ಜನಪ್ರಿಯ ಸ್ಮಾರ್ಟ್ಫೋನ್ (Smartphone) ಕಂಪೆನಿಯಾಗಿರುವ ಸ್ಯಾಮ್ಸಂಗ್ ಇದುವರೆಗೆ ಹಲವಾರು ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಮೂಲಕ ಎಲ್ಲರ ಗಮನಸೆಳೆದಿದೆ. ಸ್ಯಾಮ್ಸಂಗ್ (Samsung) ಇದೀಗ ಭಾರತದ ಮಾರುಕಟ್ಟೆಗೆ ಬರೋಬ್ಬರಿ ಎರಡು ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಸುದ್ದಿಯೊಂದನ್ನು ನೀಡಿದೆ. ಸ್ಯಾಮ್ಸಂಗ್ ಕಂಪೆನಿ ಈ ಹಿಂದೆಯೂ ತನ್ನ ಕಂಪೆನಿಯಿಂದ 5ಜಿ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡುವುದಾಗಿ ಹೇಳಿತ್ತು. ಅದೇ ರೀತಿ ಆ ಸ್ಮಾರ್ಟ್ಫೋನ್ಗಳು ಈಗ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಲ್ಲಿವೆ. ಇದೀಗ ಸ್ಯಾಮ್ಸಂಗ್ ಕಂಪೆನಿ ಮಾರುಕಟ್ಟೆಯಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ ಎ14 (Samsung Galaxy A14 5G) ಮತ್ತು ಸ್ಯಾಮ್ಸಂಗ್ ಗ್ಯಾಲಕ್ಸಿ ಎ23 (Samsung Galaxy A23 5G) ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ಫೋನ್ಗಳೆರಡೂ 5ಜಿ ನೆಟ್ವರ್ಕ್ ಅನ್ನು ಬೆಂಬಲಿಸಲಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ ಎ14 ಮತ್ತು ಸ್ಯಾಮ್ಸಂಗ್ ಗ್ಯಾಲಕ್ಸಿ ಎ23 ಸ್ಮಾರ್ಟ್ಫೋನ್ಗಳನ್ನು ಕೆಲವೇ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಇದೀಗ ಈ ಸ್ಮಾರ್ಟ್ಫೋನ್ನ ಫೀಚರ್ಸ್ ಸೋರಿಕೆಯಾಗಿದ್ದು ಇದರ ಕಂಪ್ಲೀಟ್ ಮಾಹಿತಿ ಇಲ್ಲಿದೆ
ಸ್ಯಾಮ್ಸಂಗ್ ಗ್ಯಾಲಕ್ಸಿ ಎ14 5ಜಿ ಸ್ಮಾರ್ಟ್ಫೋನ್
ಸ್ಯಾಮ್ಸಂಗ್ ಗ್ಯಾಲಕ್ಸಿ ಎ14 5ಜಿ ಸ್ಮಾರ್ಟ್ಫೋನ್ನ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದು 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದರ ಒಟ್ಟು ಸೈಜ್ 20:9 ರಚನೆಯ ಅನುಪಾತವನ್ನು ಹೊಂದಿದೆ.
ಹಾಗೆಯೇ ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಓಎಸ್ ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಕಂಪೆನಿ ತಿಳಿಸಿದೆ. ಜೊತೆಗೆ 6 ಜಿಬಿ ರ್ಯಾಮ್ ಮತ್ತು 128 ಜಿಬಿ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಎಸ್ಡಿ ಕಾರ್ಡ್ ಮೂಲಕ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವನ್ನು 1ಟಿಬಿ ವರೆಗೂ ವಿಸ್ತರಿಸಬಹುದಾದ ಆಯ್ಕೆ ಹೊಂದಿದೆ.
ಕ್ಯಾಮೆರಾ ಫೀಚರ್ಸ್
ಸ್ಯಾಮ್ಸಂಗ್ ಗ್ಯಾಲಕ್ಸಿ ಎ14 5ಜಿ ಸ್ಮಾರ್ಟ್ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಬ್ಯಾಟರಿ ಫೀಚರ್ಸ್
ಜೊತೆಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ 4G LTE, ವೈ-ಫೈ, ಬ್ಲೂಟೂತ್, ಯುಎಸ್ಬಿ ಟೈಪ್-ಸಿ, ಮತ್ತು 3.5mm ಹೆಡ್ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ ಎ23 ಸ್ಮಾರ್ಟ್ಫೋನ್
ನೂತನ ಗ್ಯಾಲಕ್ಸಿ ಎ23 ಸ್ಮಾರ್ಟ್ಫೋನ್ 6.6 ಇಂಚಿನ ಫುಲ್ ಹೆಚ್ಡಿ ಪ್ಲಸ್ ಡಿಸ್ಪ್ಲೇ ಹೊಂದಿದ್ದು, ಇನ್ನು ಡಿಸ್ಪ್ಲೇ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಪಡೆದಿದ್ದು, ವಾಟರ್ಡ್ರಾಪ್ ನಾಚ್ ರಚನೆ ಪಡೆದಿದೆ.
ಇದನ್ನೂ ಓದಿ: ಅಮೆಜಾನ್ ರಿಪಬ್ಲಿಕ್ ಡೇ ಸೇಲ್; ಆ್ಯಪಲ್ ಕಂಪೆನಿಯ ಈ ಡಿವೈಸ್ ಮೇಲೆ ಭರ್ಜರಿ ರಿಯಾಯಿತಿ
ಕ್ಯಾಮೆರಾ ಫೀಚರ್ಸ್
ಇನ್ನು ಈ ಸ್ಮಾರ್ಟ್ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ನಲ್ಲಿದೆ. ಹಾಗೆಯೇ ಈ ಫೋನ್ ಸ್ನ್ಯಾಪ್ಡ್ರಾಗನ್ 695 ಪ್ರೊಸೆಸರ್ ಪವರ್ ಅನ್ನು ಪಡೆದಿದೆ. ಜೊತೆಗೆ ಈ ಸ್ಮಾರ್ಟ್ಫೋನ್ 5000mAh ಬ್ಯಾಟರಿ ಬ್ಯಾಕ್ಅಪ್ ಅನ್ನು ಹೊಂದಿದ್ದು, ಈ ಬ್ಯಾಟರಿಯು 25W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯವನ್ನು ಒಳಗೊಂಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ