B.S Yediyurappa Letter: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿಡಬೇಡಿ; CM ಬೊಮ್ಮಾಯಿಗೆ ಪತ್ರ ಬರೆದ BSY

ಶಿವಮೊಗ್ಗದ  ಹೊಸ ವಿಮಾನ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸಿದ್ದೀರಿ. ತಮ್ಮ ಈ ವಿಶೇಷವಾದ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು. ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ. ಆದ್ರಿಂದ, ತಮ್ಮ ಈ ನಿರ್ಧಾರವನ್ನು ಪುನರ್‌ ಪರಿಶೀಲಿಸಿ ಎಂದು ಬಿ.ಎಸ್​ ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ

ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ

  • Share this:
ಬೆಂಗಳೂರು (ಏ.24): ಶಿವಮೊಗ್ಗ (Shivamogga) ವಿಮಾನ ನಿಲ್ದಾಣಕ್ಕೆ (Airport) ಮಾಜಿ ಸಿಎಂ ಯಡಿಯೂರಪ್ಪ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಮಾಜಿ ಸಿಎಂ ಯಡಿಯೂರಪ್ಪ ಪತ್ರ (Letter) ಬರೆದಿದ್ದಾರೆ. ನನ್ನ ಹೆಸರಿಡುವ ನಿರ್ಧಾರವನ್ನು ಪುನರ್​ ಪರಿಶೀಲಿಸಿ, ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿಡೋದು ಬೇಡ, ವಿಮಾನ ನಿಲ್ದಾಣ ನಿರ್ಮಾಣ ಶಿವಮೊಗ್ಗದ ಬಹುದಿನಗಳ ಕನಸಾಗಿತ್ತು, ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗ್ತಿರೋ ವಿಮಾನ ನಿಲ್ದಾಣದ ಕಾಮಗಾರಿಯನ್ನು ತಾವು ಇತ್ತೀಚಿಗೆ ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು (Constraction) ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದಗಳು, ಆದ್ರೆ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿಡೋದು ಬೇಡ ಎಂದು ಪತ್ರದ ಮೂಲಕ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ನಿಮ್ಮ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು

ಶಿವಮೊಗ್ಗದ  ಹೊಸ ವಿಮಾನ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸಿದ್ದೀರಿ. ತಮ್ಮ ಈ ವಿಶೇಷವಾದ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸಂಘಸಂಸ್ಥೆಗಳು ಹಾಗೂ ಎಲ್ಲ ಮುಖಂಡರುಗಳಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ.

ನಿರ್ಧಾರವನ್ನ ಪುನರ್‌ ಪರಿಶೀಲಿಸಿ

ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು. ಈ ಹಿನ್ನೆಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ. ಆದುದರಿಂದ, ತಮ್ಮ ಈ ನಿರ್ಧಾರವನ್ನು ಪುನರ್‌ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವಂತೆ ಪತ್ರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Pramod Muthalik: ಅಕ್ಷಯ ತೃತೀಯಕ್ಕೆ ಹಿಂದೂಗಳ ಜ್ಯುವೆಲ್ಲರಿ ಶಾಪ್​ನಲ್ಲೇ ಚಿನ್ನ ಖರೀದಿಸಿ; ಪ್ರಮೋದ್ ಮುತಾಲಿಕ್ ಕರೆ

ಕಾಂಗ್ರೆಸ್​ ನಾಯಕರ ವಿರೋಧ

ಶಿವಮೊಗ್ಗದಲ್ಲಿ ನಿರ್ಮಾಣ ಆಗುತ್ತಿರುವ ನೂತನ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೆಸರಿಡುವ ನಿರ್ಧಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಹೆಸರನ್ನು ಇಡುತ್ತಿರುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕುರ್ಚಿ ಕಸರತ್ತಿನ ರಾಜಕಾರಣ ಎಂದು ಕಾಂಗ್ರೆಸ್ ದೂರಿದೆ.

‘ಶಿವಮೊಗ್ಗ ಸಾಧಕರು ಸರ್ಕಾರಕ್ಕೆ ನೆನಪಾಗಿಲ್ಲ’

"ಕುವೆಂಪು, ಜಿ ಎಸ್ ಶಿವರುದ್ರಪ್ಪ, ಯು.ಆರ್ ಅನಂತಮೂರ್ತಿ, ಶಾಂತವೇರಿ ಗೋಪಾಲಗೌಡ, ಶಿವಪ್ಪ ನಾಯಕ, ಅಕ್ಕಮಹಾದೇವಿ, ಕೆಳದಿ ಚೆನ್ನಮ್ಮರಂತಹ ಸಾಧಕರು ಹಾಗೂ ಐತಿಹಾಸಿಕ ವ್ಯಕ್ತಿಗಳಿದ್ದರೂ ಸರ್ಕಾರಕ್ಕೆ ಅವರ ನೆನಪಾಗಲಿಲ್ಲವೇ?," ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ್ದ ಸಿಎಂ

ಶಿವಮೊಗ್ಗದಲ್ಲಿ ಏಪ್ರಿಲ್ 20ರಂದು ನೂತನ ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದರು. ಇದೇ ಡಿಸೆಂಬರ್ ತಿಂಗಳಲ್ಲಿ ನೂತನ ವಿಮಾನ ನಿಲ್ದಾಣವು ಉದ್ಘಾಟನೆಗೆ ಸಜ್ಜಾಗಲಿದೆ. ಎಲ್ಲಾ ಕಾಮಗಾರಿಗಳನ್ನು ಜೊತೆಯಾಗಿ ನಿರ್ವಹಿಸಿ ಲೋಕಾರ್ಪಣೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: Operation Lotus: ರಾಜ್ಯದಲ್ಲಿ ಆಪರೇಷನ್ ಕಮಲದ ಸುಳಿವು ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ Nalin Kumar Kateel

ಕೇಂದ್ರ ವಿಮಾನಯಾನ ಸಚಿವರಿಗೆ ಪ್ರಸ್ತಾವನೆ ಕಳುಹಿಸಿ ಅನುಮೋದನೆ ಪಡೆದ ಕೂಡಲೇ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಹೆಸರನ್ನು ನಾಮಕರಣ ಮಾಡಲು ಆದೇಶ ಪಡೆದುಕೊಳ್ಳುತ್ತೇವೆ. ಉಡಾನ್ ಯೋಜನೆಯಡಿ ಕಾಮಗಾರಿಯಲ್ಲಿ ಕೈಗೊಂಡಿದ್ದು, ವಿಮಾನ ನಿಲ್ದಾಣ ಪ್ರಾಧಿಕಾರದ ಅನುಮತಿ ಪಡೆದುಕೊಳ್ಳಲಾಗುವುದು. ಎಟಿಸಿ ಪರಿಕರಗಳನ್ನು ಅಳವಡಿಸಿ, ಸೌಲಭ್ಯ ನಿರ್ಮಿಸಲಾಗುವುದು ಎಂದು ಸಿಎಂ ತಿಳಿಸಿದ್ದರು.
Published by:Pavana HS
First published: