ವೀರಶೈವ ಸಂಪ್ರದಾಯದಂತೆ ಇಂದು ಸಾಹಿತಿ ಚಿದಾನಂದಮೂರ್ತಿ ಅಂತ್ಯಕ್ರಿಯೆ

ಸುಮನಹಳ್ಳಿಯ ಹಿಂದೂ ರುದ್ರ ಭೂಮಿಯಲ್ಲಿ ವೀರಶೈವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳನ್ನು ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

news18-kannada
Updated:January 12, 2020, 8:51 AM IST
ವೀರಶೈವ ಸಂಪ್ರದಾಯದಂತೆ ಇಂದು ಸಾಹಿತಿ ಚಿದಾನಂದಮೂರ್ತಿ ಅಂತ್ಯಕ್ರಿಯೆ
ಹಿರಿಯ ಸಾಹಿತಿ ಚಿದಾನಂದ ಮೂರ್ತಿ
  • Share this:
ಬೆಂಗಳೂರು(ಜ.12): ನಿನ್ನೆ ಮುಂಜಾನೆ ಇಹಲೋಕ ತ್ಯಜಿಸಿದ ಹಿರಿಯ ಸಾಹಿತಿ, ಸಂಶೋಧಕ ಚಿದಾನಂದಮೂರ್ತಿಯವರ ಅಂತ್ಯಕ್ರಿಯೆ ಇಂದು ಬೆಳಗ್ಗೆ 11 ಗಂಟೆ ಬಳಿಕ ನಡೆಯಲಿದೆ. ಅಲ್ಲಿಯವರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸುಮನಹಳ್ಳಿಯ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಚಿಮೂ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ಚಿಮೂ ಅವರ ಆಸೆಗಳಿಗೆ ಧಕ್ಕೆಯಾಗಬಾರದೆಂದು ಪಾರ್ಥಿವ ಶರೀರಕ್ಕೆ ಯಾವುದೇ ಪೂಜೆ-ಪುನಸ್ಕಾರ ಮಾಡುವುದಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇಂದು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳು ಅಂತಿಮ ದರ್ಶನ ಪಡೆಯಲಿದ್ದಾರೆ. ಬಳಿಕ ಬೆಳಿಗ್ಗೆ 11 ಗಂಟೆಗೆ ಅಂತಿಮ ವಿಧಿ ವಿಧಾನ ಮಾಡಲಾಗುತ್ತದೆ.

ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಚಿದಾನಂದಮೂರ್ತಿ ಅಂತ್ಯಕ್ರಿಯೆ; ಸಿಎಂ ಯಡಿಯೂರಪ್ಪ

ಸುಮನಹಳ್ಳಿಯ ಹಿಂದೂ ರುದ್ರ ಭೂಮಿಯಲ್ಲಿ ವೀರಶೈವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳನ್ನು ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು  ಸಿಎಂ ಬಿಎಸ್​ಯಡಿಯೂರಪ್ಪ ಹೇಳಿದ್ದಾರೆ.

ಚಿದಾನಂದಮೂರ್ತಿಯವರ ಸಾವು ನೋವುಂಟು ಮಾಡಿದೆ‌. ಕನ್ನಡ ನಾಡು, ನುಡಿ ಅಸ್ಮಿತೆಗಾಗಿ ಹೋರಾಟ ಮಾಡುತ್ತಿದ್ದವರು. ಅವರ ನಿಧನದಿಂದ ಕನ್ನಡ ಸ್ವಾರಸ್ವತಲೋಕಕ್ಕೆ ತುಂಬಾ ನಷ್ಟವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಿಎಂ ಬಿಎಸ್​ವೈ ದುಃಖಿಸಿದ್ದರು.

ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ನಿಧನ; ಸಿಎಂ ಸೇರಿದಂತೆ ಅನೇಕ ಗಣ್ಯರಿಂದ ಸಂತಾಪ

ಚಿದಾನಂದಮೂರ್ತಿ 1931 ಮೇ 10ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ  ಹಿರೆಕೊಗಳೂರ್​​ನಲ್ಲಿ ಜನಿಸಿದ್ದರು. ಚಿದಾನಂದಮೂರ್ತಿಯವರಿಗೆ 88 ವರ್ಷ ವಯಸ್ಸಾಗಿತ್ತು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಕೊನೆಯುಸಿರೆಳೆದ್ದರು.   ಸಿಎಂ ಬಿಎಸ್​ವೈ, ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಚಿಮೂ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
First published:January 12, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ