Belagavi: ಮಗನ ಮೇಲೆ ಚಿರತೆ ದಾಳಿಯ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವು

ಚಿರತೆ ಪ್ರತ್ಯಕ್ಷವಾದ ಸ್ಥಳದ ಸುತ್ತಮುತ್ತ ಬ್ಯಾರಿಕೇಡ್ ಹಾಕಿ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು.

ಮೃತ ಮಹಿಳೆ

ಮೃತ ಮಹಿಳೆ

  • Share this:
ಬೆಳಗಾವಿ: ಬೆಳಗಾವಿಯ (Belagavi) ಜನನಿಬಿಡ ಪ್ರದೇಶದಲ್ಲಿ ಚಿರತೆ (Leopard) ಪ್ರತ್ಯಕ್ಷವಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ನಿರತನಾಗಿದ್ದ ಕಾರ್ಮಿಕನ ಮೇಲೆ ದಾಳಿ ಮಾಡಿದ ಚಿರತೆಯ ಚಲವಲನ ದೃಶ್ಯ ಸಿಸಿ ಕ್ಯಾಮೆರಾದಲ್ಲಿ (CCTV Footage) ಸೆರೆಯಾಗಿದೆ. ಕಟ್ಟಡ ಕಾರ್ಮಿಕನ (Building Worker) ಮೇಲೆ ದಾಳಿ ಮಾಡಿ ಪೊದೆಯಲ್ಲಿ ಅಡಗಿ ಕುಳಿತಿರುವ ಚಿರತೆ ಸೆರೆಗೆ ಕಾರ್ಯಾಚರಣೆ ಶುರುವಾಗಿದೆ. ಆದ್ರೆ ಕಟ್ಟಡ ಕಾರ್ಮಿಕನ ಮೇಲೆ ದಾಳಿ ಮಾಡಿದ ಪ್ರಾಣಿ ಚಿರತೆ‌ ಎಂಬುದು ಕನ್ಫರ್ಮ್ ಆಗಿಲ್ಲ ಅಂತಾ ಅರಣ್ಯಾಧಿಕಾರಿಗಳು (Forest Officer) ಹೇಳುತ್ತಿದ್ರೆ. ಸ್ಥಳೀಯರು ಚಿರತೆ ಎಂದು ಹೇಳುತ್ತಿದ್ದಾರೆ.

ಬೆಳಗಾವಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಕಟ್ಟಡ ನಿರ್ಮಾಣ ಕಾಮಗಾರಿ ಮಾಡುತ್ತಿದ್ದ ಕಾರ್ಮಿಕನ ಮೇಲೆ ದಾಳಿ ಮಾಡಿದೆ‌. ಕಟ್ಟಡ ಕಾರ್ಮಿಕನ ಬೆನ್ನಿಗೆ ಪರಚಿದ ಗಾಯ ಆಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ ಆಗಿದ್ದಾರೆ.

ಮಧ್ಯಾಹ್ನ ಚಿರತೆ ದಾಳಿ

ಇಂದು ಮಧ್ಯಾಹ್ನ 12.25ರ ಸುಮಾರಿಗೆ ಕಟ್ಟಡವೊಂದರ ಕಾಂಪೌಂಡ್‌ನಿಂದ ಹಾರಿ ಬಂದ ಚಿರತೆ ಕಟ್ಟಡ ನಿರ್ಮಾಣ ಕಾಮಗಾರಿ ಮಾಡುತ್ತಿದ್ದ ಖನಗಾವಿ ಕೆ.ಹೆಚ್‌. ಗ್ರಾಮದ ನಿವಾಸಿ (38) ವರ್ಷದ ಸಿದರಾಯಿ ಲಕ್ಷ್ಮಣ ಮಿರಜಕರ್ ಮೇಲೆ ದಾಳಿ ಮಾಡಿದೆ.

Woman dies of heart attack after hearing leopard attack on her son csb mrq
ಸಾಂಕೇತಿಕ ಚಿತ್ರ


ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸರೆ

ಸಿದರಾಯಿ ಭುಜಕ್ಕೆ ಪರಚಿ ಮತ್ತೋರ್ವ ಕಾರ್ಮಿಕನ ಬೆನ್ನಟ್ಟಿದೆ. ಆತ ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ಪಕ್ಕದಲ್ಲೇ ಇದ್ದ  ಪೊದೆಯಲ್ಲಿ ಅವಿತುಕೊಂಡಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಜಾಧವ ನಗರ ನಿವಾಸಿ ಯಶೋಧನ್ ಜಾಧವ್ ಎಂಬುವರ ಮನೆಯ ಸಿಸಿ ಕ್ಯಾಮರಾದಲ್ಲಿ ಚಿರತೆಯ ಚಲನವಲನಗಳು ಪತ್ತೆಯಾಗಿದ್ದು ಸ್ಥಳೀಯ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ಇನ್ನು ಚಿರತೆ ದಾಳಿಯಿಂದ ಗಾಯಗೊಂಡಿದ್ದ ಕಾರ್ಮಿಕ ಸಿದರಾಯಿ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ ಆಗಿದ್ದಾರೆ.

ಇದನ್ನೂ ಓದಿ:  Monkeypox: ಮಂಕಿಪಾಕ್ಸ್‌ ಪತ್ತೆಗೆ ಬಂತು ಆರ್‌ಟಿ-ಪಿಸಿಆರ್‌ ಕಿಟ್‌; ಅಭಿವೃದ್ಧಿಪಡಿಸಿದ್ದು ಇವರೇ ನೋಡಿ

ಮಗನ ಮೇಲೆ ಚಿರತೆ ದಾಳಿ ಸುದ್ದಿಯನ್ನು ಕೇಳಿ ಹೃದಯಾಘಾತದಿಂದ ತಾಯಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೂ ನಡೆದಿದೆ. ಇಂದು ಮಧ್ಯಾಹ್ನ ಜಾಧವ್ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ಚಿರತೆ ದಾಳಿ ಮಾಡಿತ್ತು‌. ಚಿರತೆ ದಾಳಿಯಿಂದ ಸಿದರಾಯಿ ಮಿರಜಕರ್‌ಗೆ ಸಣ್ಣಪುಟ್ಟ ಗಾಯ ಆಗಿತ್ತು.

ಹೃದಯಾಘಾತದಿಂದ ತಾಯಿ ಸಾವು

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ ಆಗುತ್ತಿದ್ದಾಗ ಮಗ ಸಿದರಾಯಿ ಮೇಲೆ ಚಿರತೆ ದಾಳಿಯ ಸುದ್ದಿಯನ್ನು ಕೇಳಿ ಸಿದರಾಯಿ ತಾಯಿ ಶಾಂತಾ ಮಿರಜಕರ್(65) ಸ್ಥಳದಲ್ಲೇ ಸಾವನ್ನಪ್ಪಿದ್ದು ಖನಗಾವಿ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Woman dies of heart attack after hearing leopard attack on her son csb mrq
ಬೋನ್ ಇರಿಸಿರೋದು


ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಎಪಿಎಂಸಿ ಠಾಣೆ ಪೊಲೀಸರು, ಅಗ್ನಿಶಾಮಕ ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿ ಆಗಮಿಸಿ ಚಿರತೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಎಪಿಎಂಸಿ ಠಾಣೆ ಪೊಲೀಸರು ಚಿರತೆ ಸಿಗುವವರೆಗೂ ಎಚ್ಚರಿಕೆಯಿಂದ ಇರುವಂತೆ ಧ್ವನಿವರ್ಧಕ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

ಚಿರತೆ ಹೆಜ್ಜೆ ಗುರುತು ಕಂಡು ಬಂದಿಲ್ಲ

ಚಿರತೆ ಪ್ರತ್ಯಕ್ಷವಾದ ಸ್ಥಳದ ಸುತ್ತಮುತ್ತ ಬ್ಯಾರಿಕೇಡ್ ಹಾಕಿ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು.

ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿ, ಚಿರತೆ ಪ್ರತ್ಯಕ್ಷ ಆಗಿದೆ ಅಂತಾ ಸ್ಥಳೀಯರು ತಿಳಿಸಿದ್ದಾರೆ. ಇನ್ನು ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಆರ್‌ಎಫ್ಐ ರಾಕೇಶ್ ಅರ್ಜುನವಾಡ, 'ಕಾರ್ಮಿಕನ ಮೇಲೆ ದಾಳಿ ಮಾಡಿದ್ದು ನೋಡಿದ್ರೆ ಅದು ಚಿರತೆ ರೀತಿ ಅನಿಸಲ್ಲ. ಆದರೆ ಸಿಸಿ ಕ್ಯಾಮರಾದಲ್ಲಿ ನೋಡಿದ್ರೆ ಸೈಜ್ ದೊಡ್ಡದಿದೆ.

Woman dies of heart attack after hearing leopard attack on her son csb mrq
ಸಾಂದರ್ಭಿಕ ಚಿತ್ರ


ಪೊಲೀಸರು ಹೇಳೋದೇನು?

ಚಿರತೆ ಹಾಗೂ ಚಿರತೆ ಬೆಕ್ಕು ಗಾತ್ರದಲ್ಲಿ ಮಾತ್ರ ವ್ಯತ್ಯಾಸ ಇರುತ್ತೆ. ಉಳಿದಿದ್ದೆಲ್ಲ ಸೇಮ್ ಇರುತ್ತೆ. ಆದ್ರೆ ಕಾರ್ಮಿಕನ ಮೇಲೆ ದಾಳಿ ಮಾಡಿದ್ದು ಚಿರತೆ ಅನ್ನೋದು ಕನ್ಫರ್ಮ್ ಆಗಿಲ್ಲ.‌ ಸಿಸಿ ಕ್ಯಾಮರಾದಲ್ಲಿ ದೃಶ್ಯ ಸ್ಪಷ್ಟವಾಗಿಲ್ಲ.ಜನಸಂದಣಿ ನಿಯಂತ್ರಿಸಲು ಪೊಲೀಸರಿಗೆ ಮನವಿ ಮಾಡಿದ್ದೇವೆ. ಜನರು ಹೊರಗೆ ಬರದಂತೆ ನಾವು ಮನವಿ ಮಾಡ್ತಿದ್ದೇವೆ. ಚಿರತೆ ಸೆರೆಗೆ ಗದಗದಿಂದ ತಜ್ಞ ಸಿಬ್ಬಂದಿಯನ್ನು ಕರೆಸುತ್ತಿದ್ದೇವೆ. ಚಿರತೆ ಹೆಜ್ಜೆ ಗುರುತು ಕಂಡು ಬಂದಿಲ್ಲ' ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:  Hijab Controversy: ನ್ಯಾಯಾಧೀಶರ ಆರೋಗ್ಯ ಸರಿಯಿಲ್ಲದ ಕಾರಣ ಹಿಜಾಬ್ ಪ್ರಕರಣ ಪಟ್ಟಿ ವಿಳಂಬ; ಶೀಘ್ರದಲ್ಲೇ ಹೊಸ ನ್ಯಾಯ ಪೀಠ ರಚನೆ

ಕಟ್ಟಡ ಕಾರ್ಮಿಕರು ಹಾಗೂ ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಮೂರು ಅಡಿ ಎತ್ತರದ ಚಿರತೆ ಇತ್ತು ಅಂತಾ ಹೇಳುತ್ತಿದ್ದಾರೆ. ಇತ್ತ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯ ಆಧರಿಸಿ ಅರಣ್ಯ, ಪೊಲೀಸ್, ಅಗ್ನಿಶಾಮಕ, ಎಸ್‌ಡಿಆರ್‌ಎಫ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಕಟ್ಟಡ ಕಾರ್ಮಿಕನ ಮೇಲೆ ದಾಳಿ ಮಾಡಿದ ಪ್ರಾಣಿ ಚಿರತೆಯೋ ಅಥವಾ ಚಿರತೆ ಬೆಕ್ಕು ಎಂಬುದು ಸೆರೆ ಹಿಡಿದ ಬಳಿಕವಷ್ಟೇ ಸ್ಪಷ್ಟವಾಗಲಿದೆ.
Published by:Mahmadrafik K
First published: