Karnataka Politics: ಈ ಕಾರಣಕ್ಕೆ ಜಿ ಟಿ ದೇವೇಗೌಡರ ಮೇಲೆ ಮುನಿಸಿಕೊಂಡ್ರಾ ಸಿದ್ದರಾಮಯ್ಯ?

ಮೂಲಗಳ ಪ್ರಕಾರ ಜಿ.ಟಿ.ದೇವೇಗೌಡರು ಕಾಂಗ್ರೆಸ್ ಸೇರ್ಪಡೆ ಆಗೋದು ಬಹುತೇಕ ಅನುಮಾನ ಎನ್ನಲಾಗ್ತಿದೆ. ಇತ್ತ ಬಿಜೆಪಿ ಸೇರಬಹುದು ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. 

ಶಾಸಕ ಜಿ.ಟಿ.ದೇವೇಗೌಡ

ಶಾಸಕ ಜಿ.ಟಿ.ದೇವೇಗೌಡ

  • Share this:
ಮಾಜಿ ಸಚಿವ, ಶಾಸಕ ಜಿ.ಟಿ.ದೇವೇಗೌಡರು (Former Minister GT Devegowda) ಜೆಡಿಎಸ್ (JDS) ನಿಂದ ಒಂದು ಹೆಜ್ಜೆಯನ್ನು ಹೊರಗಿಟ್ಟಿರುವ ವಿಷಯ ಎಲ್ಲರಿಗೂ ತಿಳಿದಿದೆ. ಇಷ್ಟು ದಿನ ಕಾಂಗ್ರೆಸ್ (Congress) ಸೇರ್ಪಡೆ ಆಗ್ತಾರೆ ಅನ್ನೋ ಮಾತುಗಳು ಕೇಳಿ ಬಂದಿದ್ದವು. ಇದಕ್ಕೆ ಪೂರಕ ಎಂಬಂತೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ (Chamundeshwari constituency) ಮಾಜಿ ಸಿಎಂ ಸಿದ್ದರಾಮಯ್ಯ  (Former CM Siddaramaiah) ಅವರ ಜೊತೆ ವೇದಿಕೆ ಸಹ ಹಂಚಿಕೊಂಡಿದ್ದರು. ಪಕ್ಷ ಸೇರ್ಪಡೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (KPCC President DK Shivakumar) ಜೊತೆಯಲ್ಲಿಯೂ ಒಂದು ಸುತ್ತಿನ ಮಾತುಕತೆ ನಡೆಸಿದ್ದರು. ಆದ್ರೆ ಇದೀಗ ಕಾಂಗ್ರೆಸ್ ನಿಂದ ಜಿ.ಟಿ.ದೇವೇಗೌಡರು ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎಂಬ ಮಾತುಗಳು ಮೈಸೂರು ರಾಜಕಾರಣದಲ್ಲಿ (Mysuru Politics) ಕೇಳಿ ಬರುತ್ತಿವೆ. ಇದಕ್ಕೆ ಕಾರಣ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಹ್ವಾನಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಎನ್ನಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಸಿದ್ದರಾಮಯ್ಯ ಅವರು ಜಿಟಿಡಿ ಮೇಲೆ ಕೋಪಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ ರಾಜ್ಯಸಭಾ ಚುನಾವಣೆ ವೇಳೆಯೂ ಜಿಟಿಡಿ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಮತ ಚಲಾಯಿಸಿದ್ದರು. ಈ ಎಲ್ಲ ಕಾರಣಗಳಿಂದ ಜಿ.ಟಿ.ದೇವೇಗೌಡರಿಗೆ ಕಾಂಗ್ರೆಸ್ ಬಾಗಿಲು ಮುಚ್ಚಿದೆಯಾ ಅನ್ನೋ ಅನುಮಾನಗಳು ಕೇಳಿ ಬಂದಿವೆ.

ಯಾವುದೇ ಪಕ್ಷ ಸೇರಿದ್ರೂ ಮಗನಿಗೆ ಟಿಕೆಟ್ ಕೇಳುವ ಸಾಧ್ಯತೆ

ಮೂಲಗಳ ಪ್ರಕಾರ ಜಿ.ಟಿ.ದೇವೇಗೌಡರು ಕಾಂಗ್ರೆಸ್ ಸೇರ್ಪಡೆ ಆಗೋದು ಬಹುತೇಕ ಅನುಮಾನ ಎನ್ನಲಾಗ್ತಿದೆ. ಇತ್ತ ಬಿಜೆಪಿ ಸೇರಬಹುದು ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.  ಕಾಂಗ್ರೆಸ್ ಅಥವಾ  ಬಿಜೆಪಿ ಯಾವುದೇ ಪಕ್ಷ ಸೇರ್ಪಡೆಯಾದ್ರೂ ಜಿ.ಟಿ.ದೇವೇಗೌಡರು 2023ರ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಪುತ್ರನಿಗೆ ಟಿಕೆಟ್ ನೀಡುವ ಬಗ್ಗೆ ಬೇಡಿಕೆ ಇರಿಸೋದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ:  Puttur: ತಾರಕಕ್ಕೇರಿದ ನಾಗನ ಕಟ್ಟೆ ವಿವಾದ; ಪುತ್ತೂರಿನ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಬಿಗ್ ಫೈಟ್

ಮೈಸೂರು ರಾಜಕಾರಣದಲ್ಲಿ ಇಷ್ಟೆಲ್ಲ ಬೆಳವಣಿಗೆಗಳು ನಡೆಯುತ್ತಿದ್ದರೂ  ಜಿ.ಟಿ.ದೇವೇಗೌಡರು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಈ ಹಿಂದೆ ಚುನಾವಣೆ ನಿವೃತ್ತಿಯನ್ನು ಸಹ ಜಿಟಿಡಿ ಘೋಷಣೆ ಮಾಡಿದ್ದಾರೆ.

ಜಿಟಿಡಿ ವಿರುದ್ಧ ಸಿದ್ದರಾಮಯ್ಯ ಸೋಲು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ವರುಣಾ ಕ್ಷೇತ್ರವನ್ನು ಪುತ್ರ ಯತೀಂದ್ರ ಅವರಿಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಇದೇ ಕ್ಷೇತ್ರದಿಂದ ಜೆಡಿಎಸ್ ನಿಂದ ಜಿ.ಟಿ.ದೇವೇಗೌಡರು ಕಣದಲ್ಲಿದ್ದರು. ಇತ್ತ ಸಿದ್ದರಾಮಯ್ಯನವರು ಬದಾಮಿಯಿಂದಲೂ ಸ್ಪರ್ಧೆ ಮಾಡಿದ್ದರು. ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯನವರು ಬದಾಮಿಯಲ್ಲಿ ಅಲ್ಪ ಮತಗಳ ಅಂತರದಲ್ಲಿ ಗೆದ್ದಿದ್ದರು.

JDSನಿಂದ ಅಂತರ ಕಾಯ್ದುಕೊಂಡಿರುವ GTD

ಇತ್ತ ಮೈತ್ರಿ ಸರ್ಕಾರ ಪತನದ ಬಳಿಕ ಜೆಡಿಎಸ್ ನಿಂದ ಜಿ.ಟಿ.ದೇವೇಗೌಡರು ಪಕ್ಷ ಮತ್ತು ವರಿಷ್ಠರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಪಕ್ಷಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಂದಲೂ ದೂರ ಉಳಿದುಕೊಂಡಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಬ್ಯಾನರ್ ನಲ್ಲಿ ಜಿಟಿಡಿ ಪುತ್ರನ ಫೋಟೋ ಹಾಕಲಾಗಿತ್ತು. ಇನ್ನು ಸಮಯ ಸಿಕ್ಕಾಗೆಲ್ಲ ಜಿಟಿಡಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುತ್ತಿರುತ್ತಾರೆ. ಹೆಚ್ ಡಿಕೆ ಸಹ ಜಿಟಿಡಿ ಹೇಳಿಕೆಗೆ ತಿರುಗೇಟು ನೀಡುತ್ತಿರುತ್ತಾರೆ.

ದಳಪತಿಗಳ ವಿರುದ್ಧ ಜಿಟಿಡಿ ವಾಗ್ದಾಳಿ

ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿರುವ ಜಿ.ಟಿ.ದೇವೇಗೌಡರು ಸಮಯ ಸಿಕ್ಕಾಗೆಲ್ಲ ದಳಪತಿಗಳ ವಿರುದ್ಧ ಅಸಮಾಧಾನ ಹೊರ ಹಾಕುತ್ತಿರುತ್ತಾರೆ. ಸಂಪುಟ ಹಂಚಿಕೆ ವೇಳೆ ಉದ್ದೇಶಪೂರ್ವಕವಾಗಿಯೇ ತಮಗೆ ಉನ್ನತ ಶಿಕ್ಷಣ ಇಲಾಖೆ ನೀಡಲಾಗಿತ್ತು ಎಂದು ಆರೋಪಿಸಿದ್ದರು.

ಇದನ್ನೂ ಓದಿ:  5 Rupees Doctor: ಆಸ್ಪತ್ರೆಯಿಂದ 5 ರೂಪಾಯಿ ಡಾಕ್ಟರ್ ಶಂಕರೇಗೌಡ ಡಿಸ್ಚಾರ್ಜ್; ಕೆಲ ದಿನಗಳಲ್ಲಿ ಮತ್ತೆ ಸೇವೆಗೆ ಹಾಜರ್

ಮತ್ತೊಂದು ಕಡೆ ದಳಪತಿಗಳು ಜಿಟಿಡಿ ಅವರ ಹೆಸರು ಹೇಳದೇ ವಾಗ್ದಾಳಿ ನಡೆಸಿದ್ದುಂಟು, ನಾನು ಹಿರಿಯರ ಜೊತೆ ರಾಜಕೀಯ ಮಾಡಿದ್ದೇನೆ. 50 ವರ್ಷಗಳಿಂದ ರಾಜಕಾರಣದಲ್ಲಿ ಇದ್ದೇನೆ. ಇವತ್ತಿನ ಪರಿಸ್ಥಿತಿಯಲ್ಲಿ ರಾಜಕಾರಣ ಸಾಧ್ಯವಿಲ್ಲ. ನಾನು ಮಂತ್ರಿ ಆಗಿ ಆಯ್ತು, ರಾಜಕೀಯ ಸಾಕು. ನಾನು ಸಾಕಷ್ಟು ನೊಂದಿದ್ದೇನೆ ಎಂದು ಹೇಳಿ ಜಿ.ಟಿ.ದೇವೇಗೌಡರು ಚುನಾವಣಾ ರಾಜಕೀಯ ನಿವೃತ್ತಿಯನ್ನು 2019 ಆಗಸ್ಟ್ 4ರಂದು ಘೋಷಿಸಿದ್ದರು.
Published by:Mahmadrafik K
First published: