ಬೀದರ್: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ (Quarrel) ಅಂತ್ಯವಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ (Basavakalyana, Bidar) ತ್ರಿಪುರಾಂತ ಬಳಿ ಕೊಲೆ ನಡೆದಿದೆ. 26 ವರ್ಷದ ಆನಂದ್ ಫುಲೆ ಕೊಲೆಯಾದ ಯುವಕ. ಸೋಮವಾರ ಆನಂದ್ ಹಾಗೂ ದಿಗಂಬರ ದಾಸೊರೆ ಎಂಬವರ ನಡುವೆ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ತಿರುಗಿದ್ದರಿಂದ ಇಬ್ಬರು ಮಾರಕಾಸ್ತ್ರಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ. ತ್ರಿಪುರಾಂತ ಮುಖ್ಯ ರಸ್ತೆಯಲ್ಲಿ ಇಬ್ಬರು ಯುವಕರು ಹೊಡೆದಾಡಿಕೊಂಡಿದ್ದಾರೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಆನಂದ ಪುಲೆಯನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಥಮ ಚಿಕಿತ್ಸೆ ಬಳಿಕ ಆನಂದ್ ಪುಲೆಯನ್ನು ಸೊಲ್ಲಾಪುರದ ಉಮ್ಮರಗಾ ಅಸ್ಪತ್ರೆಗೆ ಶಿಫಾರಸ್ಸು ಮಾಡಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಆನಂದ್ ಪುಲೆ ಸಾವನ್ನಪ್ಪಿದ್ದಾನೆ. ಬಸವಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೊಲೆರೋ ವಾಹನ ಪಲ್ಟಿ, ಇಬ್ಬರ ಸಾವು
ಬೊಲೆರೋ ವಾಹನ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೇನ್ನೂರ ನಗರದ ಎನ್ ಎಚ್-4 ಹಲಗೇರಿ ಬ್ರಿಡ್ಜ್ ಬಳಿ ನಡೆದಿದೆ. ಆರು ಜನರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸವ ಚಿನ್ನಮಾರೇಪ್ಪ(34) ಹಾಗೂ ಹನುಮಂತ ಬಾಪೂಡಿ (45) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮೃತರು ಮಂತ್ರಾಲಯ ತಾಲೂಕಿನ ಮಚ್ಚಿಕೇರಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಹರಿಹರ ಕಡೆಯಿಂದ ಹಾವೇರಿ ಕಡೆ ತೆರಳುತ್ತಿದ್ದ ವಾಹನ ಪಲ್ಪಿಯಾಗಿದೆ. ಲಾರಿಯೊಂದನ್ನು ಓವರ್ಟೇಕ್ ಮಾಡುವ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ರಾಣೇಬೆನ್ನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
PSIಗೆ ಧಮ್ಕಿ, 'ಕೈ' ನಾಯಕ ಬಂಧನ
ಮಹಿಳಾ ಪೊಲೀಸ್ ಅಧಿಕಾರಿಯ ಮುಂದೆ ಹೀರೋಯಿಸಂ ತೋರಿಸಲು ಹೋದ ತುಮಕೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷನನ್ನು ಬಂಧಿಸಲಾಗಿದೆ. ಮಹಿಳಾ ಪಿಎಸ್ಐ ಜೊತೆ ಅಸಭ್ಯ ವರ್ತನೆ ತೋರಿ, ಅವಾಚ್ಯ ಪದಗಳಿಂದ ನಿಂದಿಸಿದ್ದ ಶಶಿ ಹುಲಿಕುಂಟೆಯನ್ನ ಬಂಧಿಸಲಾಗಿದೆ.
ಶಾಸಕ ಜ್ಯೋತಿ ಗಣೇಶ್ ವಿರುದ್ಧ ಪೇ ಎಂಎಲ್ಎ ಪೋಸ್ಟರ್ ಅಂಟಿಸಿದ್ದ ಪ್ರಕರಣದಲ್ಲಿ ನಾಲ್ಕು ಆರೋಪಿಗಳನ್ನು ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದರು. ಅವರನ್ನು ಬಿಡುಗಡೆ ಮಾಡುವಂತೆ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹುಲಿಕುಂಟೆ ಒತ್ತಡ ಹಾಕಿದ್ದರು. ಬಿಡುಗಡೆಗೆ ಒಪ್ಪದಿದ್ದಾಗ ದರ್ಪದಿಂದ ಮಾತನಾಡಿ, ಅಸಭ್ಯವಾಗಿ ವರ್ತಿಸಿದ್ದರು ಎನ್ನಲಾಗಿದೆ.
ತಾಯಿ-ಮಗು ಸಾವು
ವಾಟರ್ ಹೀಟರ್ ಮೈಮೇಲೆ ಬಿದ್ದು ಕರೆಂಟ್ ಶಾಕ್ನಿಂದ ತಾಯಿ ಮಗು ದುರ್ಮರಣ ಹೊಂದಿದ್ದಾರೆ. ಈ ಘಟನೆ ಹೊಸಕೋಟೆ ತಾಲೂಕಿನ ಕನಕ ನಗರದಲ್ಲಿ ನಡೆದಿದೆ.
ರಾಯಚೂರು ಮೂಲದ ಜ್ಯೋತಿ ಮತ್ತು ಮಗ ಜಯಾನಂದ್ ಮೃತ ದುರ್ದೈವಿಗಳಾಗಿದ್ದಾರೆ. ನಿನ್ನೆ ಮಧ್ಯಾಹ್ನ ನಡೆದಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನೀರು ಕಾಯಿಸಲು ತಾಯಿ ಹೀಟರ್ ಹಾಕಿದ್ದಾಗ ಮಗು ಹೋಗಿ ಬಕೆಟ್ ಕೆಳಕ್ಕೆ ಬಿದ್ದು ದುರ್ಘಟನೆ ನಡೆದಿದೆ. ಮಗನನ್ನ ರಕ್ಷಿಸಲು ಹೋಗಿ ತಾಯಿಯೂ ಸಾವನ್ನಪ್ಪಿದ್ದಾರೆ.
ಕೌಟುಂಬಿಕ ಕಲಹಕ್ಕೆ ನೊಂದು ಸೂಸೈಡ್
ಗೃಹಿಣಿ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ನಗರದ ಹನುಮಂತಪುರ 4ನೇ ಕ್ರಾಸ್ನಲ್ಲಿ ನಡೆದಿದೆ. ಕೌಟುಂಬಿಕ ಕಲಹಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: Bengaluru: ಕುಡಿತ ಬಿಡುವಂತೆ ಬೈದು ಬುದ್ಧಿ ಹೇಳಿದ್ದ ಹೆಂಡತಿ; ರಸ್ತೆ ಪಕ್ಕದ ಮರಕ್ಕೆ ನೇಣು ಬಿಗಿದುಕೊಂಡ ಗಂಡ!
ಮೋನಿಕಾ ಗಂಡನ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೋಷಕರು ಆರೋಪಿಸಿದ್ದಾರೆ. ಮೃತ ಮೋನಿಕಾ ಗುಬ್ಬಿ ತಾಲೂಕಿನ ಮದನಘಟ್ಟ ಗ್ರಾಮದ ನಿವಾಸಿಯಾಗಿದ್ದು, ಮೂರು ವರ್ಷಗಳ ಹಿಂದೆ ತುಮಕೂರು ಮೂಲದ ಅಭಿರಾಮ್ ಎಂಬಾತನನ್ನ ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದರು.
ತುಮಕೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ಓದ್ತಿದ್ದ ಮೊನಿಕಾ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮೊನಿಕಾ ಗಂಡನನ್ನ ತುಮಕೂರು ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ