ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳಿಂದ ಕಿರುಕುಳ; ಬೇಸತ್ತ ಮಹಿಳೆಯರಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ

ರಾಷ್ಟ್ರೀಯ ಬ್ಯಾಂಕುಗಳಲ್ಲಿ ಬಡಜನತೆಗೆ ಸಾಲ ಸೌಲಭ್ಯ ನೀಡಲಾಗುತ್ತಿಲ್ಲ. ಹೀಗಾಗಿ, ಮೈಕ್ರೋ ಫೈನಾನ್ಸ್ ಮೂಲಕ ಹಣ ಪಡೆದುಕೊಳ್ಳಲಾಗಿದ್ದು, ಇದೀಗ ಕಾನೂನುಗಳನ್ನು ಉಲ್ಲಂಘಿಸಿ, ವಿಪರೀತ ಬಡ್ಡಿ ವಿಧಿಸಿ, ನಮಗೆ ವಿನಾಕಾರಣ ತೊಂದರೆ ನೀಡಲಾಗುತ್ತಿದೆ ಎಂದು ದೂರಿದ್ದಾರೆ.

news18-kannada
Updated:December 16, 2019, 4:34 PM IST
ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳಿಂದ ಕಿರುಕುಳ; ಬೇಸತ್ತ ಮಹಿಳೆಯರಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ
ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ ಮಹಿಳೆಯರು
  • Share this:
ಶಿವಮೊಗ್ಗ(ಡಿ.16) : ಜಿಲ್ಲೆಯಲ್ಲಿ ಲೇವಾದೇವಿದಾರರ ಕಾಟ ಹೆಚ್ಚಾಗಿದ್ದು, ಈ ಕೂಡಲೇ, ಸಂತ್ರಸ್ತ ಮಹಿಳೆಯರ ಸಾಲಮನ್ನಾ ಹಾಗೂ ಮೈಕ್ರೋ ಫೈನಾನ್ಸ್ ಗಳನ್ನು ಮುಚ್ಚುವಂತೆ, ಆಗ್ರಹಿಸಿ ಇಂದು ಜಿಲ್ಲಾ ಋಣಮುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ನೂರಾರು ಮಹಿಳೆಯರು ಇಂದು ಪ್ರತಿಭಟನೆ ನಡೆಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಸೇರಿಕೊಂಡ ನೂರಾರು ಮಹಿಳೆಯರು, ಈ ಕೂಡಲೇ, ಲೇವಾದೇವಿದಾರರಲ್ಲಿ ಸಾಲ ಪಡೆದುಕೊಂಡವರ ಸಾಲಗಳನ್ನು ಋಣಮುಕ್ತ ಕಾಯ್ದೆ ಜಾರಿಗೆ ತಂದು ಮನ್ನಾ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ಭಾಗದಲ್ಲಿ, ರೈತ ಮತ್ತು ಕೂಲಿ ಕಾರ್ಮಿಕ ಮಹಿಳೆಯರ ಗುಂಪುಗಳನ್ನಾಗಿ ಮಾಡಿ ಮೈಕ್ರೋ ಫೈನಾನ್ಸ್ ನವರು ಸಾಲ ನೀಡಿ, ನಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

ಗುಂಪಿನ ಆಧಾರದ ಮೇಲೆ ಸಾಲ ನೀಡಿರುವ ಫೈನಾನ್ಸ್ ನ ಪ್ರತಿನಿಧಿಗಳು ನಿತ್ಯ ಮನೆಗೆ ಬಂದು ಕಿರುಕುಳ ನೀಡುತ್ತಿದ್ದಾರೆ. ಈಗಾಗಲೇ, ಅತಿವೃಷ್ಟಿಯಿಂದಾಗಿ ಕೂಲಿ ಕೆಲಸವೂ ಇಲ್ಲದಂತಾಗಿದ್ದು, ರಾಷ್ಟ್ರೀಯ ಬ್ಯಾಂಕುಗಳಲ್ಲಿ ಬಡಜನತೆಗೆ ಸಾಲ ಸೌಲಭ್ಯ ನೀಡಲಾಗುತ್ತಿಲ್ಲ. ಹೀಗಾಗಿ, ಮೈಕ್ರೋ ಫೈನಾನ್ಸ್ ಮೂಲಕ ಹಣ ಪಡೆದುಕೊಳ್ಳಲಾಗಿದ್ದು, ಇದೀಗ ಕಾನೂನುಗಳನ್ನು ಉಲ್ಲಂಘಿಸಿ, ವಿಪರೀತ ಬಡ್ಡಿ ವಿಧಿಸಿ, ನಮಗೆ ವಿನಾಕಾರಣ ತೊಂದರೆ ನೀಡಲಾಗುತ್ತಿದೆ ಎಂದು ದೂರಿದ್ದಾರೆ.

ಇದನ್ನೂ ಓದಿ : ಸಿಎಂ ತವರು ಜಿಲ್ಲೆಯಲ್ಲಿ ಹೆಚ್ಚಾಗಿದೆ ಸಣ್ಣ ಲೇವಾದೇವಿದಾರರ ಕಾಟ; ಸಾಲ ವಸೂಲಾತಿಗೆ ಕಿರುಕುಳ ಆರೋಪ

ಶೇ. 25 ರಿಂದ 40 ರವರೆಗೆ ಬಡ್ಡಿ ವಿಧಿಸಿರುವುದು ಅಲ್ಲದೇ, ಸಾಲ ಪಡೆದಿರುವ ಮಹಿಳೆಯರ ಮನೆಗೆ ನಿರಂತರವಾಗಿ ಬಂದು ಕಿರುಕುಳ ನೀಡಲಾಗುತ್ತಿದೆ. ಈ ಕೂಡಲೇ, ಜಿಲ್ಲಾಧಿಕಾರಿಗಳು ನೂರಾರು ಮಹಿಳೆಯರ ಸಮಸ್ಯೆ ಮನಗಂಡು, ಮೈಕ್ರೋ ಫೈನಾನ್ಸ್ ನವರ ವ್ಯವಹಾರಕ್ಕೆ ಕಡಿವಾಣ ಹಾಕಬೇಕಿದೆ. ಅಲ್ಲದೇ, ಋಣಮುಕ್ತ ಕಾಯ್ದೆ ಜಾರಿಗೆ ತಂದು, ನಮ್ಮ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿದ್ದಾರೆ.

 
First published: December 16, 2019, 4:17 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading