ಸಕ್ರಿಯ ರಾಜಕಾರಣದಿಂದ ನಿವೃತ್ತಿ; ಮಾಜಿ ಸಿಎಂ ಯಡಿಯೂರಪ್ಪ ಹೀಗೆ ಹೇಳಲು ಕಾರಣವೇನು?

ಕುಮಾರಸ್ವಾಮಿಯವರು ಮಾಡಿದ ಆರೋಪ ಸತ್ಯವಾದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ಸಾಭೀತು ಮಾಡದಿದ್ದರೆ, ಮಾನನಷ್ಟ ಮೊಕದ್ದಮೆ ಹೂಡುತ್ತೇನೆ

news18
Updated:September 6, 2018, 2:51 PM IST
ಸಕ್ರಿಯ ರಾಜಕಾರಣದಿಂದ ನಿವೃತ್ತಿ; ಮಾಜಿ ಸಿಎಂ ಯಡಿಯೂರಪ್ಪ ಹೀಗೆ ಹೇಳಲು ಕಾರಣವೇನು?
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
news18
Updated: September 6, 2018, 2:51 PM IST
ಬೆಂಗಳೂರು: ಆರೋಪ ಸಾಭೀತಾದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಇನ್ನೇನು ಲೋಕ ಸಭೆ ಚುನಾವಣೆ ಬಂದೇ ಬಿಟ್ಟಿತು ಎಂಬ ಸಂದರ್ಭದಲ್ಲಿ ಯಡಿಯೂರಪ್ಪ ಯಾಕೆ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಯೋಚಿಸುತ್ತಿದ್ದೀರಾ? ಇಲ್ಲಿದೆ ಅದಕ್ಕೆ ಉತ್ತರ.

ನಿನ್ನೆ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮಗ ವಿಜಯೇಂದ್ರ ಬಗ್ಗೆ ಗಂಭೀರ ಆರೋಪ ಮಾಡಿದ್ದರು. ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಕೇಂದ್ರ ಬಿಜೆಪಿ ಸರ್ಕಾರ ಮತ್ತು ಯಡಿಯೂರಪ್ಪ ಹಲವು ರೀತಿಯ ಸರ್ಕಸ್​ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು. ಜತೆಗೆ ಯಡಿಯೂರಪ್ಪ ಮಗ ವಿಜಯೇಂದ್ರ ಆದಾಯ ತೆರಿಗೆ ಇಲಾಖೆಯ ತನಿಖಾ ವಿಭಾಗದ ನಿರ್ದೇಶಕ ಬಾಲಕೃಷ್ಣನ್​ ಅವರನ್ನು ಪದೇ ಪದೇ ಭೇಟಿಯಾಗುತ್ತಿದ್ದಾರೆ. ಸಮ್ಮಿಶ್ರ ಸರ್ಕಾರವನ್ನು ಆದಾಯ ತೆರಿಗೆ ಅಧಿಕಾರವನ್ನು ಬಳಸಿ ಬೀಳಿಸಲು ಯತ್ನಿಸುತ್ತಿದ್ದಾರೆ ಎಂದಿದ್ದರು.

ಈ ಆರೋಪಕ್ಕೆ ಪ್ರತಿಯಾಗಿ ವಿಜಯೇಂದ್ರ ತಮಗೆ ಬಾಲಕೃಷ್ಣನ್​ ಎಂಬ ಹೆಸರಿನ ಅಧಿಕಾರಿ ಇರುವುದೇ ಗೊತ್ತಿಲ್ಲ, ಕುಮಾರಸ್ವಾಮಿ ಆಧಾರ ರಹಿತವಾಗಿ ಮಾತನಾಡುತ್ತಿದ್ದಾರೆ ಎಂದಿದ್ದರು. ನಂತರ ಆದಾಯ ತೆರಿಗೆ ಇಲಾಖೆ ಕೂಡ ಇದು ಸುಳ್ಳು ಎಂಬುದಾಗಿ ಸ್ಪಷ್ಟನೆ ನೀಡಿತ್ತು.

ಆರೋಪ ಸಾಭೀತಾದರೆ ನಿವೃತ್ತಿ:

ಕುಮಾರಸ್ವಾಮಿ ಮಾಡಿರುವ ಆರೋಪ ನಿಜವಾದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಯಡಿಯೂರಪ್ಪ ಗುಡುಗಿದ್ದಾರೆ. ಹೀಗನ್ನುವ ಮೂಲಕ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಯಡಿಯೂರಪ್ಪ ಆರೋಪ ಸಾಭೀತು ಪಡಿಸುವಂತೆ ಸವಾಲು ಹಾಕಿದ್ದಾರೆ.

"ನಾನು ಐಟಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿರುವುದು ದೃಢಪಟ್ಟರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಇಲ್ಲವಾದರೆ ಕುಮಾರಸ್ವಾಮಿ ರಾಜ್ಯದ ಜನರ ಕ್ಷಮೆ ಕೋರಲಿ. ಸಿಎಂ ಆಗಿ ಈ ರೀತಿ ಆರೋಪ ಮಾಡೋದು ಎಷ್ಟರ ಮಟ್ಟಿಗೆ ಸರಿ? ಸಿಎಂ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆ ಯೋಚಿಸ್ತೀನಿ," ಎಂದು ಕೆಂಡಾಮಂಡಲರಾಗಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ರಾಜ್ಯ ಸರ್ಕಾರ ಬೀಳಿಸಲು ತನಿಖಾ ಸಂಸ್ಥೆಗಳ ದುರ್ಬಳಕೆ; ಕುಮಾರಸ್ವಾಮಿ: ಶುದ್ಧ ಸುಳ್ಳು ಎಂದ ಇಲಾಖೆ
Loading...

ಇದಕ್ಕೆ ಪ್ರತ್ಯುತ್ತರ ನೀಡಿರುವ ಕುಮಾರಸ್ವಾಮಿ, ಆಧಾರವಿಲ್ಲದ ಆರೋಪಗಳನ್ನೂ ತಾವು ಎಂದಿಗೂ ಮಾಡುವುದಿಲ್ಲ ಎಂದಿದ್ದಾರೆ. ಯಡಿಯೂರಪ್ಪ ಮಾನ ನಷ್ಟ ಅಲ್ಲ, ಯಾವ ನಷ್ಟದ ಪ್ರಕರಣ ದಾಖಲಿಸಿದರೂ ತಾವು ಅಂಜುವುದಿಲ್ಲ ಎಂದು ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
First published:September 6, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ