Youth Congress Protest: ಪೊಲೀಸರನ್ನು ನೋಡಿ ಎದ್ದೂ ಬಿದ್ದು ಓಡಿದ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ! ಫುಲ್ ಟ್ರೋಲ್ ಆಯ್ತು ವಿಡಿಯೋ

ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಎದ್ದೆನೋ ಬಿದ್ದೆನೋ ಅಂತ ಓಡಿ ಹೋಗುತ್ತಿರುವ ವಿಡಿಯೋ ರೆಕಾರ್ಡ್ ಆಗಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಹರಿದಾಡುತ್ತಿದ್ದು, ಭಾರೀ ವೈರಲ್ ಆಗಿದೆ.

ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್

ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್

  • Share this:
ನವದೆಹಲಿ/ಬೆಂಗಳೂರು: ನ್ಯಾಷನಲ್ ಹೆರಾಲ್ಡ್‌ ಕೇಸ್‌ನಲ್ಲಿ (National Herald) ಜಾರಿ ನಿರ್ದೇಶನಾಲಯ (ED) ರಾಹುಲ್ ಗಾಂಧಿ (Rahul Gandhi) ಹಾಗೂ ಸೋನಿಯಾ ಗಾಂಧಿಗೆ (Sonia Gandhi) ನೋಟಿಸ್ (Notice) ಕೊಟ್ಟಿದ್ದಕ್ಕೆ ಕಾಂಗ್ರೆಸ್‌ (Congress) ಕೆಂಡಾಮಂಡಲವಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿ (New Delhi), ರಾಜ್ಯ ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ದೇಶಾದ್ಯಂತ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ (Protest) ನಡೆಸಿದ್ರು. ಬೆಂಗಳೂರಲ್ಲೂ ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್, ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಹೋರಾಟ ಮಾಡಿದರು. ಬೆಂಗಳೂರಿನ ಇಡಿ ಕಚೇರಿ (ED Office) ಮುಂದೆ ನಡೆದ ಹೋರಾಟದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು, ಕೆಪಿಸಿಸಿ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು. ಅತ್ತ ದೆಹಲಿಯಲ್ಲೂ ಪ್ರತಿಭಟನೆ ಜೋರಾಗಿತ್ತು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಅರೆಸ್ಟ್ ಮಾಡಲು ಯತ್ನಿಸಿದರು. ಆಗ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ (Youth Congress National President) ಬಿ.ವಿ. ಶ್ರೀನಿವಾಸ್ (B.V. Srinivas) ಎದ್ದೆನೋ, ಬಿದ್ದೆನೋ ಅಂತ ಓಡಿ ಹೋದ ಪ್ರಸಂಗ ಕೂಡ ಜರುಗಿತು.

ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಇಡಿ ನೋಟಿಸ್ ಕೊಟ್ಟಿರುವುದನ್ನು ವಿರೋಧಿಸಿ ದೇಶಾದ್ಯಂತ ಇಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಬೆಂಗಳೂರಲ್ಲೂ ಇಡಿ ಕಚೇರಿಗೆ ಮುತ್ತಿಗೆ ಹಾಕುವ ಯತ್ನ ನಡೆಯಿತು. ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಹೆಚ್ಚಿನ ಕಾರ್ಯಕರ್ತರು ಜಮಾಯಿಸಿದ್ದರು. ಶಾಂತಿನಗರ, ಲಾಲ್‌ಬಾಗ್, ವಿಲ್ಸನ್ ಗಾರ್ಡನ್ ಸುತ್ತಮುತ್ತಲಿನ ಏರಿಯಾಗಳಲ್ಲಿ ಸೋಮವಾರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೆಲವು ಕಾರ್ಯಕರ್ತರು ಇಡಿ ಕಚೇರಿಯೊಳಗೆ ನುಗ್ಗಲು ಪ್ರಯತ್ನ ಮಾಡಿದರು. ಕೂಡಲೇ ಪೊಲೀಸರು ಅವರನ್ನು ವಶಕ್ಕೆ ಪಡೆದರು.ಎದ್ದೆನೋ ಬಿದ್ದೆನೋ ಅಂತ ಓಡಿದ ಯೂತ್ ಕಾಂಗ್ರೆಸ್ ಅಧ್ಯಕ್ಷ

ಅತ್ತ ನವದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಜೋರಾಗಿತ್ತು. ಈ ವೇಳೆ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರನ್ನು ಪೊಲೀಸರು ವಶಕ್ಕೆ ಪಡೆಯಲು ಯತ್ನಿಸಿದ್ರು. ಇದರಿಂದ ಕಂಗಾಲಾದ ಶ್ರೀನಿವಾಸ್, ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿದ್ರು. ಕೊನೆಗೆ ತಾವು ಕುಳಿತಿದ್ದ ಕಾರಿನಿಂದ ಇಳಿದು, ಎದ್ದೆನೋ ಬಿದ್ದೆನೋ ಅಂತ ಓಡಿ ಹೋದರು.ಇನ್ನು ಪ್ರತಿಭಟನೆ ಜೋರಾಗುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ತಮ್ಮ ವಶಕ್ಕೆ ಪಡೆದರು.ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ

ಹೀಗೆ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಎದ್ದೆನೋ ಬಿದ್ದೆನೋ ಅಂತ ಓಡಿ ಹೋಗುತ್ತಿರುವ ವಿಡಿಯೋ ಮೊಬೈಲ್‌ನಲ್ಲಿ ರೆಕಾರ್ಡ್ ಆಗಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಭಾರೀ ವೈರಲ್ ಆಗಿದೆ. ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಪಲಾಯನ ವಿಡಿಯೋಗೆ ನೆಟ್ಟಿಗರು ತಮಾಷೆಯ ಕಾಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: Smriti Irani: ಗಾಂಧಿ ಫ್ಯಾಮಿಲಿಯ ಆಸ್ತಿ ಉಳಿಸಲು ಕಾಂಗ್ರೆಸ್‌ ಹೋರಾಟ! ಕೇಂದ್ರ ಸಚಿವೆ ಸ್ಮೃತಿ ಇರಾನಿ ವ್ಯಂಗ್ಯ

ಸಿದ್ದರಾಮಯ್ಯ ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗಿ

ಇನ್ನು ಬೆಂಗಳೂರಿನ ಇಡಿ ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕ ಪ್ರಿಯಾಂಕ್ ಖರ್ಗೆ, ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ನಲಪಾಡ್ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: National Herald Case: ಕೈ ಸುಡುತ್ತಿರುವುದೇಕೆ ನ್ಯಾಷನಲ್ ಹೆರಾಲ್ಡ್ ಕೇಸ್? ಅಷ್ಟಕ್ಕೂ ನೆಹರೂ ಕುಟುಂಬದ ವಿರುದ್ಧ ಏನಿದು ಆರೋಪ?

ಸಿದ್ದರಾಮಯ್ಯ ಸೇರಿ ಹಲವರು ಪೊಲೀಸ್ ವಶಕ್ಕೆ

ಕಾಂಗ್ರೆಸ್​ ಮೆರವಣಿಗೆ ಇಡಿ ಕಚೇರಿ ಸಮೀಪಿಸುತ್ತದಂತೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು. ಈ ವೇಳೆ, ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್ ಹತ್ತಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರ ಜೊತೆ ವಾಗ್ವಾದಕ್ಕಿಳಿದರು. ಈ ವೇಳೆ, ಪೊಲೀಸರು ಸಿದ್ದರಾಮಯ್ಯ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.
Published by:Annappa Achari
First published: