ಸ್ಮಾರ್ಟ್ಫೋನ್ಗಳು (Smartphones) ಮಾರುಕಟ್ಟೆಗೆ ಬಹಳಷ್ಟು ಬಿಡುಗಡೆಯಾಗಿದೆ. ಅದೇ ರೀತಿ ಟೆಕ್ ಕಂಪೆನಿಗಳು ಸಹ ಹೊಸ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕ ಗ್ರಾಹಕರನ್ನು ತನ್ನತ್ತ ಆಕರ್ಷಿಸುವ ಪ್ರಯತ್ನವನ್ನು ಮಾಡುತ್ತಿರುತ್ತದೆ. ಜನಪ್ರಿಯ ಸ್ಮಾರ್ಟ್ಫೋನ್ ಕಂಪೆನಿಯಾಗಿರುವ ಐಕ್ಯೂ ಇತ್ತೀಚೆಗೆ ಮಾರುಕಟ್ಟೆಗೆ ಐಕ್ಯೂ ನಿಯೋ 6 (IQoo Neo 6) ಎಂಬ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿತ್ತು. ಇದೀಗ ಈ ಸ್ಮಾರ್ಟ್ಫೋನ್ ಮೇಲೆ ಅಮೆಜಾನ್ (Amazon) ಬಿಗ್ ಡಿಸ್ಕೌಂಟ್ ಅನ್ನು ಘೋಷಿಸಿದೆ. ಈ ಮೂಲಕ ಐಕ್ಯೂ ನಿಯೋ 6 ಸ್ಮಾರ್ಟ್ಫೋನ್ ಅನ್ನು ಖರೀದಿ ಮಾಡುವವರು ಅಗ್ಗದ ಬೆಲೆಯೊಂದಿಗೆ ಪಡೆಯಬಹುದಾಗಿದೆ.
ಜನಪ್ರಿಯ ಇಕಾಮರ್ಸ್ ಕಂಪೆನಿಯಾಗಿರುವ ಅಮೆಜಾನ್ ಇದೀಗ ಐಕ್ಯೂ ನಿಯೋ 6 ಸ್ಮಾರ್ಟ್ಫೋನ್ ಅನ್ನು ಭಾರೀ ಅಗ್ಗದ ಬೆಲೆಯಲ್ಲಿ ಮಾರಾಟ ಮಾಡುತ್ತಿದೆ. ಹೊಸ ಸ್ಮಾರ್ಟ್ಫೋನ್ ಖರೀದಿಸುವ ಪ್ಲ್ಯಾನ್ನಲ್ಲಿರುವವರಿಗೆ ಇದು ಉತ್ತಮ ಆಯ್ಕೆಯಾಗಿದೆ.
ಏನೆಲ್ಲಾ ಆಫರ್ಸ್ ಲಭ್ಯ ಇದೆ?
ಐಕ್ಯೂ ಕಂಪೆನಿಯ ಐಕ್ಯೂ ನಿಯೋ 6 ಸ್ಮಾರ್ಟ್ಫೋನ್ ಅನ್ನು ಅಮೆಜಾನ್ ವೆಬ್ಸೈಟ್ನಲ್ಲಿ 27,999 ರೂಪಾಯಿ ಪ್ರೈಸ್ ಟ್ಯಾಗ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಇನ್ನು ಈ ಸ್ಮಾರ್ಟ್ಫೋನ್ ಅನ್ನು ಎಸ್ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸುವುದಾದರೆ 2,250 ರೂಪಾಯಿಗಳಷ್ಟು ರಿಯಾಯಿತಿಯನ್ನು ಪಡೆಯಬಹುದಾಗಿದೆ.
ಇನ್ನು ಈ ಸ್ಮಾರ್ಟ್ಫೋನ್ ಮೇಲೆ ಎಕ್ಸ್ಚೇಂಜ್ ಆಫರ್ ಸಹ ಲಭ್ಯವಿದೆ. ಈ ಆಫರ್ ಮೂಲಕ ನಿಮ್ಮ ಹಳೆಯ ಫೋನ್ ಅನ್ನು ಕೊಟ್ಟು ಖರೀದಿ ಮಾಡುವುದಾದರೆ ಸುಮಾರು 18 ಸಾವಿರ ರೂಪಾಯಿಗಳಷ್ಟು ರಿಯಾಯಿತಿಯನ್ನು ಪಡೆಯಬಹುದು. ಆದರೆ ಈ ಆಫರ್ ಬೆಲೆ ನೀವು ವಿನಿಮಯ ಮಾಡಲು ಬಯಸುವ ಸ್ಮಾರ್ಟ್ಫೋನ್ನ ಮಾದರಿ ಮತ್ತು ಗುಣಮಟ್ಟದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ.
ಐಕ್ಯೂ ನಿಯೋ 6 ಸ್ಮಾರ್ಟ್ಫೋನ್ನ ಫೀಚರ್ಸ್
ಐಕ್ಯೂ ನಿಯೋ 6 ಸ್ಮಾರ್ಟ್ಫೋನ್ 6.62 ಇಂಚಿನ ಫುಲ್ ಹೆಚ್ಡಿ ಪ್ಲಸ್ ಇ4 ಅಮೋಲ್ಡ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು, 360Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ.
ಕ್ಯಾಮೆರಾ ಫೀಚರ್ಸ್
ಐಕ್ಯೂ ನಿಯೋ 6 ಸ್ಮಾರ್ಟ್ಫೋನ್ನ ಕ್ಯಾಮೆರಾ ಸೆಟಪ್ ಬಗ್ಗೆ ಹೇಳುವುದಾದರೆ, ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್ಸಂಗ್ ಐಸೋಸೆಲ್ GW1P ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್ ಆ್ಯಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ ಸೆಲ್ಫಿಗಾಗಿ ಮತ್ತು ವಿಡಿಯೋ ಕಾಲ್ಗಳಿಗಾಗಿ 16 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಪ್ರೊಸೆಸರ್ ಸಾಮರ್ಥ್ಯ
ಐಕ್ಯೂ ನಿಯೋ 6 ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 870 ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಈ ಪ್ರೊಸೆಸರ್ ಆಂಡ್ರಾಯ್ಡ್ 12 ಆಪರೇಟಿಂಗ್ ಸಿಸ್ಟಮ್ನೊಂದಿಗೆ ಕಾರ್ಯನಿರ್ವಹಿಸುತ್ತದೆ.
ಇನ್ನು ಈ ಸ್ಮಾರ್ಟ್ಫೋನ್ ಸ್ಟೋರೇಜ್ ಸಾಮರ್ಥ್ಯದ ಬಗ್ಗೆ ಮಾತನಾಡುವುದಾದರೆ, ಇದು 12ಜಿಬಿ ರ್ಯಾಮ್ ಮತ್ತು 256 ಜಿಬಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.
ಬ್ಯಾಟರಿ ಫೀಚರ್ಸ್
ಐಕ್ಯೂ ನಿಯೋ 6 ಸ್ಮಾರ್ಟ್ಫೋನ್ 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಒಳಗೊಂಡಿದೆ. ಈ ಬ್ಯಾಟರಿಯು 80W ಫ್ಲ್ಯಾಶ್ ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಹೊಂದಿದೆ.
ಇದನ್ನೂ ಓದಿ: ವಿಶ್ವದ ಅತಿ ದೊಡ್ಡ ಪವರ್ ಬ್ಯಾಂಕ್! ಒಂದೇ ಸಲ 5 ಸಾವಿರ ಸ್ಮಾರ್ಟ್ಫೋನ್ ಜಾರ್ಜ್ ಮಾಡ್ಬಹುದು!
ಇತರೆ ಫೀಚರ್ಸ್
ಈ ಸ್ಮಾರ್ಟ್ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ, 4ಜಿ ಎಲ್ಟಿಇ, ವೈಫೈ, ಬ್ಲೂಟೂತ್ 5.2, ಜಿಪಿಎಸ್ ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸಾರ್ ಜೊತೆಗೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಮ್ಯಾಗ್ನೆಟೋಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ