ಸ್ಮಾರ್ಟ್ಫೋನ್ಗಳಿಗೆ (Smartphones) ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಹಳಷ್ಟು ಬೇಡಿಕೆ. ಸ್ಮಾರ್ಟ್ಫೋನ್ಗಳು ಪ್ರತಿಯೊಬ್ಬರ ಜೀವನದ ಪ್ರಮುಖ ಸಾಧನವಾಗಿಬಿಟ್ಟಿದೆ. ಟೆಕ್ನಾಲಜಿ ಎಷ್ಟು ಬದಲಾಗಿದೆಯೆಂದರೆ ನಾವೆಲ್ಲರೂ ಈಗ ಕ್ಷಣಮಾತ್ರದಲ್ಲಿ ಯಾವುದೇ ಸಂದೇಶವನ್ನು, ಬ್ಯಾಂಕ್ ವಹಿವಾಟನ್ನು ಸ್ಮಾರ್ಟ್ಫೋನ್ನಲ್ಲೇ ಮಾಡಬಹುದಾಗಿದೆ. ಈ ಸಾಧನಕ್ಕೆ ಬೇಡಿಕೆ ಹೆಚ್ಚಾದಂತೆ ಕಂಪೆನಿಗಳು ಸಹ ಮಾರುಕಟ್ಟೆಗೆ ಹೊಸ ಹೊಸ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸುತ್ತಿದೆ. ಸ್ಮಾರ್ಟ್‌ಫೋನ್ ವಲಯದಲ್ಲಿ ಜನಪ್ರಿಯ ಬ್ರ್ಯಾಂಡ್‌ಗಳ ಪೈಕಿ ಒನ್‌ಪ್ಲಸ್ (Oneplus Company) ಸಹ ಒಂದಾಗಿದೆ. ಒನ್‌ಪ್ಲಸ್ ಸಂಸ್ಥೆಯ ಕೆಲವು ಫ್ಲ್ಯಾಗ್‌ಶಿಪ್ ಮಾದರಿಯ ಫೋನ್‌ಗಳು ಈಗಾಗಲೇ ಗ್ರಾಹಕರಿಗೆ ಇಷ್ಟವಾಗಿವೆ. ಆ ಪೈಕಿ ಒನ್‌ಪ್ಲಸ್ 10 ಪ್ರೊ 5G (OnePlus 10 Pro 5G) ಸ್ಮಾರ್ಟ್‌ಫೋನ್ ಹೆಚ್ಚು ಗಮನ ಸೆಳೆದಿದೆ.
ಒನ್‌ಪ್ಲಸ್ ಕಂಪೆನಿಯಿಂದ ಇತ್ತೀಚೆಗೆ ಬಿಡುಗೆಯಾದ ಸ್ಮಾರ್ಟ್‌ಫೋನ್ ಎಂದರೆ ಅದು ಒನ್‌ಪ್ಲಸ್ 10 ಪ್ರೋ 5ಜಿ ಸ್ಮಾರ್ಟ್‌ಫೋನ್. ಇದೀಗ ಈ ಸ್ಮಾರ್ಟ್‌ಫೋನ್ ಖರೀದಿ ಮಾಡುವವರಿಗೆ ಕಂಪೆನಿ ಗುಡ್ ನ್ಯೂಸ್ ನೀಡಿದೆ. ಈ ಮೂಲಕ ಅಮೆಜಾನ್ನಲ್ಲಿ ಭಾರೀ ಅಗ್ಗದ ಬೆಲೆಯಲ್ಲಿ ಈ ಸ್ಮಾರ್ಟ್‌ಫೋನ್ ಅನ್ನು ಹೊಂದಬಹುದು.
ಆಫರ್ಸ್ ಏನೆಲ್ಲಾ ಇದೆ?
ಒನ್‌ಪ್ಲಸ್ 10 ಪ್ರೋ 5ಜಿ 8ಜಿಬಿ ರ್‍ಯಾಮ್ ಮತ್ತು 128ಜಿಬಿ ಸ್ಟೋರೇಜ್ ವೇರಿಯಂಟ್ ಫೋನ್ 66,999 ರೂಪಾಯಿಗಳ ಪ್ರೈಸ್ ಟ್ಯಾಗ್ ನಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದ್ರೆ, ಸದ್ಯ ಅಮೆಜಾನ್ ಇ ಕಾಮರ್ಸ್‌ನಲ್ಲಿ ಡಿಸ್ಕೌಂಟ್ ಈ ಸ್ಮಾರ್ಟ್‌ಫೋನ್ ಮೇಲೆ ವಿಶೇಷ ರಿಯಾಯಿತಿ ಘೋಷಿಸಿದ್ದು, ಈ ಮೂಲಕ ಒನ್‌ಪ್ಲಸ್ 10 ಪ್ರೋ 5ಜಿ ಫೋನ್ ಅನ್ನು 60,999 ರೂಪಾಯಿಗಳ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಮೇಲೆ ಎಕ್ಸ್‌ಚೇಂಜ್ ಆಫರ್, ಬ್ಯಾಂಕ್ ಆಫರ್‌ಗಳು ಸಹ ಗ್ರಾಹಕರಿಗೆ ಲಭ್ಯವಾಗಲಿವೆ.
ಇದನ್ನೂ ಓದಿ: ಫೈರ್ಬೋಲ್ಟ್ ಕಂಪೆನಿಯ ಹೊಸ ಸ್ಮಾರ್ಟ್‌ಫೋನ್ ಲಾಂಚ್! ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸೋದು ಗ್ಯಾರಂಟಿ
ಯಾವೆಲ್ಲಾ ಬಣ್ಣಗಳಲ್ಲಿ ಲಭ್ಯ?
ಒನ್‌ಪ್ಲಸ್ 10 ಪ್ರೋ 5ಜಿ ಸ್ಮಾರ್ಟ್‌ಫೋನ್ 8ಜಿಬಿ ರ್‍ಯಾಮ್ ಮತ್ತು 128ಜಿಬಿ ಮತ್ತು 12ಜಿಬಿ ರ್‍ಯಾಮ್ ಮತ್ತು 256ಜಿಬಿ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದ್ದು, ಬ್ಲ್ಯಾಕ್ ಹಾಗೂ ಎಮರಾಲ್ಡ್ ಫಾರೆಸ್ಟ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ.
ಒನ್‌ಪ್ಲಸ್ 10 ಪ್ರೋ 5ಜಿ ಸ್ಮಾರ್ಟ್‌ಫೋನ್ ಫೀಚರ್ಸ್
ಒನ್‌ಪ್ಲಸ್ 10 ಪ್ರೋ ಸ್ಮಾರ್ಟ್‌ಫೋನ್ 1,440 x 3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ OLED ಅಮೋಲ್ಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಎರಡನೇ ತಲೆಮಾರಿನ ಲೋ-ಟೆಂಪ್‌ರೇಚರ್ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) ತಂತ್ರಜ್ಞಾನವನ್ನು ಆಧರಿಸಿದೆ. ಇದು 1Hz ಮತ್ತು 120Hz ನಡುವೆ ಡೈನಾಮಿಕ್ ರಿಫ್ರೆಶ್ ರೇಟ್ ನೀಡಲಿದೆ. ಈ ಡಿಸ್‌ಪ್ಲೇ sRGB ಬಣ್ಣದ ಸ್ಕ್ರೀನ್ ಸಹ ಬೆಂಬಲಿಸುತ್ತದೆ. ಇನ್ನು ಈ ಡಿಸ್ಪ್ಲೇಯ ರಕ್ಷಣೆಗಾಗಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಅನ್ನು ಆ್ಯಡ್ ಮಾಡಲಾಗಿದೆ.
ಕ್ಯಾಮೆರಾ ಸೆಟಪ್
ಒನ್‌ಪ್ಲಸ್ 10 ಪ್ರೋ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX789 ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX615 ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಪ್ರೊಸೆಸರ್ ಸಾಮರ್ಥ್ಯ
ಒನ್‌ಪ್ಲಸ್ 10 ಪ್ರೋ ಸ್ಮಾರ್ಟ್‌ಫೋನ್ ಆಕ್ಟಾಕೋರ್ ಸ್ನಾಪ್‌ಡ್ರಾಗನ್ 8 ಜೆನ್ 1 ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಆಕ್ಸಿಜನ್ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12ಜಿಬಿ ರ್‍ಯಾಮ್ ಮತ್ತು 256ಜಿಬಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.
ಬ್ಯಾಟರಿ ಫೀಚರ್ಸ್
ಒನ್‌ಪ್ಲಸ್ 10 ಪ್ರೋ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಹೊಂದಿದೆ. ಈ ಬ್ಯಾಟರಿಯು 80W ಸೂಪರ್‌ವೂಕ್ ವೈರ್ಡ್ ಚಾರ್ಜಿಂಗ್ ಮತ್ತು 50W ಏರ್‌ವೂಕ್ ವೈರ್ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ, 4ಜಿ ಎಲ್ಟಿಇ, ವೈಫೈ 6, ಬ್ಲೂಟೂತ್ v5.2, ಜಿಪಿಎಸ್ ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ