• Home
  • »
  • News
  • »
  • state
  • »
  • ಬಸನಗೌಡ ಪಾಟೀಲ ಯತ್ನಾಳ, ದೊರೆಸ್ವಾಮಿ ಇಬ್ಬರೂ ಸರಿಯಿಲ್ಲ; ಮಾಜಿ ಸಚಿವ ಎಚ್.ವಿಶ್ವನಾಥ್

ಬಸನಗೌಡ ಪಾಟೀಲ ಯತ್ನಾಳ, ದೊರೆಸ್ವಾಮಿ ಇಬ್ಬರೂ ಸರಿಯಿಲ್ಲ; ಮಾಜಿ ಸಚಿವ ಎಚ್.ವಿಶ್ವನಾಥ್

ಎಚ್​. ವಿಶ್ವನಾಥ್​

ಎಚ್​. ವಿಶ್ವನಾಥ್​

ಬಜೆಟ್​ ವಿಚಾರವಾಗಿ ವಿಶ್ವನಾಥ್ ಅವರು ಯಡಿಯೂರಪ್ಪ ಅವರಿಗೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಯಡಿಯೂರಪ್ಪನವರೇ ಮತ್ತಷ್ಟು ಸಾಲ ಜಾಸ್ತಿ ಮಾಡಬೇಡಿ. ಬೇಕಾಬಿಟ್ಟಿ ಯೋಜನೆಗಳ ಘೋಷಣೆ ಬೇಡ. ಉಳಿತಾಯದ ಬಜೆಟ್ ಮಾಡಿ. ಎಲ್ಲಾ ಸಿಎಂಗಳು 10 ವರ್ಷದ ಬಜೆಟ್ ಮಾಡಿದ್ದಾರೆ. ನೀವು ಕೇವಲ ಒಂದು ವರ್ಷದ ಬಜೆಟ್ ಮಾಡಿ ಸಾಕು ಎಂದು ಸಲಹೆ ನೀಡಿದರು.

ಮುಂದೆ ಓದಿ ...
  • Share this:

    ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಿಂದಿಸಿದ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಮಾಜಿ ಶಾಸಕ ಎಚ್.ವಿಶ್ವನಾಥ್, ಯತ್ನಾಳು ಸರಿಯಿಲ್ಲ,  ದೊರೆಸ್ವಾಮಿಯೂ ಸರಿಯಿಲ್ಲ ಎಂದು ಹೇಳಿದ್ದಾರೆ.

    ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ದೊರೆಸ್ವಾಮಿ ಅವರು ಒಂದು ಪಕ್ಷದ ಪರವಾಗಿ ಮಾತನಾಡಬಾರದು. ಅವರ ಮೇಲೆ ಎಲ್ಲರಿಗೂ ಅಪಾರ ಗೌರವವಿದೆ.  ಅವರು ಎಲ್ಲದಕ್ಕೂ ಬಾಯಿ ಹಾಕಬಾರದು, ತಲೆ ಹಾಕಬಾರದು. ಒಂದು ಪಕ್ಷದ ವಕ್ತಾರರಂತೆ ಮಾತನಾಡಬಾರದು. ನಿಮ್ಮ ಗೌರವ ಉಳಿಸಿಕೊಳ್ಳಿ, ರಾಜಕೀಯದ ಕೊಳಚೆಗೆ ಹೋಗಿ ಬೀಳಬೇಡಿ. ರಾಜಕೀಯ ಪಕ್ಷಗಳಿಗೆ ನೀವು ದಾಳವಾಗಬೇಡಿ. ಯಾರ ಯಾರ ಬಗ್ಗೆ ನೀವು ಏನೆನೋ ಮಾತನಾಡವುದು ಕೂಡ ಸರಿಯಲ್ಲ ಎಂದು ಹೇಳಿದರು.

    ರಾಜ್ಯ ಬಜೆಟ್ ಮಂಡನೆ ವಿಚಾರವಾಗಿ ಮಾತನಾಡಿದ ವಿಶ್ವನಾಥ್, ಬಜೆಟ್ ಮಂಡನೆ ಕೇವಲ ಶಾಸ್ತ್ರವಾಗಬಾರದು. ಬಜೆಟ್ ಸರ್ಕಾರದ ಜನಪ್ರಿಯತೆ ಹೆಚ್ಚಿಸುವುದಲ್ಲ. ಜನರ ಅನುಕೂಲಕ್ಕಾಗಿ ಬಜೆಟ್ ಮಾಡಬೇಕು ಎಂದು ಸಲಹೆ ನೀಡಿದರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದವೂ ವಾಗ್ದಾಳಿ ನಡೆಸಿದರು. ಮಾತೆತ್ತಿದರೆ 14 ಬಾರಿ ಬಜೆಟ್ ಮಂಡಿಸಿದ್ದೇನೆ ಅಂತಾರೆ. ಆದರೆ ಬಜೆಟ್‌ನಲ್ಲಿ ಆರ್ಥಿಕ‌ ಶಿಸ್ತು ಶಿಷ್ಟಾಚಾರ ತರಲು ಆಗಲಿಲ್ಲ. ರಾಜ್ಯಕ್ಕೆ ಮೂರು ಲಕ್ಷ ಕೋಟಿ ಸಾಲದ ಹೊರೆ ಇದೆ. ಅದರಲ್ಲಿ ಸಿದ್ದರಾಮಯ್ಯ ಅವರದ್ದೇ ಒಂದೂವರೆ ಲಕ್ಷ ಕೋಟಿ ಸಾಲದ ಪಾಲಿದೆ. ಮಾಜಿ ಮುಖ್ಯಮಂತ್ರಿ ಪರಮಾಧಿಕಾರದ ಹೆಸರಿನಲ್ಲಿ ಜನರನ್ನು ಸಾಲದ ಶೂಲಕ್ಕೆ ಸಿಲುಕಿಸಿದ್ದೀರಿ ಎಂದು ಹರಿಹಾಯ್ದರು.

    ಬಜೆಟ್​ ವಿಚಾರವಾಗಿ ವಿಶ್ವನಾಥ್ ಅವರು ಯಡಿಯೂರಪ್ಪ ಅವರಿಗೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಯಡಿಯೂರಪ್ಪನವರೇ ಮತ್ತಷ್ಟು ಸಾಲ ಜಾಸ್ತಿ ಮಾಡಬೇಡಿ. ಬೇಕಾಬಿಟ್ಟಿ ಯೋಜನೆಗಳ ಘೋಷಣೆ ಬೇಡ. ಉಳಿತಾಯದ ಬಜೆಟ್ ಮಾಡಿ. ಎಲ್ಲಾ ಸಿಎಂಗಳು 10 ವರ್ಷದ ಬಜೆಟ್ ಮಾಡಿದ್ದಾರೆ. ನೀವು ಕೇವಲ ಒಂದು ವರ್ಷದ ಬಜೆಟ್ ಮಾಡಿ ಸಾಕು ಎಂದು ಸಲಹೆ ನೀಡಿದರು.

    ಇದನ್ನು ಓದಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಎಡವಟ್ಟು; ಕೇಂದ್ರ ಸರ್ಕಾರಕ್ಕೆ ನೀಡಬೇಕಿದ್ದ ಪುಸ್ತಕದಲ್ಲಿ ಆರ್​ಎಸ್​ಎಸ್ ಶಿಫಾರಸು ಪತ್ರ

    ವಿಧಾನಸಭೆಯಲ್ಲಿ ವಿಪಕ್ಷಗಳ ಗದ್ದಲ ವಿಚಾರವಾಗಿ ಮಾತನಾಡಿದ ವಿಶ್ವನಾಥ್,  ಮಾತೆತ್ತಿದ್ದರೆ ಸಿದ್ದರಾಮಯ್ಯ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ ಅಂತಾರೆ. ಎರಡು ದಿನ ವಿಧಾನಸಭೆ ನಡೆಯದಂತೆ ತಡೆ ಮಾಡಿದ್ದೀರಾ.  ಏನಿದರ ಅರ್ಥ? ಬರೀ ರಾಜಕೀಯ ಮಾಡೋದಾ? ಆರೋಪ, ಪ್ರತ್ಯಾರೋಪ ಮಾಡುವುದಕ್ಕಾಗಿ ಮಾತ್ರ ವಿಧಾನಸಭೆ ಅಲ್ಲ. ಅದು ಜನರ ಹಿತದೃಷ್ಟಿಯ ಚರ್ಚೆಗಾಗಿ ಇರುವುದು. ಇದನ್ನು ಅರಿತು ವಿಪಕ್ಷಗಳು ರಾಜ್ಯದ ಅಭಿವೃದ್ದಿಯ ವಿಚಾರ ಚರ್ಚೆ ಮಾಡಿ ಎಂದರು.

    First published: