KS Eshwarappa ಮನೆಗೆ ಮುತ್ತಿಗೆ: ಕಾಂಗ್ರೆಸ್​ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

ಈ ಸಂಬಂಧ ನಾಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಲಿದೆ.

ಕಾಂಗ್ರೆಸ್ ಪ್ರತಿಭಟನೆ

ಕಾಂಗ್ರೆಸ್ ಪ್ರತಿಭಟನೆ

  • Share this:
    ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್​​ ಪಾಟೀಲ್ (Santosh Patil)​​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ (KS Eshwarappa) ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್​ ಆಗ್ರಹಿಸಿದೆ. ಇಂದು ಸಂಜೆ ಯುವ ಕಾಂಗ್ರೆಸ್​ ಮತ್ತು ಮಹಿಳಾ ಕಾಂಗ್ರೆಸ್​ ಕಾರ್ಯಕರ್ತರು ಈಶ್ವರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸಚಿವರ ಬಂಧನಕ್ಕೆ ಆಗ್ರಹಿಸಿದರು. ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದ ಪೊಲೀಸರು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹ್ಮದ್ ನಲಪಾಡ್  ​ ಮತ್ತು ಮಹಿಳಾ ಕಾಂಗ್ರೆಸ್​ ಅಧ್ಯಕ್ಷೆ ಪುಷ್ಪಾ ಅಮರನಾಥ್​ ಅವರನ್ನು ವಶಕ್ಕೆ ಪಡೆದರು.

    ಶಿವಾನಂದ ಸರ್ಕಲ್​ ಬಳಿಯ ಗಾಂಧಿ ಭವನದ ಈಶ್ವರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ ಯುವ ಮತ್ತು ಮಹಿಳಾ ಕಾಂಗ್ರೆಸ್​ ಘಟಕದ ಕಾರ್ಯಕರ್ತರು ಕಪ್ಪು ಮಸಿ ಬಾಟೆಲ್​ ಎಸೆದಯ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಕಾರ್ಯಕರ್ತರನ್ನು ಹೈ ಗ್ರೌಂಡ್ಸ್​ ಪೊಲೀಸರು ವಶಕ್ಕೆ ಪಡೆದರು.

    ನಾಳೆ ರಾಜ್ಯಪಾಲರಿಗೆ ದೂರು ಸಲ್ಲಿಸಲಿರುವ ಕಾಂಗ್ರೆಸ್​ ನಿಯೋಗ
    ಕಮಿಷನ್​ ಆರೋಪ ಮಾಡಿದ್ದ ಹಿಂದೂ ಕಾರ್ಯಕರ್ತರು ಸಂತೋಷ್​ ಪಾಟೀಲ್​​ ತಮ್ಮ ಸಾವಿಗೆ ಸಚಿವ ಕೆಎಸ್​ ಈಶ್ವರಪ್ಪ ಅವರೇ ಕಾರಣ ಎಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನಲೆ ಕಾಂಗ್ರೆಸ್​ ಸಚಿವರನ್ನು ಸಂಪುಟದಿಂದ ವಜಾ ಮಾಡಿ ರಾಜೀನಾಮೆಗೆ ಆಗ್ರಹಿಸಿದೆ. ಈ ಸಂಬಂಧ ನಾಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಲಿದೆ.

    ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪರನ್ನು ಸಂಪುಟದಿಂದ ವಜಾಗೊಳಿಸಬೇಕು. ಈಶ್ವರಪ್ಪ ಮೇಲೆ ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು. ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿ ನಾಳೆ ಬೆಳಗ್ಗೆ ಬೆಳಗ್ಗೆ 9 ಗಂಟೆಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಪಕ್ಷದ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಈಶ್ವರ್ ಖಂಡ್ರೆ, ಧೃವನಾರಾಯಣ್, ಸತೀಶ್ ಜಾರಕಿಹೊಳಿ ನಿಯೋಗದಿಂದ ಮನವಿ ಮಾಡಲಿದೆ

    ಇದನ್ನು ಓದಿ: ಸಂತೋಷ್​ ಪಾಟೀಲ್ ಯಾರೆಂಬುದೇ ನನಗೆ ಗೊತ್ತಿಲ್ಲ; ರಾಜೀನಾಮೆ ನೀಡಲ್ಲ ಎಂದ KS Eshwarappa

    ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಳ್ಕಾರ್​ ವಶಕ್ಕೆ

    ಗುತ್ತಿಗೇದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಕಾಂಗ್ರೆಸ್​​ ಕಾರ್ಯಕರ್ತರು ಬೆಳಗಾವಿಯಲ್ಲೂ ಪ್ರತಿಭಟನೆ ನಡೆಸಿದರು. ಈ ವೇಳೆ ಬೆಳಗಾವಿ ಖಾಸಗಿ ಹೋಟೆಲಗೆ ಮುತ್ತಿಗೆ ಯತ್ನ ನಡೆಸಲಾಗಿದೆ. ಈ ಸಂಬಂಧ ಶಾಸಕಿ ಹೆಬ್ಬಾಳ್ಕರ್ ಪುತ್ರ ಮೃನಾಲ್ ಹೆಬ್ಬಾಳ್ಕರ್ ಸೇರಿ ಕಾರ್ಯಕರ್ತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಕಾಂಗ್ರೆಸ್​ ಕಾರ್ಯಕರ್ತೆ ಆಯಿಶಾ ಸನದಿ ರಸ್ತೆಯಲ್ಲಿ ಬಿದ್ದು ಉರುಳಾಡಿದ ಘಟನೆ ನಡೆದಿದೆ.

    ಇದನ್ನು ಓದಿ: ಡೆತ್​ನೋಟ್​ಗಿಂತ ಸಾಕ್ಷಿ ಬೇಕಾ? ಕೂಡಲೇ KS Eshwarappaರನ್ನು ಬಂಧಿಸಿ; ಕಾಂಗ್ರೆಸ್​ ಆಗ್ರಹ

    ತನಿಖೆ ಆಗಬೇಕು ಎಂದ ಗೃಹ ಸಚಿವರು
    ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರ ಕುರಿತು ಶಿವಮೊಗ್ಗದಲ್ಲು ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಉಡುಪಿ ಎಸ್ ಪಿ ಜೊತೆ ಮಾತನಾಡಿದ್ದೇನೆ. ತನಿಖೆ ಆಗುತ್ತಿದೆ. ಯಾರೋ ಹೇಳಿದರು ಎಂದು ಬಂಧಿಸುವುದು ಅಥವಾ ಬಿಡುವುದು ಆಗುವುದಿಲ್ಲ. ನಿಷ್ಪಕ್ಷಪಾತವಾಗಿ ರ್ ಆಗಿ ನಡೆಯುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಅವರು ಹೇಳಿದ್ದಾರೆ. ಎಲ್ಲಾ ಆಯಾಮದಲ್ಲೂ ತನಿಖೆ ಮಾಡಬೇಕು. ತನಿಖೆ ಆಧಾರದ ಮೇಲೆ ಪೊಲೀಸರು ಕ್ರಮ ಜರುಗಿಸುತ್ತಾರೆ ಎಂದರು

    ಡೆತ್​ ನೋಟ್​ ವಿಚಾರವಾಗಿ ಮಾತನಾಡಿದ ಅವರು, ಅದರಲ್ಲಿ ಏನು ಬರೆದಿಟ್ಟಿದ್ದರು ಎಂಬುದು ಗೊತ್ತಿಲ್ಲ. ಆತ ಸೋಷಿಯಲ್ ಮೀಡಿಯಾದಲ್ಲಿ ಏನೋ ಮೆಸೇಜ್ ಕಳುಹಿಸಿದ್ದಾನೆ ಎಂಬ ದೃಷ್ಟಿಕೋನದಲ್ಲೂ ತನಿಖೆ ಮಾಡುತ್ತೇವೆ,
    Published by:Seema R
    First published: