ಬಾಗಲಕೋಟೆ: ರಾಜ್ಯದಲ್ಲಿ ಬಹುತೇಕ ಶಾಂತಿಯುವ ಮತದಾನ (Voting Process) ನಡೆಯುತ್ತಿದೆ. ಬೆಳಗ್ಗೆಯೇ ಸರತಿ ಸಾಲಿನಲ್ಲಿ ನಿಂತ ಮತದಾರರು (Voters) ಮತ ಹಕ್ಕು ಚಲಾಯಿಸಿದ್ದಾರೆ. ಚಿಕ್ಕಮಗಳೂರು (Chikkamagaluru) ಮತ್ತು ಬೆಳಗಾವಿ (Belagavi) ಜಿಲ್ಲೆಯಲ್ಲಿ ಕೇಸರಿ ಶಾಲು (Saffron Shawl) ಧರಿಸಿದ್ದಕ್ಕೆ ಗಲಾಟೆ ಆಗಿದೆ. ಮುಧೋಳ (Mudhol) ವಿಧಾನಸಭಾ ಕ್ಷೇತ್ರದ ಲೋಕಾಪುರ (Lokapur) ಪಟ್ಟಣದ ನಾಲ್ಕೈದು ಮತಗಟ್ಟೆ ಬಳಿ ಗೊಂಬೆಗಳನ್ನು (Black Magic) ಇರಿಸಿ ವಾಮಾಚಾರ ಮಾಡಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಮತಗಟ್ಟೆ ಬಳಿ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ಕಾರ್ಯಕರ್ತರು ಸೇರಿದ್ದರು. ಈ ವೇಳೆ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಯಿತು. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.
ಕಾಂಗ್ರೆಸ್ ಕಾರ್ಯಕರ್ತರಿಂದಲೇ ಈ ವಾಮಾಚಾರ ನಡೆದಿದೆ ಎಂದು ಬಿಜೆಪಿ ಆರೋಪಿಸಿದ್ದಾರೆ. ಬಿಜೆಪಿ ಆರೋಪವನ್ನು ಕಾಂಗ್ರೆಸ್ ಕಾರ್ಯಕರ್ತರು ತಳ್ಳಿ ಹಾಕಿದ್ದಾರೆ.
ಬೆಳಗಾವಿಯಲ್ಲಿ ಕೇಸರಿ ಗಲಾಟೆ
ಮತಗಟ್ಟೆಯೊಳಗೆ ಕೇಸರಿ ಶಾಲು ಧರಿಸಿ ಹೋಗಿದ್ದಕ್ಕೆ ಗಲಾಟೆ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆ ಕುಡಚಿ ವಿಧಾನಸಭಾ ಕ್ಷೇತ್ರದ ಮುಗಳಖೋಡ ಸರ್ಕಾರಿ ಶಾಲೆ ಮತಗಟ್ಟೆಯಲ್ಲಿ ನಡೆದಿದೆ. ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲಿ ಧರಿಸಿ ಬಂದಿದ್ದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿತ್ತು.
ಮತಗಟ್ಟೆ ಮುಂದೆ ಜಮಾಯಿಸಿದ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರನ್ನ ಚದುರಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
ಇದನ್ನೂ ಓದಿ: Karnataka Election Voting 2023 LIVE: ಕರ್ನಾಟಕ ವಿಧಾನಸಭಾ ಚುನಾವಣೆ - ಎಲ್ಲೆಲ್ಲಿ ಎಷ್ಟೆಷ್ಟು ಮತದಾನ ಆಗಿದೆ?
101 ವರ್ಷದ ವೃದ್ಧೆಯಿಂದ ಮತದಾನ
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ 101 ವರ್ಷದ ವೃದ್ಧೆ ಮತದಾನ ಮಾಡಿದ್ದು, ಸಾಗರ ವಿಧಾನಸಭಾ ಕ್ಷೇತ್ರದ 157ನೇ ಬೂತಿನಲ್ಲಿ ಮತ ಚಲಾವಣೆ ಮಾಡಿದ್ದಾರೆ. ಅವಿನಹಳ್ಳಿ ನಿವಾಸಿ ಬಿಬಿ ಜಾನ್ ಮತ ಚಲಾಯಿಸಿದ್ದು, 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನ ನಡೆದರು ಸಹ ಮತ ಕೇಂದ್ರಕ್ಕೆ ಬಂದು ಮತದಾನ ಮಾಡಿದ್ದಾರೆ ಬಿಬಿ ಜಾನ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ