ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಸುದ್ದಿಯಲ್ಲಿರುವ ಸ್ಮಾರ್ಟ್ಫೊನ್ಗಳೆಂದರೆ ಅದು 5ಜಿ ಫೋನ್ಗಳು (5G Smartphones). ಅದೇ ರೀತಿ ಮೊಬೈಲ್ ಕಂಪನಿಗಳು ಕೂಡ ಈ ಬಾರಿ ಹಲವಾರು ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಿದೆ. ಆದರೆ ಅದರಲ್ಲಿ ಕೆಲವು 4ಜಿ ಫೋನ್ಗಳಾದರೆ ಇನ್ನು ಕೆಲವು 5ಜಿ ಸ್ಮಾರ್ಟ್ಫೋನ್ಗಳಾಗಿವೆ. ಆದರೆ ಈ ಮೊಬೈಲ್ಗಳೆಲ್ಲವೂ ಕೂಡ ಅದರದೇ ಆದಂತಹ ಫೀಚರ್ಸ್ನೊಂದಿಗೆ (Features) ಮಾರುಕಟ್ಟೆಯಲ್ಲಿ ತನ್ನದೇ ಆದ ಸ್ಥಾನವನ್ನು ಗುರುತಿಸಿಕೊಂಡಿದೆ. ಭಾರತದಲ್ಲಿ ಹಲವಾರು ದೇಶೀಯ ಮತ್ತು ವಿದೇಶೀಯ ಮೊಬೈಲ್ ಕಂಪನಿಗಳಿವೆ ಅದರಲ್ಲಿ ಸ್ಯಾಮ್ಸಂಗ್ (Samsung) ಕೂಡ ಒಂದು. ಸ್ಯಾಮ್ಸಂಗ್ ಕಂಪನಿ ಈವರೆಗೆ ಹಲವಾರು ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಿದೆ. ಆದರೆ ಈ ಬಾರಿ ಕಂಪನಿ 5ಜಿ ಸ್ಮಾರ್ಟ್ಫೋನ್ ಒಂದನ್ನು ಬಿಡುಗಡೆ ಮಾಡಿದೆ. ಇದೀಗ ಆ ಸ್ಮಾರ್ಟ್ಫೋನ್ ಅನ್ನು ಕಂಪನಿ ಭಾರೀ ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿದೆ.
ಹೌದು, ಸ್ಯಾಮ್ಸಂಗ್ ಕಂಪನಿ ಘೋಷಿಸಿರುವ ರಿಯಾಯಿತಿ ಆಫರ್ ಇದೀಗ ಸ್ಯಾಮ್ಸಂಗ್ ಗ್ಯಾಲಕ್ಸಿ ಎಮ್53 ಸ್ಮಾರ್ಟ್ಫೋನ್ ಮೇಲೆ ಇದೆ. ಇದು 5ಜಿ ಸ್ಮಾರ್ಟ್ಫೋನ್ ಆಗಿದ್ದು. ಈ ಹಿಂದೆ ಮಾರುಕಟ್ಟೆಯಲ್ಲಿ ಇದಕ್ಕೆ ಭಾರೀ ಬೇಡಿಕೆಯಿತ್ತು. ಇದೀಗ ಕಂಪನಿ ಇದರ ಮೇಲೆ ಬಂಪರ್ ಆಫರ್ ಅನ್ನು ಘೋಷಿಸಿದೆ. ಹಾಗಿದ್ರೆ ಈ ಸ್ಮಾರ್ಟ್ಫೋನ್ನ ಫೀಚರ್ಸ್ ಏನು, ಯಾವೆಲ್ಲಾ ಮಾರುಕಟ್ಟೆಯಲ್ಲಿ ಖರೀದಿಸಬಹುದು ಎಂಬುದನ್ನು ಈ ಕೆಳಗಿನ ಲೇಖನದ ಮೂಲಕ ತಿಳಿಯಿರಿ.
ಸ್ಯಾಮ್ಸಂಗ್ ಗ್ಯಾಲಕ್ಸಿ ಎಮ್53 5ಜಿ ಸ್ಮಾರ್ಟ್ಫೋನ್ ಫೀಚರ್ಸ್
ಸ್ಯಾಮ್ಸಂಗ್ ಗ್ಯಾಲಕ್ಸಿ ಎಮ್53 5ಜಿ ಸ್ಮಾರ್ಟ್ಫೋನ್ 6.7 ಇಂಚಿನ ಫುಲ್ ಹೆಚ್ಡಿ + ಇನ್ಫಿನಿಟಿ O ಸೂಪರ್ ಅಮೋಲ್ಡ್ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್ಪ್ಲೇನ ಸೇಫ್ಟಿಗಾಗಿ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಆ್ಯಡ್ ಮಾಡಲಾಗಿದೆ. ಹಾಗೆಯೇ 85.3% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ.
ಇದನ್ನೂ ಓದಿ: ಹೊಸ ವರ್ಷವನ್ನು ಗೂಗಲ್ ಡೂಡಲ್ ಮೂಲಕ ಸ್ವಾಗತಿಸಿ, ಒಮ್ಮೆ ಕ್ಲಿಕ್ ಮಾಡಿದ್ರಾಯ್ತು
ಕ್ಯಾಮೆರಾ ಫೀಚರ್ಸ್ ಹೇಗಿದೆ?
ಸ್ಯಾಮ್ಸಂಗ್ ಗ್ಯಾಲಕ್ಸಿ ಎಮ್53 5ಜಿ ಸ್ಮಾರ್ಟ್ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಜೊತೆಗೆ f/1.8 ಅಪಾರ್ಚರ್ ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಆ್ಯಂಗಲ್ ಲೆನ್ಸ್ ಅನ್ನು ಹೊಂದಿದೆ, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಿದ್ದಾರೆ.
ಬ್ಯಾಟರಿ ಫೀಚರ್ಸ್
ಸ್ಯಾಮ್ಸಂಗ್ ಗ್ಯಾಲಕ್ಸಿ ಎಮ್53 5ಜಿ ಸ್ಮಾರ್ಟ್ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಒಳಗೊಂಡಿದೆ.
ಇತರ ಫೀಚರ್ಸ್
ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ, 4ಜಿ LTE, ವೈ-ಫೈ, ಬ್ಲೂಟೂತ್ v5.2, GPS/ A-GPS ಮತ್ತು ಯುಎಸ್ಬಿ ಟೈಪ್ ಸಿ ಪೋರ್ಟ್ ಹೊಂದಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಜಿಯೋಮ್ಯಾಗ್ನೆಟಿಕ್ ಸೆನ್ಸಾರ್, ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಫಿಂಗರ್ಪ್ರಿಂಟ್ ಸೆನ್ಸಾರ್ ಈ ರೀತಿಯ ಹಲವಾರು ಫೀಚರ್ಸ್ ಅನ್ನು ಇದು ಒಳಗೊಂಡಿದೆ.
ಸ್ಟೋರೇಜ್ ಸಾಮರ್ಥ್ಯ
ಇನ್ನು ಸ್ಯಾಮ್ಸಂಗ್ ಗ್ಯಾಲಕ್ಸಿ ಎಮ್53 5ಜಿ ಸ್ಮಾರ್ಟ್ಫೋನ್ 6 ಜಿಬಿ ರ್ಯಾಮ್ ಮತ್ತು 128 ಜಿಬಿ ಹಾಗೂ 8 ಜಿಬಿ ರ್ಯಾಮ್ ಮತ್ತು 128 ಜಿಬಿ ಇಂಟರ್ನಲ್ ಸ್ಟೋರೇಜ್ ಆಯ್ಕೆಗಳಲ್ಲಿ ಮಾರುಕಟ್ಟೆಯಲ್ಲಿ ಖರೀದಿಸಬಹುದಾಗಿದೆ. ಹಾಗೂ ಈ ಸ್ಮಾರ್ಟ್ಫೋನ್ ಆಂಡ್ರಾಯ್ಡ್ 12 ಪ್ರೊಸೆಸರ್ನೊಂದಿಗೆ ಕಾರ್ಯನಿರ್ವಹಿಸುತ್ತದೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ