿಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಲಾಗಿದೆ. ಈ ಕುರಿತಂತೆ ಅಧಿಕೃತ ಸರ್ಕಾರದ ಆದೇಶ ಪ್ರಕಟಣೆ ಮೂಲಕ ಕ್ರಮ ವಹಿಸಲಾಗಿದೆ ಎಂದು ಸಚಿವರು ಹೇಳಿದರು.


ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಮಾರ್ಗದರ್ಶಿ ಸೂತ್ರಗಳನ್ನು ರಚಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರತಿಭೆಗೆ ಅನುಗುಣವಾಗಿ ಫಲಿತಾಂಶಗಳನ್ನು ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದೂ ಸಚಿವರು ಹೇಳಿದರು.  ಎಸ್ಸೆಸ್ಸೆಲ್ಸಿ ಅಥವಾ ಇತರೆ ಮಂಡಳಿಗಳ 10ನೇ ತರಗತಿಯಲ್ಲಿ ಪಡೆದ ವಿಷಯವಾರು ಅಂಕಗಳಲ್ಲಿ ಶೇ. 45ರಷ್ಟು ಅಂಕಗಳು, ಪ್ರಥಮ ಪಿಯುಸಿಯಲ್ಲಿ ಪಡೆದಿರುವ ಶೇ. 45ರಷ್ಟು ಅಂಕಗಳು, ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಯ ಶೈಕ್ಷಣಿಕ ಚುಟುವಟಿಕೆಗಳಿಗೆ ಶೇ. 10ರಷ್ಟು ಅಂಕಗಳು ಮತ್ತು ಪ್ರಥಮ ಪಿಯುಸಿ ಪಡೆದ ಅಂಕಗಳಿಗೆ ಶೇ. 5 ಅಂಕಗಳನ್ನು ಸಿದ್ಧಪಡಿಸಿ ಫಲಿತಾಂಶವನ್ನು ನಿರ್ಣಯಿಸಲಾಗಿದೆ ಎಂದು ಸುರೇಶ್ ಕುಮಾರ್ ಫಲಿತಾಂಶ ಘೋಷಣೆಯ ವಿವರಗಳನ್ನು ನೀಡಿದರು.


ಒಂದು ವೇಳೆ ಘೋಷಿತ ಫಲಿತಾಂಶದಿಂದ ಪಡೆದ ಅಂಕಗಳು ತೃಪ್ತಿಕರವೆನಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳೂ ಮುಂದಿನ ದಿನಗಳಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುತ್ತದೆ. ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ತೆಗೆದುಕೊಳ್ಳುವ ಖಾಸಗಿ ಅಭ್ಯರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಿ ಫಲಿತಾಂಶ ಒದಗಿಸಲಾಗುತ್ತದೆ. ಆಗಸ್ಟ್ ತಿಂಗಳಲ್ಲಿ ಇವರಿಗೆ ಪರೀಕ್ಷೆ ಘೋಷಣೆ ಮಾಡಲಾಗುವುದು ಎಂದು ಅವರು ಹೇಳಿದರು.


ಪತ್ರಿಕಾಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಮತ್ತು ಪಿಯು ಇಲಾಖೆ ನಿರ್ದೇಶಕಿ ಆರ್. ಸ್ನೇಹಲ್ ಭಾಗವಹಿಸಿದ್ದರು.


ಈ ವರ್ಷದ ಪಿಯುಸಿ ಪರೀಕ್ಷಾ ಫಲಿತಾಂಶ ವಿವರ:


ಒಟ್ಟು ವಿದ್ಯಾರ್ಥಿಗಳು 666497,
ಬಾಲಕರು - 335138,
ಬಾಲಕಿಯರು- 331359.
ಹೊಸ ವಿದ್ಯಾರ್ಥಿಗಳು - 590153,
ಪುನರಾವರ್ತಿತ ವಿದ್ಯಾರ್ಥಿಗಳು- 76344.
ವಾಣಿಜ್ಯ ವಿಭಾಗ- 251686,
ವಿಜ್ಞಾನ ವಿಭಾಗ- 219777,
ಕಲಾ ವಿಭಾಗ- 195034
ನಗರ ಭಾಗದವರು 5,18,903
ಗ್ರಾಮೀಣ ಭಾಗದವರು, 1,47,594
ಮೊದಲ ಶ್ರೇಣಿ ಪಡೆದವರು 4,50,706
ದ್ವಿತೀಯ ಶ್ರೇಣಿ ಪಡೆದವರು 1,47,055
ಸಾಮಾನ್ಯ ಉತ್ತೀರ್ಣರಾದವರು 68,729 ಅಭ್ಯರ್ಥಿಗಳು
ವಿಕಲಚೇತನ ಅಭ್ಯರ್ಥಿಗಳು 1428
ಕನ್ನಡ ಮಾಧ್ಯಮದವರು 2,75,599
ಇಂಗ್ಲೀಷ್ ಮಾಧ್ಯಮದವರು 3,90,898


600ಕ್ಕೆ 600 ಅಂಕಗಳ ಫಲಿತಾಂಶ ಪಡೆದ ಮಕ್ಕಳು: ರಾಜ್ಯದ ಎಲ್ಲ 32 ಶೈಕ್ಷಣಿಕ ಜಿಲ್ಲೆಗಳ ಹಲವಾರು ಪದವಿ ಪೂರ್ವ ಕಾಲೇಜುಗಳ ಮಕ್ಕಳು 600ಕ್ಕೆ 600 ಅಂಕಗಳನ್ನು ಪಡೆದಿದ್ದಾರೆ. ಒಟ್ಟು 2239 ಫ್ರೆಶ್ ವಿದ್ಯಾರ್ಥಿಗಳು ಪೂರ್ಣ ಅಂಕ ದಾಖಲಿಸಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದರು.


ವರದಿ: ಶರಣು ಹಂಪಿ

Published by:Vijayasarthy SN
First published: