ಯಡಿಯೂರಪ್ಪ ಅವರೇ‌ ಮುಂದಿನ ಮೂರು ವರ್ಷಕ್ಕೂ ಮುಖ್ಯಮಂತ್ರಿ: ಲಕ್ಷ್ಮಣ ಸವದಿ ಸ್ಪಷ್ಟನೆ

ಸಾರಿಗೆ ಇಲಾಖೆಯ ಕೆಲಸಗಳ ನಿಮಿತ್ತ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್ ಅವರನ್ನು ಭೇಟಿಯಾಗಲು ದೆಹಲಿಗೆ ಬಂದಿದ್ದೆ.‌ ಇದನ್ನು ಕಾರ್ಯಕರ್ತರು ತಪ್ಪಾಗಿ ಭಾವಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಬೇರೆಯದೇ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ ಎಂದು ಲಕ್ಷ್ಮಣ್‌ ಸವದಿ ತಿಳಿಸಿದ್ದಾರೆ.

ಡಿಸಿಎಂ ಲಕ್ಷ್ಮಣ ಸವದಿ.

ಡಿಸಿಎಂ ಲಕ್ಷ್ಮಣ ಸವದಿ.

  • Share this:
ನವದೆಹಲಿ: ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಯಾವ ಬದಲಾವಣೆಯೂ ಇಲ್ಲ, ಬಿಎಸ್‌ ಯಡಿಯೂರಪ್ಪನವರೇ ನಮಗೆ ಮುಂದಿನ ಮೂರು ವರ್ಷಕ್ಕೂ ಮುಖ್ಯಮಂತ್ರಿ ಎಂದು ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಕೆಲ ದಿನಗಳಿಂದ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರವಾಗಿ ವ್ಯಾಪಕ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸಾಮಾಜಿಕ‌ ಜಾಲತಾಣಗಳಲ್ಲಿ ಲಕ್ಷ್ಮಣ ಸವದಿ ಅವರನ್ನು ಬಿಂಬಿಸಲಾಗುತ್ತಿದೆ. ಹೀಗಾಗಿ ಈ ಕುರಿತು ಇಂದು ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, "ತಾವು ರಾಜ್ಯಪಾಲ ವಜೂಬಾಯಿ ವಾಲಾ ಅವರನ್ನು ಭೇಟಿಯಾಗಿದ್ದು ಮತ್ತು ದೆಹಲಿಗೆ ಬಂದಿದ್ದು ಎರಡೂ ಕೂಡ ಕಾಕತಾಳೀಯ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿದ್ದೇನೆ. ಸಾರಿಗೆ ಇಲಾಖೆಯ ಕೆಲಸಗಳ ನಿಮಿತ್ತ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್ ಅವರನ್ನು ಭೇಟಿಯಾಗಲು ದೆಹಲಿಗೆ ಬಂದಿದ್ದೆ.‌ ಇದನ್ನು ಕಾರ್ಯಕರ್ತರು ತಪ್ಪಾಗಿ ಭಾವಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಬೇರೆಯದೇ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ. ಇದನ್ನು ಆಧರಿಸಿ ಮಾಧ್ಯಮಗಳು ಕೂಡ ವರದಿ ಮಾಡಿವೆ.

ಇದನ್ನೂ ಓದಿ : ಶಾಲಾ ಪಠ್ಯಗಳನ್ನು ಕೇಸರೀಕರಣಗೊಳಿಸಿ ಬಿಜೆಪಿ ಗುಪ್ತ ಅಜೆಂಡಾವನ್ನು ಅನುಷ್ಠಾನಗೊಳಿಸಿದೆ; ಸಿದ್ದರಾಮಯ್ಯ

ಆದರೆ ನಾನು ರಾಜ್ಯಪಾಲರನ್ನು ಭೇಟಿಯಾಗಿದ್ದು ಅವರ ಆರೋಗ್ಯ ವಿಚಾರಿಸಲು. ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ. ಇದಲ್ಲದೆ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಸಿಹಿ ಕೊಟ್ಟು ಅಭಿನಂದನೆ ಸಲ್ಲಿಸಿದ್ದೇನೆ. ಯಾವುದೇ ರೀತಿಯ ರಾಜಕೀಯ ಚರ್ಚೆ ಮಾಡಿಲ್ಲ. ಅಲ್ಲದೆ, ಮುಂದಿನ ಮೂರು ವರ್ಷವೂ ಯಡಿಯೂರಪ್ಪನವರೇ ನಮ್ಮ ಸಿಎಂ" ಎಂದು ಹೇಳುವ ಮೂಲಕ ಎಲ್ಲಾ ವಿವಾದಗಳಿಗೂ ಊಹಾಪೋಹಗಳಿಗೂ ತೆರೆ ಎಳೆದಿದ್ದಾರೆ.
Published by:MAshok Kumar
First published: