• ಹೋಂ
  • »
  • ನ್ಯೂಸ್
  • »
  • ಮೊಬೈಲ್- ಟೆಕ್
  • »
  • Smartphones Offer: ಹಿಂದೆಂದೂ ನೋಡಿರದ ಆಫರ್​ ಇದೀಗ ಗೂಗಲ್​ ಪಿಕ್ಸೆಲ್​ ಸ್ಮಾರ್ಟ್​​ಫೋನ್​ನಲ್ಲಿದೆ! ಇಂದೇ ಖರೀದಿಸಿ

Smartphones Offer: ಹಿಂದೆಂದೂ ನೋಡಿರದ ಆಫರ್​ ಇದೀಗ ಗೂಗಲ್​ ಪಿಕ್ಸೆಲ್​ ಸ್ಮಾರ್ಟ್​​ಫೋನ್​ನಲ್ಲಿದೆ! ಇಂದೇ ಖರೀದಿಸಿ

ಗೂಗಲ್‌ ಪಿಕ್ಸೆಲ್ 6 ಪ್ರೋ ಸ್ಮಾರ್ಟ್‌ಫೋನ್‌

ಗೂಗಲ್‌ ಪಿಕ್ಸೆಲ್ 6 ಪ್ರೋ ಸ್ಮಾರ್ಟ್‌ಫೋನ್‌

ಜನಪ್ರಿಯ ಇಕಾಮರ್ಸ್​ ವೆಬ್​ಸೈಟ್​ ಆಗಿರುವ ಅಮೆಜಾನ್​ ಗೂಗಲ್​ ಪಿಕ್ಸೆಲ್ 6 ಪ್ರೋ 5ಜಿ ಸ್ಮಾರ್ಟ್​​ಫೋನ್​ ಮೇಲೆ ಭರ್ಜರಿ ಆಫರ್ಸ್ ಅನ್ನು ಘೋಸಿಸಿದೆ.

  • Share this:

    ಸ್ಮಾರ್ಟ್​​ಫೋನ್​ ಕಂಪೆನಿಗಳಲ್ಲಿ (Smartphone Company) ದಿನ ಕಳೆದಂತೆ ಹೊಸ ಹೊಸ ಸ್ಮಾರ್ಟ್​​ಫೋನ್​ಗಳು ಬಿಡುಗಡೆಯಾಗುತ್ತಲೇ ಇದೆ. ಈ ಮಧ್ಯೆ ಹೊಸ ಸ್ಮಾರ್ಟ್​​ಫೋನ್​ಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಂತೆ ಜನಪ್ರಿಯ ಇಕಾಮರ್ಸ್​ ಕಂಪೆನಿಗಳು ಆ ಸ್ಮಾರ್ಟ್​ಫೋನ್​ಗಳ ಮೇಲೆ ಭರ್ಜರಿ ರಿಯಾಯಿತಿಯನ್ನು (Offers) ಘೋಷಿಸಿದೆ. ಟೆಕ್​ ದೈತ್ಯ ಎಂದು ಗುರುತಿಸಿಕೊಂಡಿರುವ ಗೂಗಲ್ (Google)​ ಇತ್ತೀಚೆಗೆ ತನ್ನ ಕಂಪೆನಿಯಿಂದ ಹೊಸ ಸ್ಮಾರ್ಟ್​​ಫೋನ್​ ಒಂದನ್ನು ಮಾರುಕಟ್ಟೆಗೆ ಪರಿಚಯಿಸಿತ್ತು. ಇದೀಗ ಈ ಸ್ಮಾರ್ಟ್​​ಫೋನ್​ ಭಾರೀ ಅಗ್ಗದ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಇನ್ನು ಹೊಸ ಸ್ಮಾರ್ಟ್​ಫೋನ್ ಖರೀದಿ ಮಾಡುವ ಪ್ಲ್ಯಾನ್​​ನಲ್ಲಿದ್ದವರಿಗೆ ಈ ಸಮಯ ಉತ್ತಮವಾಗಿದೆ.


    ಜನಪ್ರಿಯ ಇಕಾಮರ್ಸ್​ ವೆಬ್​ಸೈಟ್​ ಆಗಿರುವ ಅಮೆಜಾನ್​ ಗೂಗಲ್​ ಪಿಕ್ಸೆಲ್ 6 ಪ್ರೋ 5ಜಿ ಸ್ಮಾರ್ಟ್​​ಫೋನ್​ ಮೇಲೆ ಭರ್ಜರಿ ಆಫರ್ಸ್ ಅನ್ನು ಘೋಸಿಸಿದೆ.


    ಏನೆಲ್ಲಾ ಆಫರ್ಸ್​ ಲಭ್ಯವಿದೆ?


    ಇ ಕಾಮರ್ಸ್‌ ತಾಣ ಅಮೆಜಾನ್‌ನಲ್ಲಿ ಗೂಗಲ್‌ ಪಿಕ್ಸಲ್‌ 6 ಪ್ರೋ 5ಜಿ ಸ್ಮಾರ್ಟ್‌ಫೋನ್‌ 12ಜಿಬಿ ರ್‍ಯಾಮ್ ಮತ್ತು 128ಜಿಬಿ ಸ್ಟೋರೇಜ್‌ ಹೊಂದಿದ ವೇರಿಯಂಟ್‌ 49,999 ರೂಪಾಯಿಗಳ ಆಫರ್​​ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಇನ್ನು ಈ ಫೋನ್ ನ ಮೂಲ ದರ 1,09,000 ರೂಪಾಯಿ ಆಗಿದೆ. ಇದಲ್ಲದೇ ಈ ಸ್ಮಾರ್ಟ್​​ಫೋನ್ ಮೇಲೆ ವಿಶೇಷವಾಗಿ ಎಕ್ಸ್‌ಚೇಂಜ್ ಆಫರ್‌, ಬ್ಯಾಂಕ್‌ ಕೊಡುಗೆ ಹಾಗೂ ನೋ ಕಾಸ್ಟ್‌ ಇಎಮ್‌ಐ ಆಯ್ಕೆ ಸಹ ಲಭ್ಯವಿದೆ.


    ಗೂಗಲ್‌ ಪಿಕ್ಸಲ್‌ 6 ಪ್ರೋ 5ಜಿ ಸ್ಮಾರ್ಟ್‌ಫೋನ್‌ ಫೀಚರ್ಸ್​


    ಗೂಗಲ್‌ ಪಿಕ್ಸಲ್‌ 6 ಪ್ರೋ 5ಜಿ ಸ್ಮಾರ್ಟ್‌ಫೋನ್‌ 1,440 x 3,120 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7-ಇಂಚಿನ ಎಲ್‌ಟಿಪಿಒ ಡಿಸ್‌ಪ್ಲೇyನ್ನು ಹೊಂದಿದೆ. ಈ ಡಿಸ್‌ಪ್ಲೇ 10Hz ನಿಂದ 120Hz ವರೆಗಿನ ವೇರಿಯಬಲ್ ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಇನ್‌ ಡಿಸ್‌ಪ್ಲೇ ವೆನಿಲ್ಲಾ ಮಾದರಿಯನ್ನು ಹೊಂದಿದೆ. ಇನ್ನು ಈ ಡಿಸ್​ಪ್ಲೇನ ರಕ್ಷಣೆಗಾಗಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಅನ್ನು ಆ್ಯಡ್​ ಮಾಡಲಾಗಿದೆ.


    ಇದನ್ನೂ ಓದಿ: ಮೊಬೈಲ್​​ ಸ್ಟೋರೇಜ್​ ಸಾಕಾಗದೆ, ಮೆಮೊರಿ ಕಾರ್ಡ್​ ಬಳಸ್ತಿದ್ದೀರಾ? ಇಲ್ಲಿದೆ ನೋಡಿ ಕ್ಲಿಯರ್ ಮಾಡಲು ಟಿಪ್ಸ್​


    ಕ್ಯಾಮೆರಾ ಸೆಟಪ್​


    ಗೂಗಲ್‌ ಪಿಕ್ಸೆಲ್‌ 6 ಪ್ರೋ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಟೆಲಿಫೋಟೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಹೊಂದಿದೆ.


    ಗೂಗಲ್‌ ಪಿಕ್ಸೆಲ್ 6 ಪ್ರೋ ಸ್ಮಾರ್ಟ್‌ಫೋನ್‌


    ಪ್ರೊಸೆಸರ್ ಸಾಮರ್ಥ್ಯ


    ಗೂಗಲ್‌ ಪಿಕ್ಸೆಲ್‌ 6 ಪ್ರೋ ಸ್ಮಾರ್ಟ್‌ಫೋನ್‌ ಗೂಗಲ್ ಟೆನ್ಸರ್ ಎಸ್​ಓಸಿ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಟೆನ್ಸರ್ 20 ಕೋರ್ ಜಿಪಿಯು ಹೊಂದಿದ್ದು, ಉತ್ತಮ ಕಾರ್ಯ ಕ್ಷಮತೆ ಮತ್ತು ದಕ್ಷತೆಗಾಗಿ ವಿನ್ಯಾಸಗೊಳಿಸಲಾಗಿದ್ದು, ಗೂಗಲ್ ಅಭಿವೃದ್ಧಿ ಪಡಿಸಿದ ಟೆನ್ಸರ್ ಚಿಪ್ ಸಿಪಿಯು ಕಾರ್ಯಕ್ಷಮತೆಯನ್ನು 80X ಹೆಚ್ಚಿಸುತ್ತದೆ. ಹಾಗೆಯೇ 12 ಜಿಬಿ ರ್‍ಯಾಮ್ ಮತ್ತು 512 ಜಿಬಿ ಡೀಫಾಲ್ಟ್ ಸ್ಟೋರೇಜ್ ಅನ್ನು ಹೊಂದಿದೆ.




    ಬ್ಯಾಟರಿ ಫೀಚರ್ಸ್​


    ಗೂಗಲ್‌ ಪಿಕ್ಸೆಲ್ 6 ಪ್ರೋ ಸ್ಮಾರ್ಟ್‌ಫೋನ್‌ 5,003mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯು 30W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 23W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಗೂಗಲ್‌ ಪಿಕ್ಸೆಲ್‌ 6 ಪ್ರೋ ಸ್ಮಾರ್ಟ್‌ಫೋನ್‌ ಇತ್ತೀಚಿನ ಗೂಗಲ್ ಫೋನ್‌ಗಳ ಲಾಕ್‌ಸ್ಕ್ರೀನ್‌ನಿಂದ ನೇರವಾಗಿ ಸ್ನ್ಯಾಪ್‌ಚಾಟ್ ಕ್ಯಾಮೆರಾವನ್ನು ಬಳಕೆದಾರರಿಗೆ ಪ್ರವೇಶಿಸಲು 'ಕ್ವಿಕ್ ಟ್ಯಾಪ್ ಟು ಸ್ನ್ಯಾಪ್' ಎಂಬ ಫೀಚರ್ಸ್‌ ಅನ್ನು ನೀಡಲಾಗಿದೆ. ಇದು ಲಾಕ್‌ಸ್ಕ್ರೀನ್‌ನಿಂದ ಸ್ನ್ಯಾಪ್‌ಚಾಟ್ ಕ್ಯಾಮೆರಾವನ್ನು ತೆರೆಯಲು ಬಳಕೆದಾರರಿಗೆ ಅವಕಾಶ ನೀಡಲಿದೆ.

    Published by:Prajwal B
    First published: