• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Congress Government: ಬಿಜೆಪಿ ವಿರುದ್ಧ ತನಿಖಾಸ್ತ್ರ ಪ್ರಯೋಗ ಮಾಡ್ತಾರೆ ಸಿದ್ದರಾಮಯ್ಯ?

Congress Government: ಬಿಜೆಪಿ ವಿರುದ್ಧ ತನಿಖಾಸ್ತ್ರ ಪ್ರಯೋಗ ಮಾಡ್ತಾರೆ ಸಿದ್ದರಾಮಯ್ಯ?

ಸಿದ್ದರಾಮಯ್ಯ, ಸಿಎಂ

ಸಿದ್ದರಾಮಯ್ಯ, ಸಿಎಂ

BJP Vs Congress: ಬಿಜೆಪಿ ಸರ್ಕಾರದ ಪ್ರಮುಖ ಭ್ರಷ್ಟಾಚಾರದ ಪ್ರಕರಣಗಳ ತನಿಖೆ ನಡೆಸಿ ಜನರ ಮುಂದಿಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕರು ನೂತನ ಸಿಎಂ ಸಿದ್ದರಾಮಯ್ಯ ಅವರನ್ನ ಒತ್ತಾಯಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  • Share this:

ಬೆಂಗಳೂರು: ಈ ಬಾರಿ ಬಹುಮತ ಪಡೆದುಕೊಂಡಿರುವ ಕಾಂಗ್ರೆಸ್ (Congress) ಚುನಾವಣೆಯಲ್ಲಿ (Karnataka Election 2023) ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ (40 Percent Commission Allegation) ಸೇರಿದಂತೆ ಭ್ರಷ್ಟಾಚಾರದ ಆರೋಪಗಳನ್ನ ಮಾಡಿತ್ತು. ಪೇಸಿಎಂ ಪೋಸ್ಟರ್ (Paycm Poster) ಮೂಲಕ ಬಿಜೆಪಿ ಸರ್ಕಾರದ (BJP Government) ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ (Congress) ವಾಗ್ದಾಳಿ ನಡೆಸಿತ್ತು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಬಿಜೆಪಿ ಸರ್ಕಾರದ ವಿರುದ್ಧ ಶೇ.40ರ ಕಮಿಷನ್ ಆರೋಪ ಮಾಡಿದ್ದರು. ಈ ಆರೋಪವನ್ನೇ ಚುನಾವಣೆಯಲ್ಲಿ ಕಾಂಗ್ರೆಸ್ ಅಸ್ತ್ರವಾಗಿ ಬಳಸಿಕೊಂಡು ಪ್ರಚಾರ ನಡೆಸಿತ್ತು. ಈಗ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ (Siddaramaiah Government) ಬಿಜೆಪಿ ವಿರುದ್ಧ ತನಿಖಾಸ್ತ್ರ ಪ್ರಯೋಗ ಮಾಡುತ್ತಾ ಅನ್ನೋ ಚರ್ಚೆಗಳು ಆರಂಭಗೊಂಡಿವೆ.


ಸಿಎಂ ಬೊಮ್ಮಾಯಿ ಸರ್ಕಾರದ ಕಾಲದಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣಗಳು, ಕಂಟ್ರಾಕ್ಟರ್ ಸಂಘದ ಕೆಂಪಣ್ಣ ಅವರ ಶೇ.40 ಕಮಿಷನ್ ಆರೋಪ ಸೇರಿದಂತೆ ಪ್ರಮುಖ ಭ್ರಷ್ಟಾಚಾರದ ಪ್ರಕರಣಗಳ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕರು ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.


ಹಿರಿಯ ಕಾಂಗ್ರೆಸ್ ನಾಯಕರಿಂದ ಒತ್ತಡ!


ಭ್ರಷ್ಟಾಚಾರದ ಅಸ್ತ್ರವನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಿದ್ದೇವೆ. ಈ ಅಸ್ತ್ರದ ಪ್ರಯೋಗದಿಂದ ಕಾಂಗ್ರೆಸ್​​​ಗೆ ಅತಿದೊಡ್ಡ ಯಶಸ್ಸು ಸಿಕ್ಕಿದೆ. ಇದೇ ಕಾರಣಕ್ಕೆ ಬಿಜೆಪಿ ಸರ್ಕಾರದ ಪ್ರಮುಖ ಭ್ರಷ್ಟಾಚಾರದ ಪ್ರಕರಣಗಳ ತನಿಖೆ ನಡೆಸಿ ಜನರ ಮುಂದಿಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕರು ನೂತನ ಸಿಎಂ ಸಿದ್ದರಾಮಯ್ಯ ಅವರನ್ನ ಒತ್ತಾಯಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.




ಇದನ್ನೂ ಓದಿ:  Karnataka Politics: ರಾಜ್ಯಾಧ್ಯಕ್ಷರ ಬದಲಾವಣೆಗೆ ಹೆಚ್​ಡಿಕೆ ಚಿಂತನೆ: ಇವರೇನಾ ಮುಂದಿನ ಜೆಡಿಎಸ್​ ಸಾರಥಿ?


ಕೈ ನಾಯಕರ ಲೆಕ್ಕಾಚಾರ ಏನು?


ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ಆದೇಶ ನೀಡಿದ್ರೆ, ಅದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅಸ್ತ್ರವಾಗಲಿದೆ ಎಂಬುವುದು ಕಾಂಗ್ರೆಸ್ ಹಿರಿಯ ನಾಯಕರ ಲೆಕ್ಕಾಚಾರ ಆಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

First published: