Chitradurga: ಅಪಾಯಕಾರಿ ಸ್ಥಳಗಳಲ್ಲಿ ಮಕ್ಕಳ ದುಡಿಮೆ! ಬಾಲ ಕಾರ್ಮಿಕರ ರಕ್ಷಣೆ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಅವರ ದುಡಿಮೆಯಿಂದ ಬದುಕಬಾರದು, ಮಕ್ಕಳಿಗೆ ಶಿಕ್ಷಣ (Education) ಸಿಗುವ ಹಾಗೇ ನೋಡಿಕೊಳ್ಳಬೇಕು ಇದು ಸಂವಿಧಾನದ ಆಶಯವಾಗಿದ್ದು, ಮಕ್ಕಳಿಗೆ ಶಿಕ್ಷಣ ಕೊಡಿ, ಶಿಕ್ಷೆಯನ್ನಲ್ಲ (Punsihment) ಎಂದು ಚಿತ್ರದುರ್ಗ (Chitradurga) ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು (Law) ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಕೆ.ಗಿರೀಶ್ ಹೇಳಿದ್ದಾರೆ. 

ಮುಂದೆ ಓದಿ ...
  • Share this:

ಚಿತ್ರದುರ್ಗ(ಜೂ.13): ಮಕ್ಕಳನ್ನು ದುಡಿಸಿಕೊಳ್ಳಬಾರದು, ಅವರ ದುಡಿಮೆಯಿಂದ ಬದುಕಬಾರದು, ಮಕ್ಕಳಿಗೆ ಶಿಕ್ಷಣ (Education) ಸಿಗುವ ಹಾಗೇ ನೋಡಿಕೊಳ್ಳಬೇಕು ಇದು ಸಂವಿಧಾನದ ಆಶಯವಾಗಿದ್ದು, ಮಕ್ಕಳಿಗೆ ಶಿಕ್ಷಣ ಕೊಡಿ, ಶಿಕ್ಷೆಯನ್ನಲ್ಲ (Punsihment) ಎಂದು ಚಿತ್ರದುರ್ಗ (Chitradurga) ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು (Law) ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಕೆ.ಗಿರೀಶ್ ಹೇಳಿದ್ದಾರೆ. ನಗರದ ತರಾಸು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ (Police Department), ವಕೀಲರ ಸಂಘ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ (ರಿ), ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ 1098 ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಮಾಡಲಾಯಿತು.


ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಮಾತನಾಡಿದ ಅವರು, ಯಾವುದೇ ಅಪಾಯಕಾರಿ ಸಂಸ್ಥೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ದುಡಿಮೆಗೆ ನೇಮಕ ಮಾಡಿಕೊಳ್ಳಬಾರದು. ಬಾಲಕಾರ್ಮಿಕ ಪದ್ಧತಿಯು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾಗಳನ್ನು ನಡೆಸಲಾಗುತ್ತಿದೆ ಎಂದರು.


ಇಟ್ಟಿಗೆ ಭಟ್ಟಿಯಲ್ಲಿ ಮಕ್ಕಳ ದುಡಿಮೆ


ಕಳೆದ ತಿಂಗಳು ಮೊಳಕಾಲ್ಮುರು ತಾಲ್ಲೂಕಿನಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಒಂಭತ್ತು ಜನ ಮಕ್ಕಳನ್ನು ರಕ್ಷಣೆ ಮಾಡಲಾಯಿತು. ಮಕ್ಕಳ ರಕ್ಷಣೆಯ ಜವಾಬ್ದಾರಿ ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದ್ದಾರೆ.


ಬಳಿಕ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಪ್ರಭಾಕರ್ ಮಾತನಾಡಿ, ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರ) ಕಾಯ್ದೆ 1986ಕ್ಕೆ ತಿದ್ದುಪಡಿಯಾಗಿ, ಭಾರತ ಸರ್ಕಾರ 2016ರ ಜುಲೈ 30 ರ ಅಧಿಸೂಚನೆ ಪ್ರಕಾರ ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯನ್ನು ಬಾಲಕಾರ್ಮಿಕರ ಮತ್ತು ಕಿಶೋರಾವಸ್ಥೆಯ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಎಂದು ತಿದ್ದುಪಡಿ ಮಾಡಲಾಗಿದ್ದು, ಈ ಕಾಯ್ದೆ ಪ್ರಕಾರ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದು ಸಂಪೂರ್ಣ ನಿಷೇಧಿಸಿದೆ. ಈ ಕಾನೂನು ಉಲ್ಲಂಘನೆ ಮಾಡಿದರೆ ಆರು ತಿಂಗಳಿಂದ 2 ವರ್ಷದವರೆಗೂ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು ಎಂದರು.


ಇದನ್ನೂ ಓದಿ: MLC Election: ವಾಯುವ್ಯ ಪದವೀಧರ ಶಿಕ್ಷಕರ ಕ್ಷೇತ್ರದ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ


ಉಚಿತ ಸಹಾಯವಾಣಿ 1098


ಇನ್ನೂ ಮಕ್ಕಳ ಸಂಕಟದಲ್ಲಿದ್ದರೆ ಉಚಿತ ಸಹಾಯವಾಣಿ 1098 ಕರೆ ಮಾಡಿ ನೆರವು ಪಡೆಯಬಹುದು. ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಶಾಲೆ, ಚಿತ್ರಮಂದಿರ ಸೇರಿದಂತೆ ಎಲ್ಲ ಕಡೆಗಳಲ್ಲಿಯೂ ಪ್ರದರ್ಶಿಸಲಾಗಿದೆ. ಭಾರತ ಜನಸಂಖ್ಯೆಯಲ್ಲಿ ಶೇ.40ರಷ್ಟು ಮಂದಿ ಮಕ್ಕಳಿದ್ದಾರೆ.


ಮಕ್ಕಳಿಗಾಗಿ ಸರ್ಕಾರಿ ಸೌಲಭ್ಯಗಳು


ಬಲಿಷ್ಟ ಹಾಗೂ ಸದೃಢದೇಶ ನಿರ್ಮಾಣ ಮಾಡಲು ಮಾನವ ಸಂಪನ್ಮೂಲ ಬಹಳ ಮುಖ್ಯ. ಮಕ್ಕಳಿಗೆ ರಕ್ಷಣೆ, ಪೌಷ್ಠಿಕ ಆಹಾರ, ಶಿಕ್ಷಣ ಸೇರಿದಂತೆ ಹಲವು ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ. ಈ ಎಲ್ಲ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.


ಇದನ್ನೂ ಓದಿ: Bengaluru: ಫೈವ್ ಸ್ಟಾರ್ ಹೋಟೆಲ್ ಮೇಲೆ ದಾಳಿ, ಬೆಳ್ಳಂಬೆಳಗ್ಗೆ ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ


ಕಾರ್ಮಿಕ ಅಧಿಕಾರಿ ಇಬ್ರಾಹಿಂ ಮಾತನಾಡಿ, ಬಾಲಕಾರ್ಮಿಕ ಪದ್ದತಿ ಅನಿಷ್ಠ ಪದ್ಧತಿಯಾಗಿದ್ದು, ಇದನ್ನು ನಿರ್ಮೂಲನೆ ಮಾಡಲು ಜನಪ್ರತಿನಿಧಿಗಳು, ಸ್ವಯಂ ಸೇವಾ ಸಂಘಗಳು, ಸಾರ್ವಜನಿಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಹಕಾರ ಅಗತ್ಯವಾಗಿದೆ. ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮವಹಿಸಲಾಗಿದೆ ಎಂದರು.

top videos
    First published: