HOME » NEWS » State » WILL TAKE ESSENTIAL ACTION FOR INCREASE BED NUMBERS TO CORONA PATIENTS SHTV LG

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿತರಿಗೆ 6 ಸಾವಿರ ಹಾಸಿಗೆ ಮೀಸಲಿಡಲು ಅಗತ್ಯ ಕ್ರಮ

ಕೋವಿಡ್ ಸೋಂಕಿಗೆ ಸಂಬಂಧಿಸಿದಂತೆ ಒಂದೇ ಸಹಾಯಾವಾಣಿ ಇರಬೇಕೆಂದು ಸಭೆಯಲ್ಲಿ ಚರ್ಚಿಸಲಾಗಿದ್ದು, ಈ ಪೈಕಿ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಂದೇ ಸಹಾಯವಾಣಿ ಸಂಖ್ಯೆಯನ್ನು ಮಾತ್ರ ಬಳಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

news18-kannada
Updated:April 10, 2021, 8:43 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿತರಿಗೆ 6 ಸಾವಿರ ಹಾಸಿಗೆ ಮೀಸಲಿಡಲು ಅಗತ್ಯ ಕ್ರಮ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ಏ.10): ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೆಂಟ್ರಲ್ ಹಾಸ್ಪಿಟಲ್ ಬೆಡ್ ಅಲೋಕೇಷನ್ ಟೀಮ್ ಜೊತೆ ಶುಕ್ರವಾರ ಸಭೆ ನಡೆಸಲಾಗಿದ್ದು, ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಯಾವ ರೀತಿ ಹಾಸಿಗೆಗಳನ್ನು ವ್ಯವಸ್ಥೆ ಮಾಡಿಕೊಳ್ಳಬೇಕು, ಯಾರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬುದರ ಬಗ್ಗೆ ಚರ್ಚಿಸಲಾಗಿದೆ ಎಂದು ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿತರಿಗೆ ಹಾಸಿಗೆ ಲಭ್ಯತೆ, ಸಹಾಯವಾಣಿ ಸಂಖ್ಯೆ ಹಾಗೂ ಇನ್ನಿತರೆ ವಿಷಯಗಳ ಕುರಿತು ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ರವರ ನೇತೃತ್ವದಲ್ಲಿ ನಡೆದ ವರ್ಚುವಲ್ ಸಭೆ ಬಳಿಕ ಸುದ್ದಿಗಾರರೊಂದಿಗೆ ಮುಖ್ಯ ಆಯುಕ್ತರು ಮಾತನಾಡಿ, ನಗರದಲ್ಲಿ ಹಾಸಿಗೆ ಸಂಖ್ಯೆ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈಗಾಗಲೇ ಐಎಎಸ್ ಹಾಗೂ ಐಪಿಎಸ್ ತಂಡಗಳನ್ನು ರಚನೆ ಮಾಡಲಾಗಿದ್ದು, ಆ ತಂಡಗಳ ಜೊತೆ ಇಂದು ಸಭೆ ನಡೆಸಿ ಮೂಂದಿನ 10 ದಿನಗಳಲ್ಲಿ ಕನಿಷ್ಟ 6,000 ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗಾಗಿ ಮೀಸಲಿಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆ ಮಾಡುವುದು ಪ್ರತಿಷ್ಠೆಯ ಪ್ರಶ್ನೆಯಲ್ಲ; ಇದು ಕರ್ತವ್ಯದ ಒಂದು ಭಾಗ; ಶಿಕ್ಷಣ ಸಚಿವ ಸುರೇಶ್ ಕುಮಾರ್

ಕೋವಿಡ್ ಗಾಗಿ ಒಂದೇ ಸಹಾಯವಾಣಿ:

ಕೋವಿಡ್ ಸೋಂಕಿಗೆ ಸಂಬಂಧಿಸಿದಂತೆ ಒಂದೇ ಸಹಾಯಾವಾಣಿ ಇರಬೇಕೆಂದು ಸಭೆಯಲ್ಲಿ ಚರ್ಚಿಸಲಾಗಿದ್ದು, ಈ ಪೈಕಿ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಂದೇ ಸಹಾಯವಾಣಿ ಸಂಖ್ಯೆಯನ್ನು ಮಾತ್ರ ಬಳಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ವ್ಯಾಕ್ಸಿನೇಷನ್ ಮತ್ತಷ್ಟು ಹೆಚ್ಚಿಸಲು ಕ್ರಮ:

ನಗರದಲ್ಲಿ ವ್ಯಾಕ್ಸಿನೇಷನ್ ಸಂಖ್ಯೆಯನ್ನು ದ್ವಿಗುಣಗೊಳಿಸಲು ಕ್ರಮವಹಿಸಲಾಗುತ್ತಿದೆ. ಈ ಸಂಬಂಧ ವೈದ್ಯಕೀಯ ಸಚಿವರು 1 ಲಕ್ಷ ಲಸಿಕೆ ನೀಡಲು ಕ್ರಮವಹಿಸುವಂತೆ ನಿನ್ನೆ ನಡೆದ ಸಭೆಯಲ್ಲಿ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚು ಲಸಿಕೆ ನೀಡಲು ಕ್ರಮವಹಿಸಲಾಗುತ್ತಿದೆ. ಅಪಾರ್ಟ್ಮೆಂಟ್ಸ್, ಕಾರ್ಖಾನೆಗಳ ಬಳಿ ಖಾಸಗಿ ಆಸ್ಪತ್ರೆಗಳ ಸಹಯೋಗದಲ್ಲಿ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗುತ್ತಿದೆ. ಅಲ್ಲದೆ ನಗರದಲ್ಲಿ ಪ್ರತಿನಿತ್ಯ ಸುಮಾರು 60,000 ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಸೋಂಕು ಹೆಚ್ಚು ಕಂಡಬರುವ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಪರೀಕ್ಷೆ ಮಾಡಲು ಕ್ರಮವಹಿಸಲಾಗುತ್ತಿದೆ. ಸೋಂಕು ಕಂಡುಬಂದವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆಮಾಡಿ ಪರೀಕ್ಷೆ ಮಾಡಲಾಗುವುದು. ನಗರದಲ್ಲಿ ಹೆಚ್ಚು ಪರೀಕ್ಷೆ ಮಾಡುವ ನಿಟ್ಟಿನಲ್ಲಿ ಸ್ವಾಬ್ ಸಂಗ್ರಹ ತಂಡಗಳನ್ನು ಹೆಚ್ಚು ಮಾಡಲು ಕ್ರಮವಹಿಸಿಲಾಗುವುದು. ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೂ 3 ಸ್ಬಾಬ್ ಸಂಗ್ರಹ ತಂಡಗಳನ್ನು ನಿಯೋಜಿಸಲಾಗಿತ್ತು. ಇದೀಗ 8 ತಂಡಗಳನ್ನು ನಿಯೋಜನೆ ಮಾಡಲು ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು.
Youtube Video

ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ(ವೈದ್ಯಕೀಯ ಶಿಕ್ಷಣ) ಅನಿಲ್ ಕುಮಾರ್, ವಿಶೇಷ ಆಯುಕ್ತರುಗಳಾದ ರಾಜೇಂದ್ರ ಚೋಳನ್, ರಂದೀಪ್, ಆರೋಗ್ಯ ಇಲಾಖೆಯ ಆಯುಕ್ತರು ತ್ರಿಲೋಕ್ ಚಂದ್ರ, ಮುಖ್ಯ ಆಯುಕ್ತರು ಡಾ. ವಿಜೇಂದ್ರ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Published by: Latha CG
First published: April 10, 2021, 8:43 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories