ಸ್ಮಾರ್ಟ್ಫೋನ್ಗಳೆಂದರೆ (Smartphones) ಯಾರಿಗೆ ಇಷ್ಟ ಇಲ್ಲ ಹೇಳಿ. ಇತ್ತೀಚೆಗೆ ಯಾರ ಕೈ ನೋಡಿದ್ರೂ ಮೊಬೈಲ್ ಎಂಬ ಸಾಧನ ಇದ್ದೇ ಇದೆ. ಅದೇ ರೀತಿ ಈ ಟೆಕ್ ಕಂಪೆನಿಗಳು ಸಹ ಮಾರುಕಟ್ಟೆಗೆ ಹೊಸ ಹೊಸ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಪರಿಚಯ ಮಾಡುತ್ತಿರುತ್ತದೆ. ಇದಕ್ಕೆ ತಕ್ಕಂತೆ ಗ್ರಾಹಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಇಕಾಮರ್ಸ್ ವೆಬ್ಸೈಟ್ಗಳಾದ ಅಮೆಜಾನ್, ಫ್ಲಿಪ್ಕಾರ್ಟ್ (Flipkart) ಏನಾದರು ಆಫರ್ ಸೇಲ್ಗಳನ್ನು ಆರಂಭ ಮಾಡುತ್ತಾ ಇರುತ್ತದೆ. ಇದೀಗ ಅಮೆಜಾನ್ ರಿಪಬ್ಲಿಕ್ ಡೇ ಪ್ರಯುಕ್ತ ಅಮೆಜಾನ್ ರಿಪಬ್ಲಿಕ್ ಡೇ ಸೇಲ್ (Amazon Republic Day Sale) ಎಂಬ ಮಾರಾಟವನ್ನು ಪ್ರಾಂಭಿಸಿದೆ. ಈ ಮೇಳದಲ್ಲಿ ಜನಪ್ರಿಯ ಮೊಬೈಲ್ ಬ್ರ್ಯಾಂಡ್ಗಳ ಕೆಲ ಸ್ಮಾರ್ಟ್ಫೋನ್ಗಳ ಮೇಲೆ ಭರ್ಜರಿ ಡಿಸ್ಕೌಂಟ್ಗಳು ಲಭ್ಯ ಇದೆ.
ಅಮೆಜಾನ್ ರಿಪಬ್ಲಿಕ್ ಡೇ ಸೇಲ್ ಇದೀಗ ಚಾಲ್ತಿಯಲ್ಲಿದ್ದು, ಈ ಸೇಲ್ ಇದೇ ಜನವರಿ 20 ರವರೆಗೆ ಇರುತ್ತದೆ. ಅಮೆಜಾನ್ನ ಆಫರ್ ಸೇಲ್ನಲ್ಲಿ ರೆಡ್ಮಿ, ಶಿಯೋಮಿ, ಸ್ಯಾಮ್ಸಂಗ್, ಪೋಕೋ, ಐಫೋನ್ ಸೇರಿದಂತೆ ಇತರೆ ಫೋನ್ಗಳನ್ನು ಸಹ ಆಕರ್ಷಕ ರಿಯಾಯಿತಿಯಲ್ಲಿ ಖರೀದಿ ಮಾಡಬಹುದು.
ಶಿಯೋಮಿ 11 ಲೈಟ್ ಎನ್ಇ 5ಜಿ ಸ್ಮಾರ್ಟ್ಫೋನ್
ಶಿಯೋಮಿ 11 ಲೈಟ್ ಎನ್ಇ 5ಜಿ ಸ್ಮಾರ್ಟ್ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್ಡಿ + ಓಎಲ್ಇಡಿ ಡಿಸ್ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 780ಜಿ ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಈ ಫೋನ್ ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.
ಹಾಗೆಯೇ ಇದು 6 ಜಿಬಿ ರ್ಯಾಮ್ ಮತ್ತು 128 ಜಿಬಿ ಹಾಗೂ 8ಜಿಬಿ ರ್ಯಾಮ್ ಮತ್ತು 128ಜಿಬಿ ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆ ಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಕ್ಯಾಮೆರಾ ಫೀಚರ್ಸ್ನಲ್ಲಿ ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ. ಅಮೆಜಾನ್ನ ಆಫರ್ನಲ್ಲಿ ಈ ಸ್ಮಾರ್ಟ್ಫೋನ್ ಅನ್ನು ಕೇವಲ 25,999 ರೂಪಾಯಿಗೆ ಪಡೆಯಬಹುದಾಗಿದೆ.
ಒಪ್ಪೋ ಎ31 ಸ್ಮಾರ್ಟ್ಫೋನ್
ಒಪ್ಪೋ ಎ31 ಸ್ಮಾರ್ಟ್ಫೋನ್ ಮುಖ್ಯವಾಗಿ 1600 x 720 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್ಡಿ ಪ್ಲಸ್ ಡಿಸ್ಪ್ಲೇ ಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ ಪಿ35 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಇದು 4ಜಿಬಿ ರ್ಯಾಮ್ ಮತ್ತು 64 ಜಿಬಿ ವೇರಿಯಂಟ್ ಮತ್ತು 6ಜಿಬಿ ರ್ಯಾಮ್ + 128 ಜಿಬಿ ವೇರಿಯಂಟ್ ಆಯ್ಕೆಯಲ್ಲಿ ಬಿಡುಗಡೆಯಾಗಿದೆ.
ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಇದು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 12ಎಂಪಿ ಸೆನ್ಸಾರ್ನಲ್ಲಿದೆ. ಇನ್ನು ಈ ಸ್ಮಾರ್ಟ್ಫೋನ್ 4,230 mAh ಬ್ಯಾಟರಿ ಬ್ಯಾಕಪ್ ಅನ್ನು ಹೊಂದಿದೆ. ಈ ಸ್ಮಾರ್ಟ್ಫೋನ್ ಅನ್ನು ಆಫರ್ನಲ್ಲಿ 12,490 ರೂಪಾಯಿಗೆ ಖರೀದಿಸಬಹುದಾಗಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ ಎಮ್32 ಸ್ಮಾರ್ಟ್ಫೋನ್
ಸ್ಯಾಮ್ಸಂಗ್ ಗ್ಯಾಲಕ್ಸಿ ಎಮ್32 ಸ್ಮಾರ್ಟ್ಫೋನ್ನ ಫೀಚರ್ಸ್ ಬಗ್ಗೆ ಹೇಳುವುದಾದರೆ ಇದು 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲ್ಡ್ ಡಿಸ್ಪ್ಲೇ ಯನ್ನು ಒಳಗೊಂಡಿದೆ. ಹಾಗೆಯೇ ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ ಜಿ80 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಆಂಡ್ರಾಯ್ಡ್ 11 ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ.
ಹಾಗೆಯೇ ಸ್ಟೋರೇಜ್ ಆಯ್ಕೆಗಳಲ್ಲಿ ಈ ಸ್ಮಾರ್ಟ್ಫೋನ್ 6ಜಿಬಿ ರ್ಯಾಮ್ ಮತ್ತು 128ಜಿಬಿ ಇಂಟರ್ನಲ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ನಲ್ಲಿ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಿದ್ದಾರೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್ಫೋನ್ ಅನ್ನು ಆಫರ್ ಬೆಲೆಯಲ್ಲಿ 13,999 ರೂಪಾಯಿಗೆ ಖರೀದಿಸಬಹುದು.
ರೆಡ್ಮಿ ನೋಟ್ 10ಎಸ್ ಸ್ಮಾರ್ಟ್ಫೋನ್
ರೆಡ್ಮಿ ನೋಟ್ 10ಎಸ್ ಸ್ಮಾರ್ಟ್ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಅಮೋಲ್ಡ್ ಫುಲ್ ಹೆಚ್ಡಿ ಡಿಸ್ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್ಫೋನ್ ಮೀಡಿಯಾ ಟೆಕ್ ಹೆಲಿಯೊ ಜಿ95 ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಆಂಡ್ರಾಯ್ಡ್ 11 ಸಾಮರ್ಥ್ಯದೊಂದಿಗೆ ಇದು ಕಾರ್ಯನಿರ್ವಹಿಸಲಿದೆ.
ಇದನ್ನೂ ಓದಿ: Computer Mouseನ್ನು ಮೌಸ್ ಅನ್ನೋದೇಕೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ
ಹಾಗೆಯೇ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಸೆಲ್ಫಿಗಾಗಿ 13 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಿದ್ದಾರೆ. ಇನ್ನು ಈ ಸ್ಮಾರ್ಟ್ಫೋನ್ ಅನ್ನು ಅಮೆಜಾನ್ನಲ್ಲಿ ಪ್ರಸ್ತುತ 14,999 ರೂಪಾಯಿಗೆ ಖರೀದಿಸಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ