ಸ್ಮಾರ್ಟ್ಫೋನ್ (Smartphone) ಈಗಿನ ದಿನಗಳಲ್ಲಿ ಪ್ರತಿಯೊಬ್ಬರ ಅಗತ್ಯ ಸಾಧನವಾಗಿಬಿಟ್ಟಿದೆ. ಈ ಅಂಶಗಳನ್ನೇ ಮೊಬೈಲ್ ಕಂಪೆನಿಗಳು (Mobile Company) ಸಹ ಮಾರುಕಟ್ಟೆಗೆ ಹೊಸ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುತ್ತಿದೆ. ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಎಲ್ಲಾ ರೀತಿಯ ಸ್ಮಾರ್ಟ್ಫೋನ್ಗಳನ್ನು ನಾವು ನೋಡಬಹುದಾಗಿದೆ. ಆದರೆ ಈ ಸ್ಮಾರ್ಟ್ಫೋನ್ಗಳೆಲ್ಲವೂ ಬೇರೆ ಬೇರೆ ಮಾದರಿಗಳಲ್ಲಿ ವಿನ್ಯಾಸವಾಗಿರುತ್ತದೆ. ಕೆಲ ಗ್ರಾಹಕರು ಕಡಿಮೆ ಬೆಲೆಗೆ ಸ್ಮಾರ್ಟ್ಫೋನ್ಗಳನ್ನು ಖರೀದಿ- ಮಾಡಿದರೆ, ಇನ್ನೂ ಕೆಲ ಗ್ರಾಹಕರು ದುಬಾರಿ ಬೆಲೆಯ ಪ್ರೀಮಿಯಮ್ ಸ್ಮಾರ್ಟ್ಫೋನ್ಗಳನ್ನು (Premium Smartphones) ಖರೀದಿ ಮಾಡಲು ಮುಂದಾಗುತ್ತಾರೆ. ದುಬಾರಿ ಬೆಲೆಯ ಸ್ಮಾರ್ಟ್ಫೋನ್ಗಳನ್ನೇ ಮಾರುಕಟ್ಟೆ ಪರಿಚಯಿಸುವ ಮೂಲಕ ಯಶಸ್ವಿ ಕಂಡಂತಹ ಅನೇಕ ಕಂಪೆನಿಗಳಿವೆ.
ದುಬಾರಿ ಬೆಲೆಯ ಸ್ಮಾರ್ಟ್ಫೋನ್ಗಳು ವೇಗದ ಪ್ರೊಸೆಸರ್, ಫಾಸ್ಟ್ ಚಾರ್ಜಿಂಗ್ ಬ್ಯಾಟರಿ, ಹೆಚ್ಚಿನ ಸ್ಟೋರೇಜ್ ಆಯ್ಕೆ ಹೀಗೆ ಇನ್ನೂ ಹಲವಾರು ಗುಣಮಟ್ಟದ ಫೀಚರ್ಸ್ಗಳನ್ನು ಹೊಂದಿರುತ್ತದೆ. ಹಾಗಿದ್ರೆ 60 ಸಾವಿರ ರೂಪಾಯಿಯ ಆಸುಪಾಸಿನಲ್ಲಿ ಸ್ಮಾರ್ಟ್ಫೋನ್ ಅನ್ನು ಖರೀದಿ ಮಾಡುವ ಪ್ಲ್ಯಾನ್ನಲ್ಲಿದ್ದವರಿಗೆ ಇಲ್ಲಿದೆ ಆ ಮೊಬೈಲ್ಗಳ ಪಟ್ಟಿ.
ಒನ್ಪ್ಲಸ್ 10ಟಿ ಸ್ಮಾರ್ಟ್ಫೋನ್
ಒನ್ಪ್ಲಸ್ 10ಟಿ ಸ್ಮಾರ್ಟ್ಫೋನ್ ಅನ್ನು ಮಾರುಕಟ್ಟೆಯಲ್ಲಿ ಖರೀದಿಸುವ ಪ್ಲ್ಯಾನ್ನಲ್ಲಿದ್ದವರಿ ಇದು 3 ಸ್ಟೋರೇಜ್ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ ಮೂಲ ಸ್ಟೋರೇಜ್ ಆಯ್ಕೆಯ ಸ್ಮಾರ್ಟ್ಫೋನ್ ಅನ್ನು 54,999 ರೂಪಾಯಿಗಳಿಗೆ ಖರೀದಿ ಮಾಡಬಹುದಾಗಿದೆ. ಇನ್ನು ಈ ಸ್ಮಾರ್ಟ್ಫೋನ್ 6.7 ಇಂಚಿನ ಹೆಚ್ಡಿ ಪ್ಲಸ್ ಅಮೋಲ್ಡ್ ಡಿಸ್ಪ್ಲೇಯನ್ನು ಹೊಂದಿದೆ.
ಇನ್ನು ಈ ಡಿಸ್ಪ್ಲೇ 2,412x1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಬಲವನ್ನು ಪಡೆದುಕೊಂಡಿದೆ. ಇದು 120hz ಸ್ಕ್ರೀನ್ ರಿಫ್ರೆಶ್ ರೇಟ್ ಅನ್ನು ಸಹ ನೀಡಲಿದೆ. ಈ ಫೋನ್ ಕ್ವಾಲ್ಕಮ್ ಸ್ನಾಪ್ಡ್ರಾಗನ್ 8+ ಜೆನ್ 1 ಎಸ್ಓಸಿ ಪ್ರೊಸೆಸರ್ ನಲ್ಲಿ ಕಾರ್ಯ ನಿರ್ವಹಿಸಲಿದೆ. ಜೊತೆಗೆ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ರನ್ ಆಗಲಿದೆ.
ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್ಫೋನ್
ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್ಫೋನ್ ಸಹ 60 ಸಾವಿರ ರೂಪಾಯಿಗಳ ಆಸುಪಾಸಿನಲ್ಲಿರು ಸ್ಮಾರ್ಟ್ಫೋನ್ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್ಫೋನ್ ಆರಂಭಿಕ ಬೆಲೆಯೇ 40,100 ರೂಪಾಯಿಗಳಿಂದ ಪ್ರಾರಂಭವಾಗುತ್ತದೆ. ಇನ್ನು ಈ ಸ್ಮಾರ್ಟ್ಫೋನ್ನ ಫೀಚರ್ಸ್ ಬಗ್ಗೆ ನೋಡುವುದಾದರೆ, ಇದು 6.32 ಇಂಚಿನ ಫುಲ್ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ.
ಇದು ಆಕ್ಟಾ-ಕೋರ್ ಟೆನ್ಸರ್ ಜಿ2 ಎಸ್ಓಸಿ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8ಜಿಬಿ ರ್ಯಾಮ್ ಮತ್ತು 256ಜಿಬಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.
ವಿವೋ ಎಕ್ಸ್80 ಸ್ಮಾರ್ಟ್ಫೋನ್
ವಿವೋ ಎಕ್ಸ್80 ಸ್ಮಾರ್ಟ್ಫೋನ್ನ ಆರಂಭಿಕ ಬೆಲೆಯೇ 54,999 ರೂಪಾಯಿಯಿಂದ ಪ್ರಾರಂಭವಾಗುತ್ತದೆ. ಇನ್ನು ಈ ಸ್ಮಾರ್ಟ್ಫೋನ್ ಅನ್ನು ಖರೀದಿ ಮಾಡುವವರು ಅಮೆಜಾನ್, ಫ್ಲಿಪ್ಕಾರ್ಟ್, ವಿವೋನ ಅಧಿಕೃತ ವೆಬ್ಸೈಟ್ನಲ್ಲಿ ಖರೀದಿ ಮಾಡಬಹುದಾಗಿದೆ. ಇನ್ನು ಈ ಸ್ಮಾರ್ಟ್ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಹೆಚ್ಡಿ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 9000 ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಇದನ್ನೂ ಓದಿ: ಸ್ಮಾರ್ಟ್ವಾಚ್ಗಳಲ್ಲಿರುವ ಯಾರಿಗೂ ತಿಳಿಯದ ಫೀಚರ್ಸ್ಗಳಿವು! ಹೇಗಿದೆ ನೋಡಿ
ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX866 RGBW ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್ಫೋನ್ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ