ದೇಶದಲ್ಲಿ ಟೆಲಿಕಾಂ ವಲಯದಲ್ಲಿ ಜಿಯೋ (Jio), ಏರ್ಟೆಲ್ (Airtel), ವೊಡಫೋನ್ ಐಡಿಯಾ (Vodafone Idea) ಕಂಪೆನಿಗಳು ವ್ಯಾಪಕವಾಗಿ ಬೆಳವಣಿಗೆಯಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಈ ಕಂಪೆನಿಗಳು ಬಿಡುಗಡೆ ಮಾಡಿರುವಂತಹ ರೀಚಾರ್ಜ್ ಪ್ಲ್ಯಾನ್ಗಳು ಅಂತಾನೇ ಹೇಳ್ಬಹುದು. ಇದುವರೆಗೆ ಕಂಪೆನಿಗಳು ಪ್ಲ್ಯಾನಗಳಲ್ಲಿ ಹೆಚ್ಚಿನದು ಹೆಚ್ಚಿನ ಡೇಟಾ, ವ್ಯಾಲಿಡಿಯಲ್ಲಿ ಏರಿಕೆ ಈ ರಿತಿಯ ಸೌಲಭ್ಯವನ್ನು ನೀಡುತ್ತದೆ. ಟೆಲಿಕಾಂ ಮಾರುಕಟ್ಟೆಯಲ್ಲಿ ಜಿಯೋ ಮತ್ತು ಏರ್ಟೆಲ್ ಒಂದಕ್ಕೊಂದು ಪೈಪೋಟಿ ನೀಡುವ ದೃಷ್ಟಿಯಿಂದ ಹೊಸ ಹೊಸ ರೀಚಾರ್ಜ್ ಯೋಜನೆಗಳನ್ನು ತನ್ನ ಗ್ರಾಹಕರಿಗೆ ಪರಿಚಯಿಸುತ್ತಾ ಬಂದಿದೆ.
ಇದೀಗ ಏರ್ಟೆಲ್ ಮತ್ತು ಜಿಯೋ ಕಂಪೆನಿಗಳಿಗೆ ಸ್ಪರ್ಧೆಯನ್ನು ನೀಡುತ್ತಲೇ ಬರುತ್ತಿರುವ ವೊಡಫೋನ್ ಐಡಿಯಾ ಕಂಪೆನಿ ತನ್ನ ಗ್ರಾಹಕರಿಗೆ ಹೊಸ ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಅನ್ನು ಬಿಡುಗಡೆ ಮಾಡಿದೆ. ಈ ಮೂಲಕ ಗ್ರಾಹಕರು ಹೆಚ್ಚುವರಿ ಡೇಟಾ ಸೌಲಭ್ಯವನ್ನು ಪಡೆಯುತ್ತಾರೆ.
ವೊಡಫೋನ್ ಐಡಿಯಾದ 901 ರೂಪಾಯಿ ಪ್ರೀಪೇಯ್ಡ್ ಪ್ಲ್ಯಾನ್
ವೊಡಫೋನ್ ಐಡಿಯಾದ 901 ರೂಪಾಯಿ ಪ್ರಿಪೇಯ್ಡ್ ಪ್ಲಾನ್ನಲ್ಲಿ ಗ್ರಾಹಕರು ಒಂದು ವರ್ಷದವರೆಗೆ ಡಿಸ್ನಿ + ಹಾಟ್ಸ್ಟಾರ್ ಚಂದಾದಾರಿಕೆಯನ್ನು ಪಡೆಯಬಹುದಾಗಿದೆ. ಇದು ಅನ್ಲಿಮಿಟೆಡ್ ಕಾಲ್ ಮಾಡುವ ಸೌಲಭ್ಯ, ದಿನನಿತ್ಯ 3ಜಿಬಿ ಡೇಟಾ ಹಾಗೂ ಡೈಲಿ 100 ಎಸ್ಎಮ್ಎಸ್ ಅನ್ನು ಉಚಿತವಾಗಿ ಮಾಡಬಹುದಾಗಿದೆ.
ಇದನ್ನೂ ಓದಿ: ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್; ಸ್ಮಾರ್ಟ್ಟಿವಿಗಳ ಮೇಲೆ ಬಿಗ್ ಡಿಸ್ಕೌಂಟ್
ಇನ್ನು ಈ ಪ್ರಿಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿ ಯನ್ನುಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರು ಹೆಚ್ಚುವರಿಯಾಗಿ 48ಜಿಬಿ ಡೇಟಾ ಸೌಲಭ್ಯ ಪಡೆಯಬಹುದು. ಜೊತೆಗೆ ವಿಐ ಆ್ಯಪ್ಸ್ ಹಾಗೂ ಡೇಟಾ ರೋಲ್ ಓವರ್ ಸೌಲಭ್ಯ ಸಿಗಲಿದೆ.
ವೊಡಫೋನ್ ಐಡಿಯಾದ 3999 ರೂಪಾಯಿ ಪ್ರೀಪೇಯ್ಡ್ ಪ್ಲ್ಯಾನ್
ವೊಡಫೋನ್ ಐಡಿಯಾ ಟೆಲಿಕಾಂನ ಈ 3999 ರೂಪಾಯಿಯ ಪ್ಲ್ಯಾನಿನಲ್ಲಿ ಪ್ರತಿದಿನ 2 ಜಿಬಿ ಡೇಟಾ ಪ್ರಯೋಜನ ಗ್ರಾಹಕರಿಗೆ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕ್ಗೆ ಅನ್ಲಿಮಿಟೆಡ್ ಉಚಿತ ಕಾಲ್ ಮಾಡುವ ಪ್ರಯೋಜನ ಸಿಗಲಿದೆ.
ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಅನ್ನು ಸಹ ಮಾಡಬಹುದಾಗಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 75ಜಿಬಿ ಡೇಟಾ ಪ್ರಯೋಜನ ಸಿಗಲಿದೆ.
ವೊಡಫೋನ್ ಐಡಿಯಾದ 2899 ರೂಪಾಯಿ ಪ್ರೀಪೇಯ್ಡ್ ಪ್ಲ್ಯಾನ್
ವೊಡಫೋನ್ ಐಡಿಯಾ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರು ಪ್ರತಿದಿನ 1.5 ಜಿಬಿ ಡೇಟಾ ಪ್ರಯೋಜನಗಳನ್ನು ಪಡೆಯುತ್ತಾರೆ. ವಿಐ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನ್ಲಿಮಿಟೆಡ್ ಉಚಿತ ವಾಯ್ಸ್ ಕಾಲ್ ಸೌಲಭ್ಯ ದೊರೆಯುತ್ತದೆ.
ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಅನ್ನು ಉಚಿತವಾಗಿ ಮಾಡಬಹುದು. ಇದರೊಂದಿಗೆ ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 75 ಜಿಬಿ ಡೇಟಾ ಪ್ರಯೋಜನ ಸಿಗಲಿದ್ದು, ಜೊತೆಗೆ ವೀಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಸಿಗುತ್ತದೆ.
ವೊಡಫೋನ್ ಐಡಿಯಾದ 1499 ರೂಪಾಯಿ ಪ್ರೀಪೇಯ್ಡ್ ಪ್ಲ್ಯಾನ್
ವೊಡಫೋನ್ ಐಡಿಯಾ ಟೆಲಿಕಾಂನ ಈ ಪ್ಲ್ಯಾನ್ನಲ್ಲಿ ಪ್ರತಿದಿನ 1.5ಜಿಬಿ ಡೇಟಾ ಪ್ರಯೋಜನ ದೊರೆಯುತ್ತದೆ. ಈ ಯೋಜನೆ ಮೂಲಕ ಯಾವುದೇ ನೆಟವರ್ಕ್ಗೆ ಅನ್ಲಿಮಿಟೆಡ್ ಕಾಲ್ ಮಾಡುವ ಸೌಲಭ್ಯ ಸಿಗಲಿದೆ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಮಾಡುವ ಸೌಲಭ್ಯವನ್ನೂ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 50ಜಿಬಿ ಡೇಟಾ ಪ್ರಯೋಜನ ಸಿಗಲಿದ್ದು, ಜೊತೆಗೆ ವೀಕೆಂಡ್ ಡೇಟಾ ರೋಲ್ ಓವರ್ ಆಯ್ಕೆ ಕೂಡ ಇದರಲ್ಲಿ ಲಭ್ಯವಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ