ಜಿಲ್ಲಾ ಪಂಚಾಯತ್​ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ನಿರ್ಧಾರ

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್​ ಮಾಜಿ ಸಚಿವ ವಿನಯ್ ಕುಲಕರ್ಣಿ ಹೆಸರು ಕೂಡಾ ತಳಕು ಹಾಕಿಕೊಂಡಿತ್ತು. ಈ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಯೋಗೇಶ ಗೌಡ ಅವರ ಸಹೋದರ ಗುರುನಾಥ ಗೌಡ ಹೈಕೋರ್ಟ್ ಮೊರೆ ಹೋಗಿದ್ದರು.

ಮೃತ ಯೋಗೇಶ್ ಗೌಡ

ಮೃತ ಯೋಗೇಶ್ ಗೌಡ

  • News18
  • Last Updated :
  • Share this:
ಬೆಂಗಳೂರು (ಸೆ.06): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಲು ನಿರ್ಧರಿಸಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಯೋಗೇಶ್​ಗೌಡ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು. ಆ ಬಳಿಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಅಂತಿಮ ನಿರ್ಧಾರ ಮಾಡಿದರು.

ಏನಿದು ಯೋಗೇಶ್​ ಗೌಡ ಹತ್ಯೆ ಪ್ರಕರಣ?

ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಅವರನ್ನು 2016ರ ಜೂನ್ 15 ರಂದು ಸಪ್ತಾಪುರದ ಉದಯ್ ಜಿಮ್  ಬಳಿ ಹತ್ಯೆ ಮಾಡಲಾಗಿತ್ತು. ಕಾರಿನಲ್ಲಿ ಜಿಮ್ ಗೆ ಬಂದ ಯೋಗೇಶ ಗೌಡ ಪೇಪರ್ ಓದುತ್ತಾ ಕುಳಿತುಕೊಂಡ ಸಮಯದಲ್ಲಿ ನಾಲ್ವರು ದುಷ್ಕರ್ಮಿಗಳು ದಾಳಿ ನಡೆಸಿದರು. ತಕ್ಷಣ ಓಡಿ ಹೋಗಲು ಯತ್ನಿಸಿದಾಗ ಬಲಗೈಗೆ ಮಚ್ಚಿನಿಂದ ಕೊಚ್ಚಿದ್ದರು. ನಂತರ ತಮ್ಮ ಜಿಮ್ ಒಳಗೆ ಓಡಿದ ಯೋಗೇಶನನ್ನು ಬೆನ್ನತ್ತಿದ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ, ಭೀಕರವಾಗಿ ಕೊಲೆಗೈದಿದ್ದರು.

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್​ ಮಾಜಿ ಸಚಿವ ವಿನಯ್ ಕುಲಕರ್ಣಿ ಹೆಸರು ಕೂಡಾ ತಳಕು ಹಾಕಿಕೊಂಡಿತ್ತು. ಈ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಯೋಗೇಶ ಗೌಡ ಅವರ ಸಹೋದರ ಗುರುನಾಥ ಗೌಡ ಹೈಕೋರ್ಟ್ ಮೊರೆ ಹೋಗಿದ್ದರು. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಅಮಿತ್ ಶಾ ಹಾಗೂ ಯಡಿಯೂರಪ್ಪ ಅವರು ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ಭರವಸೆ ನೀಡಿದ್ದರು.

ಇದನ್ನೂ ಓದಿ : ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ನಾನು ಆರೋಪಿ ಅಲ್ಲ; ಇದೆಲ್ಲಾ ಜೋಶಿ ಕುತಂತ್ರ: ವಿನಯ್​ ಕುಲಕರ್ಣಿ

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ  ಆರು ಜನರನ್ನು ಬಂಧಿಸಲಾಗಿತ್ತು ಮಹಾಬಲೇಶ್ವರ ಅಲಿಯಾಸ್ ಮುದುಕಪ್ಪ ಹೊಂಗಲ್, ವಿಕ್ರಂ ಬಳ್ಳಾರಿ, ವಿನಾಯಕ ಕಟಗಿ, ಸಂದೀಪ್ ಅಲಿಯಾಸ್ ಸ್ಯಾಂಡಿ, ಕೀರ್ತಿಕುಮಾರ ಅವರಿಗೆ ಜಾಮೀನು ಸಿಕ್ಕಿದೆ. ಸದ್ಯ ಆರು ಜನ ಆರೋಪಿಗಳಿಗೆ ಜಾಮೀನು ಸಿಕ್ಕಿದೆ.

First published: